ಕನ್ನಡ ಚಿತ್ರರಂಗಕ್ಕೆ ಬಲ ತುಂಬಿರುವ ‘ಭೀಮ’ ನಟ ದುನಿಯಾ ವಿಜಯ್ (Duniya Vijay) ಹೊಸಬರಿಗೆ ಸದಾ ಬೆಂಬಲವಾಗಿ ನಿಲ್ತಾನೆ ಇರುತ್ತಾರೆ. ದುನಿಯಾ ವಿಜಯ್ ಅವರು ‘ಬಿಗ್ ಬಾಸ್’ ಖ್ಯಾತಿಯ (Bigg Boss) ರಾಜೀವ್ ಹನು ಹೊಸ ಸಿನಿಮಾಗೆ ಸಾಥ್ ಕೊಟ್ಟಿದ್ದಾರೆ. ಡೈರೆಕ್ಟರ್ ಮಂಜು ಕಥೆ ಬರೆದು ನಿರ್ದೇಶಿಸಿರುವ ‘ಬೇಗೂರು ಕಾಲೋನಿ’ (Begur Colony) ಚಿತ್ರದ ಕ್ಯಾರೆಕ್ಟರ್ ಮೋಶನ್ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಮೋಷನ್ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎಂ.ಎನ್ ಸುರೇಶ್, ಖ್ಯಾತ ಸಂಭಾಷಣೆಗಾರ ಮಾಸ್ತಿ ಸೇರಿದಂತೆ ಮತ್ತಿತರರು ಕಾರ್ಯಕ್ರಮಕ್ಕೆ ಮೆರಗು ನೀಡಿದರು. ಇದನ್ನೂ ಓದಿ:ರಾಜ್ ಭಾರದ್ವಾಜ್ ಕನಸಿನ `ಹಗ್ಗ’ ಈ ವಾರ ತೆರೆಗೆ!
ಈ ವೇಳೆ ನಟ ವಿಜಯ್ ಕುಮಾರ್ ಮಾತನಾಡಿ, ನಿರ್ಮಾಪಕರು ನಮ್ಮ ಊರಿನ ಕಡೆಯವರು. ನಮ್ಮ ಊರು ಅಂತಾ ಸೆಳೆಯುತ್ತದೆ. ನಿರ್ಮಾಪಕ ಹಾಗೂ ನಿರ್ದೇಶಕ ಮಂಜು ಅವರ ಈ ಸಿನಿಮಾಗೆ ಒಳ್ಳೆಯದಾಗಲಿದೆ. ಹೋರಾಟದ ಕಥೆ ಇಟ್ಟುಕೊಂಡು ಮಾಡಿರುವ ‘ಬೇಗೂರು ಕಾಲೋನಿ’ ಸಿನಿಮಾವಿದು. ಈ ಹೋರಾಟದ ಕಥೆ ಸರ್ಕಾರಕ್ಕೆ ಮುಟ್ಟಲಿ. ಕಾಲೋನಿ ಇಲ್ಲದೇ ನಗರ ಆಗಲ್ಲ, ಕಾಲೋನಿಯೇ ಶಕ್ತಿ ಎಂದಿದ್ದಾರೆ. ಇನ್ನೂ ನಟ ರಾಜೀವ್ ಕುರಿತು ಮಾತನಾಡಿ, ರಾಜೀವ್ ಅವರು ಸಿನಿಮಾಗಾಗಿ ಹಾರ್ಡ್ ವರ್ಕ್ ಮಾಡುತ್ತಾರೆ. ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದರು.
View this post on Instagram
ನಿರ್ದೇಶಕ ಮಂಜು ಮಾತನಾಡಿ, ಕಾಲೋನಿ ಸೊಸೈಟಿ, ಎಲ್ಲಾ ರೀತಿ ಜನ ವಾಸ ಮಾಡ್ತಾರೆ. ಅಲ್ಲಿ ನಡೆಯುವ ಒಂದು ಸಣ್ಣ ಕಥೆಯಿದು. ಇದು ಒಂದು ಹೋರಾಟದ ಕಥೆ ಎಂದಿದ್ದಾರೆ. ನನ್ನ ಅಂತಹ ಸಣ್ಣ ನಿರ್ದೇಶಕನಿಗೆ ದುನಿಯಾ ವಿಜಯ್ ಅಣ್ಣ ಸಾಥ್ ಕೊಟ್ಟಿದ್ದು, ನಾನು ಎಂದಿಗೂ ಮೆರೆಯುವುದಿಲ್ಲ ಎಂದರು.
ನಟ ರಾಜೀವ್ ಹನು ಮಾತನಾಡಿ, ನಿರ್ದೇಶಕ ಮಂಜು ನನಗೆ ಸತತ 15 ವರ್ಷಗಳ ಪರಿಚಯ. ತನಗೆ ಏನು ಬೇಡ. ಎಲ್ಲರ ಹೊಟ್ಟೆ ತುಂಬಿದರೆ ಸಾಕು ಎಂದು ಕೆಲಸ ಮಾಡುವ ವ್ಯಕ್ತಿ. ಅವರ ಕೆಲಸ ಬೆಳ್ಳಿಪರದೆಯ ಮೇಲೆ ಕಾಣುತ್ತಿದೆ. ಇವತ್ತು ಇಷ್ಟು ಜನ ಒಟ್ಟುಗೂಡಿಸುವ ಕೆಲಸ ಕೂಡ ಅವರದ್ದು ಹಾಗೂ ನಿರ್ಮಾಪಕರದ್ದು. ನನ್ನ ಪಾತ್ರ ಜನರಿಗೆ ಇಷ್ಟವಾಗುತ್ತದೆ ಎಂಬ ನಂಬಿಕೆಯಿದೆ ಎಂದರು.
‘ಬೇಗೂರು ಕಾಲೋನಿ’ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ಬರುವ ಎಲ್ಲಾ ಪಾತ್ರಧಾರಿಗಳನ್ನು ಈ ವಿಡಿಯೋದಲ್ಲಿ ಪರಿಚಯಿಸಲಾಗಿದ್ದು, ಇನ್ನೇನು ಶೀಘ್ರದಲ್ಲೇ ಚಿತ್ರತಂಡ ಟೀಸರ್ ರಿಲೀಸ್ ಮಾಡಲಿದೆ. ಈ ಚಿತ್ರವನ್ನು ಶ್ರೀಮಾ ಸಿನಿಮಾಸ್ ಬ್ಯಾನರ್‌ನಲ್ಲಿ ಎಂ.ಶ್ರೀನಿವಾಸ್ ಬಾಬು ನಿರ್ಮಾಣ ಮಾಡಿದ್ದು, ರಾಜೀವ್ ಹನು ಸೇರಿದಂತೆ ಮಂಜು, ಪಲ್ಲವಿ ಹರ್ವ, ಕೀರ್ತಿ ಭಂಡಾರಿ, ಕೃಷ್ಣ ಮುರಳಿ, ಬಾಲ ರಾಜವಾಡಿ ಬಣ್ಣ ಹಚ್ಚಿದ್ದಾರೆ.