ಮಂಡ್ಯ: ಗಿಲ್ಲಿ ನಟ (Gilli Nata) ಬಿಗ್ ಬಾಸ್ ಸೀಸನ್ 12 (Bigg Boss) ವಿನ್ನರ್ ಆಗಿದ್ದು, ತವರಲ್ಲಿ ಸಂಭ್ರಮ ಮನೆ ಮಾಡಿದೆ. ಮಳವಳ್ಳಿಯಿಂದ ಹುಟ್ಟೂರು ದಡದಪುರಕ್ಕೆ ವಿನ್ನರ್ ಗಿಲ್ಲಿಯನ್ನು ಅದ್ದೂರಿ ಮೆರವಣಿಗೆ ಮೂಲಕ ಸ್ವಾಗತಿಸಲು ಭರ್ಜರಿ ತಯಾರಿ ನಡೆದಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ಮಧ್ಯಾಹ್ನ 3 ಗಂಟೆಗೆ ಮೆರವಣಿಗೆ ಆರಂಭವಾಗಲಿದೆ. ಮಳವಳ್ಳಿ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಸಾಗಲಿದೆ. ಬಳಿಕ ಗಿಲ್ಲಿ ಹುಟ್ಟೂರು ದಡದಪುರದ ವರೆಗೆ ಅದ್ದೂರಿ ಮೆರವಣಿಗೆ ನಡೆಯಲಿದೆ. ಇದನ್ನೂ ಓದಿ: ಬಂದಿರೋ 50 ಲಕ್ಷದಲ್ಲಿ ಜಮೀನು ತಗೊಂಡು ವ್ಯವಸಾಯ ಮಾಡ್ತೀನಿ: ಬಿಗ್ ಬಾಸ್ ವಿನ್ನರ್ ಗಿಲ್ಲಿ ಫಸ್ಟ್ ರಿಯಾಕ್ಷನ್
ಬಿಗ್ ಬಾಸ್ ಸೀಸನ್ 12ರ ವಿಜೇತರಾಗಿ ಗಿಲ್ಲಿ ನಟರಾಜ್ ಹೊರಹೊಮ್ಮಿದ್ದಾರೆ. ರಕ್ಷಿತಾ ಶೆಟ್ಟಿ ರನ್ನರ್ ಅಪ್ ಹಾಗೂ ಅಶ್ವಿನಿ ಗೌಡ 2ನೇ ರನ್ನರ್ ಅಪ್ ಆಗಿದ್ದಾರೆ. ಗಿಲ್ಲಿ ನಟನಿಗೆ 50 ಲಕ್ಷ ರೂ., ಕಾರು ಹಾಗೂ ಸುದೀಪ್ ಅವರ ಕಡೆಯಿಂದ 10 ಲಕ್ಷ ರೂ. ಬಹುಮಾನ ಸಿಕ್ಕಿದೆ.
ಗಿಲ್ಲಿ ವಿನ್ ಆಗ್ತಿದ್ದಂತೆ ತವರಲ್ಲಿ ಸಂಭ್ರಮಾಚರಣೆ ಜೋರಾಗಿದೆ. ಜನರು ಮತ್ತು ಅಭಿಮಾನಿಗಳು ವಿನ್ನರ್‌ಗೆ ಅದ್ಧೂರಿ ಸ್ವಾಗತ ಕೋರಲು ತವರು ಮಳವಳ್ಳಿಯಲ್ಲಿ ಸಿದ್ಧತೆ ಮಾಡಿಕೊಂಡಿದ್ದಾರೆ. ಗಿಲ್ಲಿ ನಟನಿಗೆ ಎಲ್ಲೆಡೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಇದನ್ನೂ ಓದಿ: `ದೊಡ್ಮನೆ’ ದೊರೆಯಾದ ದಡದಪುರದ ಹೈದ – ಗಿಲ್ಲಿ ಗೆಲುವಿಗೆ ಸಂಭ್ರಮಿಸಿದ ಕರುನಾಡು

