ಕನ್ನಡದ ‘ಅಗ್ನಿಸಾಕ್ಷಿ’ (Agnisakshi) ನಟಿ ಶೋಭಾ ಶೆಟ್ಟಿ (Shoba Shetty) ಇದೀಗ ಭಾವಿ ಪತಿ ಯಶ್‌ವಂತ್ ಹುಟ್ಟುಹಬ್ಬಕ್ಕೆ ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ. ಗೆಳೆಯನ ಬರ್ತ್‌ಡೇ ಅದ್ಧೂರಿಯಾಗಿ ನಟಿ ಸೆಲೆಬ್ರೇಟ್ ಮಾಡಿದ್ದಾರೆ.
ಇದೀಗ ಭಾವಿ ಪತಿಗೆ ಬೀಸ್ಟ್ ಎಕ್ಸ್‌ಯುವಿ 700 ಕಾರ್ ಅನ್ನು ಈ ವರ್ಷ ಯಶ್‌ವಂತ್‌ಗೆ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಆಗಿ ಕೊಟ್ಟಿದ್ದಾರೆ. ಅಂದಹಾಗೆ, ಮಾರುಕಟ್ಟೆಯಲ್ಲಿ ಈ ಕಾರಿಗೆ 15ರಿಂದ 20 ಲಕ್ಷ ರೂ. ಇದೆ. ಸದ್ಯ ಶೋಭಾ ಕೊಟ್ಟಿರುವ ಲವ್ಲಿ ಗಿಫ್ಟ್ ನೋಡಿ ಯಶ್‌ವಂತ್ ಕೂಡ ಸಂಭ್ರಮಿಸಿದ್ದಾರೆ. ಇದನ್ನೂ ಓದಿ:ಲಾಯರ್ ಆಗಿ ಶಿವಣ್ಣ ಖಡಕ್ ಎಂಟ್ರಿ- ಮೇಕಿಂಗ್ ವಿಡಿಯೋ ಚಿಂದಿ ಎಂದ ಫ್ಯಾನ್ಸ್
ಇತ್ತೀಚೆಗೆ ನಟಿ ಹೈದರಾಬಾದ್‌ನಲ್ಲಿ ಹೊಸ ಮನೆ ಖರೀದಿಸಿದ್ದಾರೆ. ಗೃಹ ಪ್ರವೇಶ ಕೂಡ ಆಗಿದ್ದು, ಮುಂದಿನ ತಿಂಗಳು ಆ ಮನೆಗೆ ಶಿಫ್ಟ್ ಆಗಲಿದ್ದಾರೆ. ಇದನ್ನೂ ಓದಿ:ದಕ್ಷಿಣದ ಸಿನಿಮಾಗಳ ಮುಂದೆ ‘ಗೌರಿ’ ಸಾಂಗ್ ಸಖತ್ ಟ್ರೆಂಡಿಂಗ್
ಕಳೆದ ತಿಂಗಳು ಅದ್ಧೂರಿಯಾಗಿ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿತ್ತು. ಸದ್ಯದಲ್ಲೇ ‘ಬಿಗ್ ಬಾಸ್’ (Bigg Boss) ಖ್ಯಾತಿಯ ಶೋಭಾ ಮತ್ತು ಯಶ್‌ವಂತ್ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.