2ನೇ ಮದುವೆಗೆ ಸಜ್ಜಾದ ಚೈತ್ರಾ ವಾಸುದೇವನ್

Public TV
1 Min Read
CHAITHRA VASUDEVAN

‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ವಾಸುದೇವನ್ (Chaithra Vasudevan) ಅವರು 2ನೇ ಮದುವೆಗೆ (Wedding) ಸಜ್ಜಾಗಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ನಟಿ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಇಂದು ಸ್ವಗ್ರಾಮಕ್ಕೆ ಬಿಗ್ ಬಾಸ್ ವಿನ್ನರ್ ಹನುಮಂತ – ಅದ್ಧೂರಿ ಸ್ವಾಗತಕ್ಕೆ ಸ್ನೇಹಿತರು, ಗ್ರಾಮಸ್ಥರ ಸಿದ್ಧತೆ

Chaitra Vasudevanಚೈತ್ರಾ ಸದ್ಯ ಪ್ಯಾರಿಸ್‌ನಲ್ಲಿ ಮದುವೆಗಾಗಿ ಭರ್ಜರಿ ಶಾಪಿಂಗ್ ಮಾಡುತ್ತಿದ್ದಾರೆ. ನಡೆಸುತ್ತಿದ್ದಾರೆ. ಇನ್ಸ್ಟಾಗ್ರಾಂ ಖಾತೆಯಲ್ಲಿ ಅವರು ಪ್ಯಾರಿಸ್‌ನಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್‌ನ ವಿಡಿಯೋ ಹಂಚಿಕೊಂಡಿದ್ದು, ಮದುವೆ ಸುದ್ದಿಯನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

ನಾನು ನಿಮ್ಮೊಂದಿಗೆ ಹೃದಯಪೂರ್ವಕವಾದ ಒಂದು ಸಂತೋಷದ ಸುದ್ದಿ ಹಂಚಲು ಉತ್ಸುಕನಾಗಿದ್ದೇನೆ. ನಾನು ಈ ವರ್ಷ 2025ರ ಮಾರ್ಚ್‌ನಲ್ಲಿ ಜೀವನದ ಹೊಸ ಹೆಜ್ಜೆ ಇಡುತ್ತಿದ್ದೇನೆ. ನನ್ನ ವಿವಾಹದ ಸುಂದರ ಪ್ರಯಾಣ ಆರಂಭವಾಗಲಿದೆ. ಈ ಮುಂದಿನ ಹೆಜ್ಜೆ ಹಾಕುವಾಗ, ನಾನು ಈ ಹೊಸ ಅಧ್ಯಾಯಕ್ಕಾಗಿ ನಿಮ್ಮ ಪ್ರೀತಿ, ಆಶೀರ್ವಾದಗಳು ಮತ್ತು ಬೆಂಬಲವನ್ನು ಕೋರುತ್ತೇನೆ ಎಂದು ಬರೆದುಕೊಂಡಿದ್ದಾರೆ. ಭಾವಿ ಪತಿಯ ಜೊತೆ ಫೋಟೋಶೂಟ್ ಮಾಡಿಸಿದ್ದಾರೆ. ಆ ಹುಡುಗ ಯಾರು ಎನ್ನುವುದನ್ನು ಅವರು ರಿವೀಲ್ ಮಾಡಿಲ್ಲ. ಮಾರ್ಚ್ ತಿಂಗಳಿನಲ್ಲಿ ಮದುವೆಯಾಗುತ್ತಿದ್ದರೂ ಮದುವೆ ದಿನಾಂಕವನ್ನು ಅವರು ಇನ್ನೂ ತಿಳಿಸಿಲ್ಲ.

ಚೈತ್ರಾ ತಮ್ಮ ಡಿಗ್ರಿ ಮುಗಿಯುತ್ತಿದ್ದಂತೆ ಸತ್ಯ ನಾಯ್ಡು ಎನ್ನುವ ಉದ್ಯಮಿ ಜೊತೆ ಮದುವೆಯಾಗಿದ್ದರು. 5 ವರ್ಷಗಳ ಬಳಿಕ ಅದು ಡಿವೋರ್ಸ್‌ನಲ್ಲಿ ದಾಂಪತ್ಯ ಬದುಕು ಅಂತ್ಯವಾಗಿತ್ತು.

Share This Article