ಸಾನ್ಯ ಅಯ್ಯರ್‌ಗೆ ಸಿಕ್ತು ಸಿನಿಮಾ ಚಾನ್ಸ್- ಹೀರೋಯಿನ್ ಆಗ್ತಿದ್ದಾರೆ ಪುಟ್ಟಗೌರಿ

Public TV
2 Min Read
saanya iyer

ಬಿಗ್ ಬಾಸ್ ಬೆಡಗಿ ಸಾನ್ಯ ಅಯ್ಯರ್ (Saanya Iyer) ಅವರು ಬೆಳ್ಳಿಪರದೆಯಲ್ಲಿ ಮಿಂಚಲು ರೆಡಿಯಾಗಿದ್ದಾರೆ. ಕೊನೆಗೂ ಯುವ ನಟನಿಗೆ ಹೀರೋಯಿನ್ (Heroine) ಆಗುವ ಮೂಲಕ ತಮ್ಮ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

sanya iyer

ಇಂದ್ರಜಿತ್ ಲಂಕೇಶ್ (Indrajith Lankesh) ಮಗನ ಹೊಸ ಸಿನಿಮಾದಲ್ಲಿ ಸಾನ್ಯ ಅಯ್ಯರ್ ನಾಯಕಿಯಾಗಲಿದ್ದಾರೆ. ಇಂದ್ರಜಿತ್ ಲಂಕೇಶ್ ತಮ್ಮ ಮಗ ಸಮರ್ಜಿತ್‌ನನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದು, ಇದಕ್ಕಾಗಿ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಸಮರ್ಜಿತ್ ಲಂಕೇಶ್ (Samarjith Lankesh) ಎದುರು ನಾಯಕಿಯಾಗಿ ಪುಟ್ಟಗೌರಿ ಸಾನ್ಯ ಕಾಣಿಸಿಕೊಳ್ಳಲಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಬಾಕಿಯಿದೆ. ಇದನ್ನೂ ಓದಿ:‘ಡಬಲ್ ಇಸ್ಮಾರ್ಟ್’ ಚಿತ್ರೀಕರಣದಲ್ಲಿ ಸಂಜಯ್ ದತ್‌ಗೆ ಪೆಟ್ಟು- ಆಸ್ಪತ್ರೆಗೆ ದಾಖಲು

saanya iyer 1

‘ಪುಟ್ಟಗೌರಿ ಮದುವೆ’ (Puttagowri Maduve) ಸೀರಿಯಲ್ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ಬಾಲನಟಿಯಾಗಿ ಎಂಟ್ರಿ ಕೊಟ್ಟಿದ್ದ ಸಾನ್ಯ ಅಯ್ಯರ್ ಅವರು ಬಿಗ್ ಬಾಸ್ ಓಟಿಟಿ ಮತ್ತು ಟಿವಿ ಬಿಗ್ ಬಾಸ್ (Bigg Boss Kannada) ಅವರಿಗೆ ಹೆಚ್ಚಿನ ಜನಪ್ರಿಯತೆ ನೀಡಿತ್ತು. ದೊಡ್ಮನೆಯಿಂದ ಹೊರ ಬಂದ ಮೇಲೆ ಬೋಲ್ಡ್ ಫೋಟೋಶೂಟ್‌ನಲ್ಲಿ ಮಿಂಚಿದ್ದರು. ಫಿಟ್‌ನೆಸ್ ಮತ್ತು ವರ್ಕೌಟ್ ಕಡೆ ಹೆಚ್ಚಿನ ಗಮನ ನೀಡಿದ್ದರು. ಈಗ ಅವರ ಆಸೆಯಂತೆ ಒಂದೊಳ್ಳೆಯ ಕಥೆ ಸಾನ್ಯಗೆ ಅರಸಿ ಬಂದಿದೆ.

ತಂದೆ ಸಿನಿಮಾ ನಿರ್ದೇಶಕ ಅನ್ನುವ ಕಾರಣಕ್ಕಾಗಿ ಸಮರ್ಜಿತ್ ಚಿತ್ರರಂಗ ಪ್ರವೇಶ ಮಾಡುತ್ತಿಲ್ಲ. ಎಲ್ಲ ರೀತಿಯಲ್ಲೂ ಸಿದ್ಧತೆ ಮಾಡಿಕೊಂಡೇ ಅಖಾಡಕ್ಕೆ ಇಳಿಯುತ್ತಿದ್ದಾರೆ. ಹಾಗಾಗಿ ಎಂಟ್ರಿಯಲ್ಲೇ ಭರವಸೆ ಮೂಡಿಸುತ್ತಾರೆ. ಈಗಾಗಲೇ ರಂಗಭೂಮಿಯಲ್ಲೂ ಕೆಲಸ ಮಾಡಿದ ಅನುಭವವೂ ಅವರ ಜೊತೆಗಿದೆ. ನ್ಯೂಯಾರ್ಕ್ ಅಕಾಡೆಮಿಯಲ್ಲಿ ಸಿನಿಮಾ ಸಂಬಂಧಿಸಿದ ಕೋರ್ಸ್ ಮಾಡಿರುವ ಸಮರ್ಜಿತ್, ಅಲ್ಲಿ ನಟನಾ ತರಬೇತಿಯನ್ನು ಪಡೆದಿದ್ದಾರೆ. ಚೇತನ್ ಡಿಸೋಜಾ ಬಳಿ ಸಾಹಸ ಕಲೆಯನ್ನು ಕಲಿತುಕೊಂಡರೆ, ಮುರಳಿ ಬಳಿ ಡಾನ್ಸ್ ಮತ್ತು ಇಬ್ಬರು ನೀನಾಸಂ ಶಿಕ್ಷಕರು ಸಮರ್ಜಿತ್‌ಗೆ ತರಬೇತಿ ನೀಡಿದ್ದಾರೆ. ಲಂಕೇಶ್ ಅವರ ಮೊಮ್ಮಗ ಸ್ಯಾಂಡಲ್‌ವುಡ್‌ಗೆ ಗ್ರ್ಯಾಂಡ್‌ ಆಗಿ ಎಂಟ್ರಿ ಕೊಡ್ತಿದ್ದಾರೆ.

ಸಮರ್ಜಿತ್- ಸಾನ್ಯ ಅಯ್ಯರ್ ಇಬ್ಬರಿಗೂ ಇದು ಚೊಚ್ಚಲ ಸಿನಿಮಾ ಆಗಿರುವ ಕಾರಣ, ಸಿನಿಮಾ ಮೇಲಿನ ನಿರೀಕ್ಷೆ ಬೆಟ್ಟದಷ್ಟಿದೆ. ಸಿನಿಮಾ ನಿರ್ದೇಶಕರು, ಬ್ಯಾನರ್ ಈ ಎಲ್ಲದರ ಅಪ್‌ಡೇಟ್ ಸದ್ಯದಲ್ಲೇ ಸಿಗಲಿದೆ.

[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article