ಕಿರುತೆರೆಯ ʻಬಿಗ್ ಬಾಸ್ʼ (Bigg Boss Kannada) ಮೂಲಕ ಮೋಡಿ ಮಾಡಿದ್ದ ಚೆಲುವೆ ಅಕ್ಷತಾ ಕುಕ್ಕಿ (Akshatha Kuki) ಅವರು ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ದಾಂಪತ್ಯ ಜೀವನಕ್ಕೆ ಕಾಲಿಡಲು ನಟಿ ಅಕ್ಷತಾ ರೆಡಿಯಾಗಿದ್ದಾರೆ. ಈ ಬಗ್ಗೆ ನಟಿ ಅಕ್ಷತಾ ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ.
ಬಿಗ್ ಬಾಸ್ ಒಟಿಟಿಗೆ (Bigg Boss OTT) ಕಾಲಿಡುವ ಮೂಲಕ ಅಪಾರ ಅಭಿಮಾನಿಗಳ ಮನಗೆದ್ದ ಸ್ಪರ್ಧಿ ಅಕ್ಷತಾ ಕುಕ್ಕಿ ಅವರು ಸೀರಿಯಲ್ ಮತ್ತು ಒಂದಿಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. `ಮಾರ್ಟಿನ್’ (Martin Film) ಚಿತ್ರದಲ್ಲಿ ಧ್ರುವ ಸರ್ಜಾ (Dhruva Sarja) ಜೊತೆ ಅಕ್ಷತಾ ಕುಕ್ಕಿ (Akshatha Kuki) ನಟಿಸಿದ್ದಾರೆ. ಇದನ್ನೂ ಓದಿ:ಸಮಂತಾ ಬಳಿಕ ವಿಚಿತ್ರ ಕಾಯಿಲೆ ಬಗ್ಗೆ ಬಾಯ್ಬಿಟ್ಟ ಅನುಷ್ಕಾ ಶೆಟ್ಟಿ
ಅಕ್ಷತಾ ಕುಕ್ಕಿ ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಗುರುಹಿರಿಯರು ನಿಶ್ಚಯಿಸಿದ ವರನ ಜೊತೆ ಈಗಾಗಲೇ ಎಂಗೇಜ್‌ಮೆಂಟ್ ಮಾಡಿಕೊಂಡಿರುವ ನಟಿ ಮುಂದಿನ ತಿಂಗಳು ಮಾರ್ಚ್‌ನಲ್ಲಿ ಹಸೆಮಣೆ (Wedding) ಏರುತ್ತಿದ್ದಾರೆ. ಮದುವೆ ಪಕ್ಕಾ ಅರೆಂಜ್ ಮ್ಯಾರೇಜ್ ಆಗಿದೆ. ಅವಿನಾಶ್ (Avinash) ಜೊತೆ ಮಾರ್ಚ್ 27ರಂದು ಅಕ್ಷತಾ ಸಪ್ತಪದಿ ತುಳಿಯುತ್ತಿದ್ದಾರೆ. ಬೆಳಗಾವಿಯಲ್ಲಿ (Belagavi) ಗುರುಹಿರಿಯರು, ಆಪ್ತರ ಸಮ್ಮುಖದಲ್ಲಿ ಮದುವೆ ನಡೆಯಲಿದೆ ಎಂದು ನಟಿ ಅಕ್ಷತಾ ತಿಳಿಸಿದ್ದಾರೆ.
ಅಕ್ಷತಾ ಮದುವೆಯಾಗಿರುವ ವರ ಅವಿನಾಶ್, ಖಾಸಗಿ ಕಂಪನಿಯೊಂದರಲ್ಲಿ ಇಂಜಿನಿಯರ್ (Engineer) ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗಾಗಲೇ ಮದುವೆಗೆ ಸಕಲ ತಯಾರಿ ನಡೆಯುತ್ತಿದೆ. ಇನ್ನೂ ನಟಿ ಮದುವೆಗೆ ಕಿರುತೆರೆ ನಟ-ನಟಿಯರು ಬಿಗ್ ಬಾಸ್ ಸ್ಪರ್ಧಿಗಳು ಭಾಗಿಯಾಗಲಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k