ಬೆಂಗಳೂರು: ಹಳ್ಳಿ ಹೈದ ಹನಮಂತ ಬಿಗ್‌ಬಾಸ್ ಸೀಸನ್ 11ರ (Bigg Boss Kannada Season 11) ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ. ವೈಲ್ಡ್ ಕಾರ್ಡ್ (Wild Card) ಮೂಲಕ ಎಂಟ್ರಿಕೊಟ್ಟಿದ್ದ ಹನುಮಂತ ಈಗ ಕಪ್ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.
ಬಿಗ್‌ಬಾಸ್ ಶುರುವಾದ 15 ದಿನಗಳ ನಂತರ ಹನುಮಂತ (Hanumantha) ಮನೆಯನ್ನು ಪ್ರವೇಶಿಸಿದ್ದರು. ಇಲ್ಲಿಯವರೆಗೆ ಶೋ ಆರಂಭಗೊಂಡಾಗ ಮನೆಯನ್ನು ಪ್ರವೇಶ ಮಾಡಿದ ಸ್ಪರ್ಧಿಗಳೇ ಬಿಗ್ ಬಾಸ್ ಟ್ರೋಫಿ ಗೆಲ್ಲುತ್ತಿದ್ದರು. ಆದರೆ ಬಿಗ್ ಬಾಸ್ ಇತಿಹಾಸದಲ್ಲಿ ವೈಲ್ಡ್ ಕಾರ್ಡ್ ಸ್ಪರ್ಧಿ ಗೆದ್ದಿದ್ದು ಇದೇ ಮೊದಲು. ಇದನ್ನೂ ಓದಿ: BBK 11: ಹನುಮಂತ ಟ್ರೋಫಿ ಗೆದ್ದಿರೋದು ಖುಷಿಯಿದೆ- ತ್ರಿವಿಕ್ರಮ್ ರಿಯಾಕ್ಷನ್
Advertisement
Advertisement
ಟ್ರೋಫಿ ಜಯಿಸಿದ ಬಳಿಕ ವೇದಿಕೆಯಲ್ಲಿ ಮಾತನಾಡಿದ ಹನುಮಂತ, ದೇವರಾಣೆ ನಾನು ಗೆಲ್ಲುತ್ತೇನೆ ಅಂತ ಬಿಗ್ ಬಾಸ್ ಮನೆಗೆ ಬಂದಿರಲಿಲ್ಲ. ಹೋಗಿ ಮಜಾ ಮಾಡಿ ಬರೋಣ ಅಂತ ಬಂದಿದ್ದೆ ಎಂದು ತಿಳಿಸಿದರು.
Advertisement
ನಾನು ಗೆಲ್ತೀನಿ ಅಂತ ಗೊತ್ತಿದ್ದರೆ ಬಾಯಿ ಪಾಠ ಮಾಡಿಕೊಂಡು ಬರುತ್ತಿದ್ದೆ. ಆದರೆ ಈಗ ಏನು ಮಾತನಾಡಬೇಕು ಅಂತ ಗೊತ್ತಾಗುತ್ತಿಲ್ಲ. ದೇವರು, ಸುದೀಪ್ ಸರ್, ಕನ್ನಡ ನಾಡಿನ ಜನರ ಆಶೀರ್ವಾದದಿಂದ ನಾನು ಗೆದ್ದಿದ್ದಿದ್ದೇನೆ ಎಂದರು. ಇದನ್ನೂ ಓದಿ: BBK 11: ಮಗನ ಕೊನೆ ಶೋ ನೋಡಲು ಬಿಗ್ ಬಾಸ್ ಮನೆಗೆ ಬಂದಿದ್ದ ಸುದೀಪ್ ತಂದೆ
Advertisement
ಅಂತಿಮವಾಗಿ ಹನುಮಂತ ಅವರಿಗೆ 5,23,89318 ಮತಗಳು ಬಿದ್ದಿದ್ದರೆ ರನ್ನರ್ ಅಪ್ ತ್ರಿವಿಕ್ರಮ್ ಅವರಿಗೆ 2,53,12518 ಮತಗಳು ಬಿದ್ದಿದ್ದವು.
ವಿಶೇಷ ಏನೆಂದರೆ ಹನುಮಂತ ಫಿನಾಲೆ ಪ್ರವೇಶಿಸಿದ ಮೊದಲ ಸ್ಪರ್ಧಿ ಆಗಿದ್ದರು. ಟಿಕೆಟ್ ಟು ಫಿನಾಲೆ ಟಾಸ್ಕ್ ಗೆದ್ದು ಹನುಮಂತ ಫೈನಲ್ ಪ್ರವೇಶಿಸಿದ್ದರು.