ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಜತ್ (Rajath) ಮತ್ತು ವಿನಯ್ ಗೌಡರನ್ನು (Vinay Gowda) 24ನೇ ಎಸಿಎಂಎಂ ಕೋರ್ಟ್ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಇದನ್ನೂ ಓದಿ:ವಿಶಿಷ್ಟ ಕಥಾ ಹಂದರದ ಮಕ್ಕಳ ಚಿತ್ರ ‘ಸೀಸ್ ಕಡ್ಡಿ’ ಬಿಡುಗಡೆಗೆ ರೆಡಿ!
5 ದಿನ ಕಸ್ಟಡಿಗೆ ನೀಡುವಂತೆ ಪೊಲೀಸರು ಕೋರ್ಟ್‌ಗೆ ಮನವಿ ಮಾಡಿದ್ದರು. ಆದರೆ ನ್ಯಾಯಾಲಯ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಮಾ.28ರವರೆಗೆ ಪೊಲೀಸ್ ಕಸ್ಟಡಿಗೆ ಕೋರ್ಟ್ ಆದೇಶ ನೀಡಿದೆ.
ಇನ್ನೂ ರಜತ್ ಅವರು ದರ್ಶನ್ ನಟನೆಯ ‘ಕರಿಯ’ ಸಿನಿಮಾ ಲುಕ್‌ನಲ್ಲಿ ಕಾಣಿಸಿಕೊಂಡಿದ್ರೆ, ಇತ್ತ ವಿನಯ್ ಪುಷ್ಪರಾಜ್ ಲುಕ್‌ನಲ್ಲಿ ಮಚ್ಚು ಹಿಡಿದು ಇಬ್ಬರು ರೀಲ್ಸ್ ಮಾಡಿದ್ದರು. ಇದರಿಂದ ಈಗ ಇಬ್ಬರೂ ಕಾನೂನು ಸಂಕಷ್ಟ ಎದುರಿಸುವಂತಾಗಿದೆ.