ಮಗುವನ್ನು ಅಕ್ರಮವಾಗಿ ಮನೆಯಲ್ಲಿ ಇಟ್ಟುಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ, ಸೋಷಿಯಲ್ ಮೀಡಿಯಾ ಸ್ಟಾರ್ ಎಂದೇ ಖ್ಯಾತರಾಗಿದ್ದ ಸೋನು ಶ್ರೀನಿವಾಸ್ ಗೌಡರನ್ನು (Sonu Srinivas Gowda) 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ ಬೆಂಗಳೂರಿನ ಸಿಜೆಎಂ ಕೋರ್ಟ್. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನು ಗೌಡ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ. ಇದನ್ನೂ ಓದಿ:Bigg Boss: ಸಲ್ಮಾನ್ ಖಾನ್ ಶೋನಲ್ಲಿ ‘ಸೋ ಬ್ಯೂಟಿಫುಲ್’ ಖ್ಯಾತಿಯ ಜಾಸ್ಮಿನ್ ಕೌರ್?
ಪೊಲೀಸ್ ವಾಹನದಲ್ಲಿ ತೆರಳುವುದಕ್ಕೂ ಮುನ್ನ ಮಾಧ್ಯಮಗಳ ಎದುರು ಸೋನು ಶ್ರೀನಿವಾಸ್ ಗೌಡ ಹೇಳಿಕೆ ನೀಡಿದ್ದಾರೆ. ಲೀಗಲ್ ಆಗಿ ತನಿಖೆ ನಡೆಯುತ್ತಿದೆ. ಏನೂ ತೊಂದರೆ ಇಲ್ಲ. ಒಂದು ಹುಡುಗಿಯನ್ನು ರಕ್ಷಣೆ ಮಾಡೋಕೆ ಅಂತ ನಾನು ಕರೆದುಕೊಂಡು ಬಂದಿದ್ದು. ಅವಳು ಈಗಲೂ ಆರಾಮಾಗಿ, ಸುರಕ್ಷಿತವಾಗಿ ಇದ್ದಾಳೆ ಎಂದು ಸೋನು ಗೌಡ ಹೇಳಿದ್ದಾರೆ. ಕೇಸ್‌ಗೆ ಸಂಬಂಧಪಟ್ಟಂತೆ ಅವರನ್ನು ರಾಯಚೂರಿಗೆ ಕರೆದುಕೊಂಡು ಹೋಗಿ ಪೊಲೀಸರು ತನಿಖೆ ಮಾಡಲಿದ್ದಾರೆ. ಮಾರ್ಚ್ 25ರಂದು ಅವರನ್ನು ಕೋರ್ಟ್‌ಗೆ ಹಾಜರುಪಡಿಸಬೇಕಿದೆ. ನಿಯಮ ಪಾಲಿಸದೇ ಮಗು ದತ್ತು ಪಡೆದ ಆರೋಪದಲ್ಲಿ ಅವರು ಈಗ ಕಾನೂನು ಸಂಕಷ್ಟ ಎದುರಿಸಬೇಕಾಗಿದೆ.
ಮಗುವನ್ನು ಅನಧಿಕೃತವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಹಿನ್ನೆಲೆಯಲ್ಲಿ ಸೋನು ಅನ್ನು ಇಂದು ಬೆಳಗಿನ ಜಾವ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದರು. ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಜಂಟಿ ಕಾರ್ಯಚರಣೆ ವೇಳೆ ಬಂಧನವಾಗಿತ್ತು.
ಈ ಹಿಂದೆಯಷ್ಟೇ ಸೋನು ಶ್ರೀನಿವಾಸ್ ಗೌಡ ಸಾಮಾಜಿಕ ಜಾಲತಾಣದಲ್ಲಿ ಮಗು ದತ್ತು ಪಡೆದಿರುವ ಬಗ್ಗೆ ಟ್ರೋಲ್ ಆಗಿದ್ದರು. ಸ್ವತಃ ಸೋನು ಗೌಡ ಅವರೇ ಆ ಮಗುವನ್ನು ಇಟ್ಟುಕೊಂಡು ವಿಡಿಯೋ ಕೂಡ ಮಾಡಿದ್ದರು. ಈ ಮಗುವಿನ ಪರಿಚಯವನ್ನು ಸೋನು ಸೋಷಿಯಲ್ ಮೀಡಿಯಾದಲ್ಲಿ ಮಾಡಿದ್ದರು.
ದತ್ತು ಪಡೆಯುವ ಯಾವುದೇ ನಿಯಮವನ್ನು ದತ್ತು ಪಾಲಿಸದೇ ಇರುವ ಕಾರಣಕ್ಕಾಗಿ ಮಕ್ಕಳ ಹಕ್ಕು ಕಸಿದಿರುವ ಆರೋಪ ಸೋನು ಮೇಲಿದೆ. ಉತ್ತರ ಕರ್ನಾಟಕದ 8 ವರ್ಷದ ಮಗು ಅದಾಗಿದ್ದು, ಸಿಂಪತಿ ಗಿಟ್ಟಿಸಿಕೊಂಡು ಸೆಲೆಬ್ರಿಟಿ ಆಗಲು ಸೋನು ಮುಂದಾಗಿದ್ದರು ಎನ್ನುವ ಆರೋಪ ಕೂಡ ಇದೆ. ಮಗುವನ್ನ ದತ್ತು ಪಡೆದ ಮೇಲೆ ಸುಳ್ಳು ಪ್ರಚಾರ ಗಿಟ್ಟಿಸಿಕೊಳ್ಳಲು ಸೋನು ತಂತ್ರ ರೂಪಿಸಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ಮಕ್ಕಳ ರಕ್ಷಣಾಧಿಕಾರಿಗಳಿಂದ ದೂರು ಬಂದ ಹಿನ್ನೆಲೆಯಲ್ಲಿ ಬ್ಯಾಡರಹಳ್ಳಿ ಪೊಲೀಸರಿಂದ ಸೋನು ಶ್ರೀನಿವಾಸ್ ಗೌಡ ಬಂಧನವಾಗಿತ್ತು.