ಸ್ಯಾಂಡಲ್‌ವುಡ್ ನಟ ಸುದೀಪ್ (Sudeep) ಅವರ ತಾಯಿಯ (Mother) ಅಂತಿಮ ದರ್ಶನ ಪಡೆಯಲು ಜೆಪಿ ನಗರದ ನಟನ ನಿವಾಸಕ್ಕೆ ‘ಬಿಗ್ ಬಾಸ್ ಕನ್ನಡ 10’ರ (Bigg Boss Kannada 10) ಸ್ಪರ್ಧಿಗಳು ಭೇಟಿ ನೀಡಿದ್ದಾರೆ. ಇದನ್ನೂ ಓದಿ:ಸರೋಜಕ್ಕ ಸಾಕ್ಷಾತ್ ಅನ್ನಪೂರ್ಣೇಶ್ವರಿ ಆಗಿದ್ದರು: ನಟ ಸುದೀಪ್ ತಾಯಿ ನಿಧನಕ್ಕೆ ಬೊಮ್ಮಾಯಿ ಸಂತಾಪ
ಸುದೀಪ್ ತಾಯಿಯ ನಿಧನ ಸುದ್ದಿ ತಿಳಿಯುತ್ತಿದ್ದಂತೆ ನಟನ ಮನೆಗೆ ತೆರಳಿ ‘ಬಿಗ್ ಬಾಸ್ ಕನ್ನಡ 10’ರ ವಿನ್ನರ್ ಕಾರ್ತಿಕ್ ಮಹೇಶ್ (Karthik Mahesh), ವಿನಯ್ ಗೌಡ (Vinay Gowda), ಸಿರಿ, ತುಕಾಲಿ ಸಂತೋಷ್ ಸರೋಜಾ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಅದಷ್ಟೇ ಅಲ್ಲ, ಬಿಗ್ ಬಾಸ್ ಖ್ಯಾತಿಯ ಪ್ರಥಮ್, ಆರ್ಯವರ್ಧನ್ ಗುರೂಜಿ, ರಂಜಿತ್ ಕೂಡ ಆಗಮಿಸಿದ್ದಾರೆ.
ಅಂದಹಾಗೆ, ನ್ಯುಮೋನಿಯದಿಂದ ಬಳಲುತ್ತಿದ್ದ ಸುದೀಪ್ ತಾಯಿ ಇಂದು (ಅ.20) ಬೆಳಗ್ಗೆ ವಿಧಿವಶರಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇನ್ನೂ ಇಂದು ಸಂಜೆ 7 ಗಂಟೆಗೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಸುದೀಪ್ ತಾಯಿಯ ಅಂತ್ಯಕ್ರಿಯೆ ನಡೆಯಲಿದೆ.