ಬೆಂಗಳೂರು: ರಿಯಾಲಿಟಿ ಶೋ ‘ಬಿಗ್‍ಬಾಸ್ ಕನ್ನಡ ಸೀಸನ್ 5’ರ ಸ್ಪರ್ಧಿಯಾಗಿದ್ದ ರಿಯಾಜ್ ಬಾಷಾ ಕುಟುಂಬಕ್ಕೆ ಹೊಸ ಅತಿಥಿಯ ಆಗಮನವಾಗಿದ್ದು, ತಂದೆಯಾದ ಖುಷಿಯಲ್ಲಿದ್ದಾರೆ.
ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ರಿಯಾಜ್ ಸ್ವತಃ ಫೇಸ್‍ಬುಕ್‍ನಲ್ಲಿ ಹೇಳಿಕೊಂಡಿದ್ದು, ಮಗುವಿನ ಫೋಟೋವನ್ನು ಹಂಚಿಕೊಂಡಿದ್ದಾರೆ.
“ಸಿಹಿ ಸುದ್ದಿ ತಂದೆ.. ನಾನು ತಂದೆ ಮತ್ತು ಆಯೇಶಾ ತಾಯಿಯಾದೆವು. ನಿಮ್ಮ ಆಶೀರ್ವಾದ ಸದಾ ನಮ್ಮೊಂದಿಗಿರಲಿ” ಎಂದು ಹೇಳಿ ನಗುವ ಎಮೋಜಿಯನ್ನು ಹಾಕಿದ್ದಾರೆ. ಜೊತೆಗೆ ತಾವು ಆಸ್ಪತ್ರೆಯಲ್ಲಿದ್ದ ಹಾಗೂ ಮಗುವಿನ ಪಕ್ಕವಿರುವ ಫೋಟೋವನ್ನು ಹಾಕುವ ಮೂಲಕ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.
ರಿಯಾಜ್ ಅವರು ವೃತ್ತಿಯಲ್ಲಿ ರೇಡಿಯೋ ಜಾಕಿ ಹಾಗೂ ನಿರೂಪಕರಾಗಿ ಕೆಲಸ ಮಾಡುತ್ತಿದ್ದರು. ಬಾಲಿವುಡ್ ತಾರೆಯರ ಅನೇಕ ದೊಡ್ಡ ದೊಡ್ಡ ಕಾರ್ಯಕ್ರಮಗಳಲ್ಲಿ ರಿಯಾಜ್ ನಿರೂಪಣೆಯ ಮಾಡಿದ್ದಾರೆ. ಇವರು ‘ಬಿಗ್ ಬಾಸ್ ಸೀಸನ್ 5’ರ ಸ್ಪರ್ಧಿಯಾಗಿ ಭಾಗವಹಿಸುವ ಮೂಲಕ ಕರ್ನಾಟಕದ ಜನತೆಗೂ ಪರಿಚಯವಾಗಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv