ಬಿಗ್ ಬಾಸ್ ಸ್ಪರ್ಧಿ ಪ್ರಗ್ನೆಂಟ್: ಮನೆಗೆ ಕಳುಹಿಸಲು ತಯಾರಿ

Public TV
1 Min Read
Ankita Lokhande 1

ನಗೆ ಪಿರಿಯಡ್ಸ್ ಆಗಿಲ್ಲ, ಗರ್ಭಿಣಿಯೇ (Pregnant) ಎಂದು ತಿಳಿದುಕೊಳ್ಳುವುದಕ್ಕಾಗಿ ರಕ್ತ ಪರೀಕ್ಷೆ ಮಾಡಿಸಿದ್ದೇನೆ. ನಾನು ಪ್ರಗ್ನೆಂಟ್ ಆಗಿದ್ದೇನೆ ದಯವಿಟ್ಟು ಮನೆಯಿಂದ ನನ್ನ ಆಚೆ ಕಳುಹಿಸಿ ಎಂದು ಹಿಂದಿ ಬಿಗ್ ಬಾಸ್  (Bigg Boss) ಸ್ಪರ್ಧಿ, ನಟಿ ಅಂಕಿತಾ ಲೋಖಂಡೆ (Ankita Lokhande) ಹೇಳಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ಆಗುತ್ತಿದೆ.

Ankita Lokhande 2

ಸದ್ಯ ಪ್ರಸಾರವಾಗುತ್ತಿರುವ ಸೀಸನ್ ನಲ್ಲಿ ನಟಿ ಅಂಕಿತಾ ಲೋಖಂಡೆ ಮತ್ತು ಪತಿ ವಿಕ್ಕಿ ಜೈನ್  (Vicky Jain)ಇಬ್ಬರೂ ಬಿಗ್ ಬಾಸ್ ಮನೆಯೊಳಗೆ ಇದ್ದಾರೆ. ಇದೇ ಮೊದಲ ಬಾರಿಗೆ ಇಂಥದ್ದೊಂದು ಸುದ್ದಿ ಬಿಗ್ ಬಾಸ್ ಮನೆಯಿಂದ ಬಂದಿದೆ ಎಂದು ಹೇಳಲಾಗುತ್ತಿದೆ. ಈ ಕುರಿತಂತೆ ಬಿಗ್ ಬಾಸ್ ಆಯೋಜಕರು ಅಧಿಕೃತವಾಗಿ ಹೇಳಿಕೆ ನೀಡದೇ ಇದ್ದರೂ, ಸದ್ಯದಲ್ಲೇ ಸತ್ಯ ಆಚೆ ಬರಲಿದೆ ಎಂದು ಚರ್ಚಿಸಲಾಗುತ್ತಿದೆ.

Ankita Lokhande 3

ಹಿಂದಿ ಬಿಗ್ ಬಾಸ್ ಶೋನಲ್ಲಿ ನಾನಾ ರೀತಿಯ ಪ್ರಯೋಗಗಳನ್ನು ಮಾಡಲಾಗುತ್ತಿದೆ. ಈ ಬಾರಿ ಮದುವೆಯಾದ ಎರಡು ಜೋಡಿಗಳನ್ನು ಬಿಗ್ ಬಾಸ್ ಮನೆಗೆ ಕಳುಹಿಸಲಾಗಿತ್ತು. ಅದರಲ್ಲಿ ಒಂದು ಜೋಡಿಯಿಂದ ಈ ಗುಡ್ ನ್ಯೂಸ್ ಸಿಕ್ಕಿದೆ. ಈಗಾಗಲೇ ಅಂಕಿತಾ ಲೋಖಂಡೆ ಅವರನ್ನು ಮನೆಯಿಂದ ಹೊರಗೆ ಕಳುಹಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎನ್ನುವ ಮಾಹಿತಿ ಇದೆ.

 

ಬಾಲಿವುಡ್ ನಲ್ಲಿ ಹದಿನಾರು ಸೀಸನ್ ಮುಗಿಸಿರುವ ಬಿಗ್ ಬಾಸ್, ಸೆಪ್ಟೆಂಬರ್ 3 ರಿಂದ ತನ್ನ ಪ್ರಸಾರವನ್ನು ಶುರು ಮಾಡಿದೆ. ಸಲ್ಮಾನ್ ಖಾನ್ ಈ ಶೋ ಅನ್ನು ಅದ್ಭುತವಾಗಿ ನಡೆಸಿಕೊಡುತ್ತಿದ್ದಾರೆ. ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಾ ಸಾಗಿದೆ ಹಿಂದಿಯ ಬಿಗ್ ಬಾಸ್.

Share This Article