Bengaluru CityCinemaKarnatakaLatestMain PostSandalwoodTV Shows

`ಬಿಗ್ ಬಾಸ್’ ಸೀಸನ್ 9ಕ್ಕೆ ಪ್ರವೇಶಿಸುವ ಸ್ಪರ್ಧಿಗಳು ಇವರೇ ನೋಡಿ

ಕಿರುತೆರೆಯ ಬಿಗ್ ಶೋ ಬಿಗ್ ಬಾಸ್‌ಗೆ ಕೌಂಟ್ ಡೌನ್ ಶುರುವಾಗಿದೆ. ಇದೇ ಸೆಪ್ಟೆಂಬರ್ 24ಕ್ಕೆ ಶುರುವಾಗಲಿದೆ. ಪ್ರತಿ ದಿನ ಟಿವಿ ಪರದೆಯಲ್ಲಿ ರಂಜಿಸಲು ಬಿಗ್ ಬಾಸ್ ಬರುತ್ತಿದೆ. ಈ ಸೀಸನ್ 9ಕ್ಕೆ ಯಾರೆಲ್ಲಾ ಸ್ಪರ್ಧಿಗಳು ಬರಲಿದ್ದಾರೆ ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಆಗುತ್ತಿದೆ. ಈ ಕುರಿತ ಡಿಟೈಲ್ಸ್ ಇಲ್ಲಿದೆ.

ಬಿಗ್ ಬಾಸ್ ಓಟಿಟಿ ಮುಗಿದು, ಸೀಸನ್ 9ಕ್ಕೆ ಫ್ಯಾನ್ಸ್ ಕಾತರದಿಂದ ಕಾಯ್ತಿದ್ದಾರೆ. ಬಿಗ್ ಬಾಸ್ ಮನೆಗೆ ಪ್ರವೇಶಿಸುವ ಸ್ಪರ್ಧಿಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆಗುತ್ತಿದೆ. ಓಟಿಟಿಯಲ್ಲಿ ಗಮನ ಸೆಳೆದ ದಿ ಬೆಸ್ಟ್ ಸ್ಪರ್ಧಿಗಳಾದ ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ಸಾನ್ಯ ಅಯ್ಯರ್, ಆರ್ಯವರ್ಧನ್ ಗುರೂಜಿ ಈ ನಾಲ್ಕು ಜನ ಟಿವಿ ಬಿಗ್ ಬಾಸ್‌ಗೆ ಬರೋದು ಪಕ್ಕಾ.

ಸ್ಯಾಂಡಲ್‌ವುಡ್‌ನಲ್ಲಿ ಸಾಕಷ್ಟು ಸಿನಿಮಾಗಳ ಮೂಲಕ ಛಾಪೂ ಮೂಡಿಸಿರುವ ನಟಿ ಪ್ರೇಮ ಅವರು ಟಿವಿ ಬಿಗ್ ಬಾಸ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರರಂಗದಲ್ಲಿ ಅಂತರ ಕಾಯ್ದುಕೊಂಡಿರುವ ನಟಿ ಸೀಸನ್ 9ರಲ್ಲಿ ಬರಲಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಬರ್ತ್‌ಡೇ ಸಾಂಗ್ ಹೇಳುವ ಮೂಲಕ ಅಪಾರ ಅಭಿಮಾನಿಗಳ ಮನಗೆದ್ದ ಕಾಫಿನಾಡು ಚಂದು ಬಿಗ್ ಬಾಸ್‌ಗೆ ಬರಬೇಕು ಎಂಬುದು ಅಭಿಮಾನಿಗಳ ಆಶಯ. ಇದನ್ನೂ ಓದಿ:ನೆಗೆಟಿವ್ ಕಾಮೆಂಟ್ ಗೆ ಹೆದರಲ್ಲ, ತುಂಬಾ ಜನ ನನ್ನನ್ನು ಪ್ರೀತಿಸ್ತಾರೆ ಎಂದ ಸೋನು ಶ್ರೀನಿವಾಸ್ ಗೌಡ

`ಕಮಲಿ’ ಸೀರಿಯಲ್ ಖ್ಯಾತಿಯ ಅಮೂಲ್ಯ ಗೌಡ ಮತ್ತು ʻಮುದ್ದುಮಣಿಗಳುʼ ಖ್ಯಾತಿಯ ಸಮೀಕ್ಷಾ ಕೂಡ ಈ ಶೋನಲ್ಲಿ ಭಾಗವಹಿಸಲಿದ್ದಾರೆ.

ʻಗಿಚ್ಚಿ ಗಿಲಿಗಿಲಿʼ ಖ್ಯಾತಿಯ ಪ್ರಿಯಾಂಕ ಕಾಮತ್ ಕೂಡ ಟಿವಿ ಸೀಸನ್ ಬಿಗ್ ಬಾಸ್ 9ರಲ್ಲಿ ಬರಲಿದ್ದಾರೆ. ಇವರ ಜೊತೆ ದಿವ್ಯ ವಸಂತ ಕೂಡ ಇರಲಿದ್ದಾರೆ.

ಮಜಾ ಭಾರತ ಶೋ ಮೂಲಕ ಮೋಡಿ ಮಾಡಿರುವ ಚಂದ್ರಪ್ರಭ ಮತ್ತು ರಾಘವೇಂದ್ರ ಅವರು ಕೂಡ ತಮ್ಮ ಕಾಮಿಡಿ ಮೂಲಕ ದೊಡ್ಮನೆಯಲ್ಲಿ ರಂಜಿಸಲಿದ್ದಾರೆ. ಸರಿಗಮಪ ಶೋನ ಗಾಯಕಿ ಆಶಾ ಭಟ್ ಕೂಡ ಇರಲಿದ್ದಾರೆ. ಸೆಪ್ಟೆಂಬರ್‌ 24ರಂದು ಸಂಜೆ 6ಕ್ಕೆ ಗ್ರ್ಯಾಂಡ್‌ ಲಾಂಚ್‌ನಲ್ಲಿ ಸ್ಪರ್ಧಿಗಳ ಪಟ್ಟಿ ಅಧಿಕೃತವಾಗಿ ತಿಳಿಯಲಿದೆ.

Live Tv

Leave a Reply

Your email address will not be published.

Back to top button