‘ಬಿಗ್ ಬಾಸ್’, ‘ಲಕ್ಷ್ಮಿ ನಿವಾಸ’ (Lakshmi Nivasa) ಖ್ಯಾತಿಯ ಚಂದನಾ ಅನಂತಕೃಷ್ಣ (Chandana Ananthakrishna) ಅವರು ಅಭಿಮಾನಿಗಳಿಗೆ ಶುಭ ಸುದ್ದಿ ಕೊಟ್ಟಿದ್ದಾರೆ. ಉದ್ಯಮಿ ಪ್ರತ್ಯಕ್ಷ್ ಎಂಬುವವರ ಜೊತೆ ಇದೇ ನ.28ಕ್ಕೆ ಹಸೆಮಣೆ ಏರಲು ನಟಿ ಸಜ್ಜಾಗಿದ್ದಾರೆ. ಇದೀಗ ಭಾವಿ ಪತಿ ಪ್ರತ್ಯಕ್ಷ್ ಜೊತೆಗಿನ ಚಂದನಾ ಫೋಟೋ ರಿವೀಲ್ ಆಗಿದೆ. ಈ ಜೋಡಿಯನ್ನು ನೋಡಿ ನಟಿಯ ಫ್ಯಾನ್ಸ್ ಶುಭಕೋರುತ್ತಿದ್ದಾರೆ. ಇದನ್ನೂ ಓದಿ:ಬಿಹಾರದಲ್ಲಿ ನಡೆಯಲಿದೆ ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಟ್ರೈಲರ್ ಲಾಂಚ್
ಕಿರುತೆರೆಯಲ್ಲಿ ಚಿನ್ನುಮರಿ ಅಲಿಯಾಸ್ ಜಾಹ್ನವಿ ಪಾತ್ರದಲ್ಲಿ ಮೋಡಿ ಮಾಡುತ್ತಿರುವ ಚಂದನಾ ಇದೀಗ ಹೊಸ ಬಾಳಿಗೆ ಕಾಲಿಡಲು ರೆಡಿಯಾಗಿದ್ದಾರೆ. ಕುಟುಂಬಸ್ಥರು ನಿಶ್ಚಯಿಸಿದ ಮದುವೆ ಇದಾಗಿದ್ದು, ಉದ್ಯಮಿ ಪ್ರತ್ಯಕ್ಷ್ ಜೊತೆ ಇದೇ ನವೆಂಬರ್ 28ಕ್ಕೆ ಬೆಂಗಳೂರಿನಲ್ಲಿ ಚಂದನಾ ಮದುವೆ ಜರುಗಲಿದೆ. ಈ ಮದುವೆಯಲ್ಲಿ ಕುಟುಂಬಸ್ಥರು, ಆಪ್ತರು, ಕಿರುತೆರೆಯ ಕಲಾವಿದರು ಭಾಗಿಯಾಗಲಿದ್ದಾರೆ. ಈ ಕುರಿತು ನಟಿ ಚಂದನಾ ‘ಪಬ್ಲಿಕ್ ಟಿವಿ’ ಡಿಜಿಟಲ್‌ಗೆ ಅಧಿಕೃತ ಮಾಹಿತಿ ನೀಡಿದ್ದಾರೆ.
ಇನ್ನೂ ಪ್ರತ್ಯಕ್ಷ್ ಅವರು ಉದ್ಯಮಿಯಾಗಿದ್ದಾರೆ. ವಿಶೇಷ ಅಂದರೆ, ಪ್ರತ್ಯಕ್ಷ್ ಪೋಷಕರು ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ದಿವಂಗತ ಉದಯ್ ಹುತ್ತಿನಗದ್ದೆ ಅವರು ಡಾ.ರಾಜ್‌ಕುಮಾರ್ ಜೊತೆ ‘ದೇವತಾ ಮನುಷ್ಯ’ ಚಿತ್ರದಲ್ಲಿ ನಟಿಸಿದ್ದರು. ‘ಆರಂಭ’, ‘ಅಗ್ನಿಪರ್ವ’, ‘ಶುಭ ಮಿಲನ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ನಟಿಸಿದರು. ಅವರ ಪತ್ನಿ ಲಲಿತಾಂಜಲಿ ಉದಯ್ ಕೂಡ ಹಿರಿತೆರೆ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ.
View this post on Instagram
ಇನ್ನೂ ರಾಜ ರಾಣಿ, ಹೂ ಮಳೆ, ಬಿಗ್ ಬಾಸ್ ಕನ್ನಡ ಸೀಸನ್ 7 ಶೋ ಸೇರಿದಂತೆ ಹಲವು ಪ್ರಾಜೆಕ್ಟ್‌ಗಳಲ್ಲಿ ಚಂದನಾ ಕಾಣಿಸಿಕೊಂಡಿದ್ದಾರೆ. ಪ್ರಸ್ತುತ ‘ಲಕ್ಷ್ಮಿ ನಿವಾಸ’ ಸೀರಿಯಲ್‌ನಲ್ಲಿ ಜಾಹ್ನವಿ ಪಾತ್ರದ ಮೂಲಕ ಅಭಿಮಾನಿಗಳ ಮನಗೆದ್ದಿದ್ದಾರೆ. ಜೊತೆಗೆ ‘ಭಾವ ತೀರ ಯಾನ’ ಸಿನಿಮಾದಲ್ಲಿ ಧೃತಿ ಪಾತ್ರಕ್ಕೆ ನಟಿ ಜೀವ ತುಂಬಿದ್ದಾರೆ.