ಸ್ಯಾಂಡಲ್‌ವುಡ್ ನಟ ಕಾರ್ತಿಕ್ ಮಹೇಶ್ (Karthika Mahesh) ಬಿಗ್ ಬಾಸ್ ಶೋ ಬಳಿಕ ‘ರಾಮರಸ’ ಎಂಬ ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಈ ಬೆನ್ನಲ್ಲೇ ಅವರ ಮುಂದಿನ ಪ್ರಾಜೆಕ್ಟ್ ಬಗ್ಗೆ ಇಂಟರೆಸ್ಟಿಂಗ್ ಅಪ್‌ಡೇಟ್‌ವೊಂದು ಸಿಕ್ಕಿದೆ. ಹೊಸ ಸಿನಿಮಾದಲ್ಲಿ ವಿಲನ್ ಆಗಿ ಕಾರ್ತಿಕ್ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ಗೋಲ್ಡನ್ ಆಫರ್ ಕೈಚೆಲ್ಲಿದ ರಶ್ಮಿಕಾ ಮಂದಣ್ಣ
ಪ್ರತೀಕ್ ನಟನೆಯ ‘ಧ್ರುವತಾರೆ’ (Dhruvataare) ಸಿನಿಮಾದಲ್ಲಿ ಕಾರ್ತಿಕ್ ಮಹೇಶ್‌ಗೆ ಉತ್ತಮ ಪಾತ್ರ ಸಿಕ್ಕಿದೆ. ವಿಲನ್ ಆಗಿ ನಟಿಸುತ್ತಿದ್ದರೂ ಕೂಡ ನಟನೆಗೆ ಸ್ಕೋಪ್ ಇರುವ ಪಾತ್ರ ಇದಾಗಿದೆ.
ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡುತ್ತಾ ತಮ್ಮದೇ ಅಭಿಮಾನಿ ಬಳಗ ಹೊಂದಿರುವ ಪ್ರತೀಕ್ ಮತ್ತು ಮೌಲ್ಯ ದಂಪತಿ ಈಗ ಬೆಳ್ಳಿಪರದೆಯಲ್ಲೂ ಜೋಡಿಯಾಗಿ ಕಾಣಿಸಿಕೊಳ್ತಿದ್ದಾರೆ. ಇದೊಂದು ಫ್ಯಾಮಿಲಿ ಡ್ರಾಮಾ ಚಿತ್ರವಾಗಿದ್ದು, ಯುವನಟ ಪ್ರತೀಕ್ ಅವರೇ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.
ಬೆಂಗಳೂರು ಮತ್ತು ಸಕಲೇಶಪುರಲ್ಲಿ 70 ದಿನಗಳ ಶೂಟಿಂಗ್ ನೆರವೇರಿದ್ದು, ಸಿನಿಮಾದ ಮೊದಲ ಪೋಸ್ಟರ್ ಕೂಡ ರಿಲೀಸ್ ಆಗಿ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಕಾರ್ತಿಕ್ ಸಿನಿಮಾದಲ್ಲಿ ವಿಲನ್ ಆಗಿ ನಟಿಸ್ತಾರೆ ಅಂತ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.