ಬಿಗ್‌ಬಾಸ್ (Bigg Boss Kannada) ಮನೆಯೊಳಗೆ ಇಬ್ಬರು ಹೊಸ ಕಂಟೆಸ್ಟೆಂಟ್‌ಗಳು ವೈಲ್ಡ್‌ಕಾರ್ಡ್ ಎಂಟ್ರಿ ಕೊಟ್ಟಿದ್ದಾರೆ. ಅವರು ಮನೆಯೊಳಗಿನ ಸದಸ್ಯರ ಮನಸ್ಥಿತಿಯನ್ನು ಅರಿವು ಮಾಡಿಕೊಳ್ಳುತ್ತಿರುವಾಗಲೇ ಬಿಗ್‌ಬಾಸ್ ಟಾಸ್ಕ್ ಕೊಟ್ಟಿದ್ದಾರೆ.
ಸ್ವಿಮಿಂಗ್ ಫೂಲ್‌ನಲ್ಲಿರುವ ನೀರನ್ನು ಬಕೆಟ್‌ನಲ್ಲಿ ತೆಗೆದುಕೊಂಡು ಕೊಳವೆಯ ಒಳಗೆ ಎಸೆಯಬೇಕು. ಎದುರಾಳಿ ತಂಡದವರು ಅವರ ಗುರಿ ತಪ್ಪುವಂತೆ ಅವರನ್ನು ತಡೆಯಬೇಕು. ಇದು ಟಾಸ್ಕ್. ಆದರೆ ಈ ನೀರಾಟದ ಟಾಸ್ಕ್. ನೀರಿನಾಟದಲ್ಲಿ ಕಿಡಿಹೊತ್ತಿಕೊಂಡಿರುವುದು JioCinemaಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಬಹಿರಂಗಗೊಂಡಿದೆ.
ನೀರಿನ ಆಟ ಆಡುತ್ತಾಡುತ್ತ ಹೋರಾಟವನ್ನೇ ಶುರುಮಾಡಿದ್ದಾರೆ ಮನೆಯ ಸದಸ್ಯರು. ತುಕಾಲಿ ಸಂತೋಷ್ (Tukali Santu) ಅವರನ್ನು ಸ್ನೇಹಿತ್ ತಮ್ಮ ಗುರಾಣಿಯಿಂದ ನೂಕಿದ್ದಾರೆ. ವಿನಯ್ (Vinay) ಅವರಂತೂ ಸಂತೋಷ್ ಅವರನ್ನು ಬೀಳಿಸಿಯೇ ಬಿಟ್ಟಿದ್ದಾರೆ. ಮತ್ತೊಂದು ದೃಶ್ಯದಲ್ಲಿ ಸ್ನೇಹಿತ್ ಮತ್ತು ತುಕಾಲಿ ಪರಸ್ಪರ ಡಿಕ್ಕಿ ಹೊಡೆದು ಬಿದ್ದೇ ಬಿಟ್ಟಿದ್ದಾರೆ.
ಕೊನೆಗೆ ತುಕಾಲಿ ಅವರು, ‘ಬೇಕಂತ್ಲೇ ಮಾಡ್ತಿದ್ದಾರೆ. ನಾನು ಆಟ ಆಡಲ್ಲ ಎಂದು ಹೊರಟುಹೋಗಿದ್ದಾರೆ. ವಿನಯ್, ‘ಸತ್ಯವಾಗ್ಲೂ ಬೇಕಂತ ಮಾಡಿಲ್ಲ’ ಎಂದರೂ ಅವರು ಕೇಳಿಲ್ಲ. ವಿನಯ್ ಮತ್ತು ತುಕಾಲಿ ನಡುವೆ ಹೊತ್ತಿಕೊಂಡ ಕಿಡಿ ಏರುತ್ತಲೇ ಹೋಗಿದೆ. ನೀರಿನಾಟದ ಈ ಟಾಸ್ಕ್ ನಲ್ಲಿ ಕೊನೆಗೂ ಗೆದ್ದವರು ಯಾರು? ಸೋತವರು ಯಾರು? ಇಂದು ರಾತ್ರಿ ಗೊತ್ತಾಗಲಿದೆ.