ಬಿಗ್ ಬಾಸ್ (Bigg Boss Kannada) ಮನೆಯಲ್ಲಿ ಸ್ನೇಹಕ್ಕೆ ಹೆಸರಾಗಿದ್ದವರು ವರ್ತೂರು ಸಂತೋಷ್ ಮತ್ತು ತುಕಾಲಿ ಸಂತು. ಇವರನ್ನು ಪ್ರೀತಿಯಿಂದಾನೇ ಬಿಗ್ ಬಾಸ್ ಕಂಟೆಸ್ಟೆಂಟ್ ಸಂತು-ಪಂತು (Santu-Panthu) ಅಂತಾನೇ ಕರೆಯುತ್ತಿದ್ದರು. ‘ಮತ್ಯಾರಲ್ಲೂ ನೋಡದ, ನಿಷ್ಕಳಂಕವಾದ ಸ್ನೇಹವನ್ನು ನಿಮ್ಮಿಬ್ಬರಲ್ಲಿ ನೋಡಿದ್ದೀನಿ’ ಕಿಚ್ಚ ಸುದೀಪ್ ವಾರಾಂತ್ಯದ ಎಪಿಸೋಡ್‌ನಲ್ಲಿ ಹೀಗೆ ಹೇಳಿದ್ದು ವರ್ತೂರು ಸಂತೋಷ್ (Varthuru Santosh) ಮತ್ತು ತುಕಾಲಿ ಸಂತೋಷ್ (Tukali Santu) ಸ್ನೇಹದ ಬಗ್ಗೆ. ಎಲಿಮಿನೇಷನ್ ಸಂದರ್ಭದಲ್ಲಿ ಇಬ್ಬರಲ್ಲಿ ಒಬ್ಬರು ಹೊರಗೆ ಹೋಗುತ್ತಾರೆ ಎಂಬ ಹಂತದಲ್ಲಿ ಕೂತಿದ್ದಾಗಲೂ ಅವರಿಬ್ಬರೂ ಒಬ್ಬರಿಗೊಬ್ಬರು ಬೆಂಬಲವಾಗಿಯೇ ಮಾತಾಡಿದ್ದರು.
Advertisement
ಸಂತು – ಪಂತು ಜೋಡಿಯಾದ ಇಬ್ಬರೂ ಆಡಿದ ಮಾತುಗಳಿಗೆ, ಆಡಿದ ಆಟಗಳಿಗೆ ಲೆಕ್ಕವೇ ಇಲ್ಲ. ಎಷ್ಟೇ ಮಾತುಗಳು ಕೇಳಿಬಂದರೂ ಅವರ ಸ್ನೇಹದಲ್ಲಿ ಬಿರುಕು ಬರಲೇ ಇಲ್ಲ. ಹಾಗೆಂದು ಭಿನ್ನಾಭಿಪ್ರಾಯಗಳಿಲ್ಲ ಎಂದಲ್ಲ. ಒಬ್ಬರಿಗೊಬ್ಬರು ಮಾತುಗಳಲ್ಲಿ ತಿವಿದುಕೊಂಡಿದ್ದು ಇದೆ, ಮುನಿಸಿಕೊಂಡಿದ್ದು ಇದೆ. ಆದರೆ ಮರುಕ್ಷಣದಲ್ಲಿಯೇ ಅದು ಸರಿಹೋಗಿ ಬಿಗ್‌ಬ್ಯಾಗ್ ಮೇಲೆ ಕೂತು ಹರಟಿದ್ದಾರೆ. ಈ ಬಿನ್‌ಬ್ಯಾಗ್ ಸ್ಟೋರಿ ಮನೆಯೊಳಗೂ ಹೊರಗೂ ಸಾಕಷ್ಟು ಸದ್ದು ಮಾಡಿತು. ತುಕಾಲಿ ಅವರ ತಂತ್ರಗಾರಿಕೆ ರೂಪುಗೊಳ್ಳುತ್ತಿದ್ದದ್ದೇ ಈ ಬಿನ್‌ಬ್ಯಾಗ್ ಮೇಲೆ.
Advertisement
Advertisement
ಸ್ಕೂಲ್ ಟಾಸ್ಕ್‌ನಲ್ಲಿ ಮಾಡಿದ ಮೋಡಿ
Advertisement
ತುಕಾಲಿ ಸಂತೋಷ್ ಅವರ ರಂಜನೀಯ ಪ್ರತಿಭೆ ಹೊರಗೆ ಬಂದಿದ್ದು ಸ್ಕೂಲ್ ಟಾಸ್ಕ್‌ನಲ್ಲಿ. ಉಳಿದವರು ತಮ್ಮ ಎದುರಾಳಿಗಳನ್ನು ತಿವಿಯಲು, ದೂರಲುಈ ಅವಕಾಶವನ್ನು ಬಳಸಿಕೊಂಡರೆ, ತುಕಾಲಿ ಸಂತೋಷ್ ಮಾತ್ರ ಬಾಲ್ಯದೊಳಗೆ ಹೋಗಿ ಬಂದಂತಿದ್ದರು. ‘ಹೊಡಿತೀನಿ’ ಎಂದು ಅವರು ಆಡುತ್ತಿದ್ದ ರೀತಿ ಹಲವು ವಾರಗಳ ಕಾಲ ಆಗಾಗ ಮನೆಯೊಳಗೆ ಪ್ರತಿಧ್ವನಿಸುತ್ತಲೇ ಇತ್ತು. ಅಲ್ಲದೇ ಬೃಂದಾವನ ಧಾರಾವಾಹಿ ತಂಡ ಮನೆಯೊಳಗೆ ಬಂದಾಗ ತುಕಾಲಿ ಸಂತೋಷ್, ವರ್ತೂರು ಸಂತೋಷ್, ಭಾಗ್ಯ, ತನಿಷಾ ಸೇರಿಕೊಂಡು ಮಾಡಿದ್ದ ಕಾಮಿಡಿಸ್ಕಿಟ್ ಕೂಡ ಎಲ್ಲರನ್ನೂ ನಕ್ಕುನಲಿಸಿತ್ತು. ಇದೇ ವಾರ ಅವರು ತೆಗೆದುಕೊಂಡ ಇಂಗ್ಲಿಷ್ ಕ್ಲಾಸ್ ಅಂತೂ ಮನೆಯ ಉಳಿದ ಸದಸ್ಯರಿಗೆ ಇಂಗ್ಲಿಷ್ ಕಲಿಸುವ ಬದಲು ಬರುವ ಇಂಗ್ಲಿಷ್ ಅನ್ನೂ ಮರೆಸುವಂತೆ ಮಾಡಿತ್ತು. ವಾರಾಂತ್ಯದಲ್ಲಿಯೂ ಕಿಚ್ಚ ಸುದೀಪ್ ಅವರು ತುಕಾಲಿ ಬಾಯಲ್ಲಿ ಇಂಗ್ಲಿಷ್ ಕೇಳಲು ಇಷ್ಟಪಡುತ್ತಿದ್ದರು.
ತಂತ್ರದಲ್ಲಿ ಚಾಣಕ್ಯ
ಬರೀ ನಗಿಸುವುದನ್ನೇ ನೆಚ್ಚಿಕೊಂಡಿದ್ದರೆ ತುಕಾಲಿ ಸಂತೋಷ್ ಇಷ್ಟು ದಿನಗಳ ಕಾಲ ಮನೆಯೊಳಗೆ ಇರಲು ಸಾಧ್ಯವೇ ಇರಲಿಲ್ಲವೇನೋ. ಆದರೆ ತುಕಾಲಿ ವ್ಯಕ್ತಿತ್ವ ಅಷ್ಟಕ್ಕೇ ಸೀಮಿತವಾಗಿರಲಿಲ್ಲ. ಅವರೊಳಗೊಬ್ಬ ತಂತ್ರಗಾರನೂ ಇದ್ದ. ಗಾಸಿಪ್ ಮಾಡುತ್ತೇನೆ ಎಂದು ಹೇಳಿಕೊಂಡೇ ಅವರು ಆಡಿದ ಗಾಳಿಸುದ್ದಿಗಳು ಮನೆಯೊಳಗೆ ಬೆಂಕಿ ಹಚ್ಚಿದ್ದೂ ಇದೆ. ಅದರಲ್ಲಿಯೂ ಕಳೆದ ಕೆಲವು ವಾರಗಳಿಂದ ಅವರು ವರ್ತೂರು ಸಂತೋಷ್ ಅವರೊಂದಿಗೆ ಸೇರಿ ಮಾಡಿದ ತಂತ್ರಗಾರಿಕೆಗೆ ಉಳಿದ ಸದಸ್ಯರೆಲ್ಲ ಬೆಕ್ಕಸ ಬೆರಗಾಗಿದ್ದಂತೂ ಹೌದು.
ಇತ್ತೀಚೆಗೆ ಕೂಡ, ಫಿನಾಲೆಯಲ್ಲಿ ನಿಮ್ಮ ಜೊತೆ ಇರಬೇಕಾದ ಇನ್ನೊಂದು ಕೈ ಯಾರದು ಎಂಬಪ್ರಶ್ನೆಗೆ ತುಕಾಲಿ ಅವರು, ‘ಸಂಗೀತಾ’ ಎಂದಿದ್ದರು. ಆದರೆ ಮುಂದಿನ ವಾರವೇ ಅವರು ಸಂಗೀತಾ ವಿರುದ್ಧ ಕಾರ್ತಿಕ್ ಅವರಿಗೆ ಸಪೋರ್ಟ್ ಮಾಡಿ ಮುಂದೆ ಬಿಟ್ಟರು. ಹೀಗೆ ಕಾಲಕ್ಕೆ ತಕ್ಕ ಹಾಗೆ ತಮ್ಮ ತಂತ್ರಗಾರಿಕೆ ಬದಲಿಸುತ್ತ, ತಮ್ಮ ಅನುಕೂಲಕ್ಕೆ ತಕ್ಕ ಹಾಗೆ ವಾತಾವರಣ ರೂಪಿಸಿಕೊಳ್ಳುವ ಚಾಣಕ್ಯ ಜಾಣತನವೇ ಅವರನ್ನು ಇಲ್ಲಿಯವರೆಗೆ ತಂದಿದೆ.
ಸವಾಲಿಗೆ ಸವಾಲ್
ಆರಂಭಿಕ ದಿನಗಳಲ್ಲಿ ವಿನಯ್ ಅವರ ಗುಂಪಿನಲ್ಲಿ ಗುರ್ತಿಸಿಕೊಂಡಿದ್ದ ತುಕಾಲಿ ಅವರು, ಹಳ್ಳಿ ಟಾಸ್ಕ್‌ನಲ್ಲಿ ಅವರ ತಂಡವನ್ನೇ ಸಪೋರ್ಟ್ ಮಾಡಿ ಸಂಗೀತಾ ತಂಡ ಸೋಲುವಂತೆ ಮಾಡಿದ್ದರು. ನಂತರದ ದಿನಗಳಲ್ಲಿ ವಿನಯ್ ತಂಡದಿಂದ ಒಬ್ಬೊಬ್ಬರಾಗಿ ಎಲಿಮಿನೇಟ್ ಆಗಿ ಮನೆಯಿಂದ ಹೊರಬೀಳತೊಡಗಿದರು. ಆಗ ತುಕಾಲಿ ಅವರ ತಂಡದಿಂದ ಹೊರಬಿದ್ದು ಸಂಗೀತಾ ಅವರಿಗೆ ಹತ್ತಿರವಾದರು. ಆದರೆ ಎಂಟನೇ ವಾರದಲ್ಲಿ ಸಂಗೀತಾ, ವಿನಯ್ ತಂಡವನ್ನು ಸೇರಿಕೊಂಡಾಗ ತುಕಾಲಿ ಅವರಿಗೆ ಎದುರಾಳಿಯಾದರು. ‘ನಿಮ್ಮ ತಂಡದಿಂದ ಕಾರ್ತಿಕ್ ಮತ್ತು ತುಕಾಲಿ ತಲೆ ಬೋಳಿಸಿಕೊಳ್ಳಬೇಕು’ ಎಂದು ಸಂಗೀತಾ ಸವಾಲು ಹಾಕಿದಾಗ ಕೊಂಚವೂ ಯೋಚಿಸದೆ ತಲೆಯನ್ನು ಬೋಳಿಸಿಕೊಂಡು ತಮ್ಮ ಬದ್ಧತೆಯನ್ನು ಮೆರೆದರು.