ಬಿಗ್ ಬಾಸ್ (Bigg Boss Kannada) ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಕಳೆದ ಎರಡ್ಮೂರು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದಾರೆ. ಬಿಕಿನಿ ಫೋಟೋ ಆಯ್ತು, ಈಗ ಬೆಡ್‍ರೂಮ್ ಫೋಟೋವನ್ನ ನಟಿ ಹಂಚಿಕೊಂಡಿದ್ದಾರೆ.
ಮಾಲ್ಡೀವ್ಸ್‌ನಲ್ಲಿ (Maldives) ಮೋಜು ಮಸ್ತಿ ಮಾಡ್ತಿರುವ ಸೋನು ಗೌಡ, ಬಿಕಿನಿ (Bikini) ಫೋಟೋ ಹಂಚಿಕೊಂಡು ಪಡ್ಡೆಹುಡುಗರ ನಿದ್ದೆಕೆಡಿಸಿದ್ದರು. ಸೋನು ಹಾಟ್ ಅವತಾರಕ್ಕೆ ಹುಡುಗರು ಫಿದಾ ಆಗಿದ್ದರು. ಈಗ ನೋಡಿದ್ರೆ, ಬೆಡ್‍ರೂಮ್ ಫೋಟೋ ಹಂಚಿಕೊಂಡಿದ್ದಾರೆ. ಹಳದಿ ಬಣ್ಣದ ಮಾಡ್ರನ್ ಡ್ರೆಸ್‍ನಲ್ಲಿರುವ ವಿವಿಧ ಭಂಗಿಗಳ ಫೋಟೋಗಳನ್ನ ಶೇರ್ ಮಾಡಿದ್ದಾರೆ. ಈ ಫೋಟೋಗಳು ಕೂಡ ಸದ್ಯ ಸಖತ್ ವೈರಲ್ ಆಗುತ್ತಿವೆ. ಇದನ್ನೂ ಓದಿ:ಪರಿಣಿತಿ ಚೋಪ್ರಾ-ರಾಘವ್ ಮದುವೆ ಕಾರ್ಡ್ ಹೇಗಿದೆ ನೋಡಿ
ಇನ್ನೂ ಸೋನು ಈ ಹಿಂದೆ ಶೇರ್ ಮಾಡಿರುವ ಬಿಕಿನಿ ವಿಡಿಯೋ 19 ಮಿಲಿಯನ್‍ಗೂ ಅಧಿಕ ಅಂದರೆ 1 ಕೋಟಿ 90 ಲಕ್ಷ ವಿವ್ ಕಂಡಿದೆ. 10 ಲಕ್ಷ ಇನ್ಸ್ಟಾಗಾಂ ಫಾಲೋವರ್ಸ್ ಪಡೆದಿರುವ ಸೋನು ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಹವಾ ಕ್ರಿಯೇಟ್ ಮಾಡಿದ್ದಾರೆ. ಇದನ್ನೂ ಓದಿ:ಮಾಲ್ಡೀವ್ಸ್‌ನಲ್ಲಿ ಒಂದು ಸಿಗರೇಟ್ ಪ್ಯಾಕ್‌ಗೆ 1600 ಕೊಟ್ರಾ ಸೋನು ಗೌಡ?
ತನ್ನ ವಿಚಾರದಲ್ಲಿ ಯಾರಾದರೂ ಟ್ರೋಲ್ ಮಾಡಿದರೆ ಕಣ್ಣೀರು ಹಾಕುವ ಸೋನು ಶ್ರೀನಿವಾಸ್ ಗೌಡ, ಟ್ರೋಲ್ ಆಗುವಂತಹ ಹಲವಾರು ವಿಚಾರಗಳನ್ನು ಅವರು ಮಾಡುತ್ತಲೇ ಇರುತ್ತಾರೆ. ಹಾಗಾಗಿಯೇ ಟ್ರೋಲ್ ಮಾಡುವವರು ಇವರ ವಿಡಿಯೋಗಾಗಿ ಕಾಯುತ್ತಿರುತ್ತಾರೆ ಎನ್ನುವುದು ಸುಳ್ಳಲ್ಲ.
ಈ ಹಿಂದೆ ಇವರ ಕೆಲ ಖಾಸಗಿ ಫೋಟೋ- ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿತ್ತು. ಹಸಿಬಿಸಿ ದೃಶ್ಯಗಳನ್ನು ನೋಡಿ ಪಡ್ಡೆ ಹುಡುಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡಿದ್ದರು. ಜೊತೆಗೆ ಮೊನ್ನೆಯಷ್ಟೇ ಸೋನು ಹೊಸ ವೀಡಿಯೋವೊಂದನ್ನು ಶೇರ್ ಮಾಡಿದ್ದರು, ಹುಡುಗಿಯರಿಗೆ ಮಾತ್ರ ಹುಡುಗರು ನೋಡಬೇಡ ಎಂದು ಹಾಕಿ ಕುತೂಹಲ ಹೆಚ್ಚಿಸಿದ್ದರು.
ಕಂಪನಿಯೊಂದರ ಜಾಹೀರಾತಿಗೆ ಸೋನು ಗೌಡ ಬ್ರಾ ಹೇಗೆ ಧರಿಸುವುದು ಎಂಬ ವೀಡಿಯೋ ಮಾಡಿದ್ದರು. ಹೆಣ್ಣುಮಕ್ಕಳು ಹೇಗೆ ಬ್ರಾ ಹಾಕಬೇಕು, ಯಾವ ರೀತಿಯ ಬ್ರಾ ತೆಗೆದುಕೊಳ್ಳಬೇಕು ಎಂಬುವುದು ಸ್ಪಷ್ಟವಾಗಿ ವಿಡಿಯೋದಲ್ಲಿ ಸೂಚಿಸಿದ್ದರು. ಜೊತೆಗೆ ಅದನ್ನು ಯಾವ ರೀತಿ ಹಾಕಬೇಕು ಎಂಬುವುದರ ಬಗ್ಗೆ ಕೂಡ ವೀಡಿಯೋ ಮೂಲಕ ತಿಳಿಸಿದ್ದರು. ಆ ವಿಡಿಯೋ ಕೂಡ ವೈರಲ್ ಆಗಿತ್ತು.
ಟಿಕ್ ಟಾಕ್ ರೀಲ್ಸ್‍ನಿಂದ ಸೋಷಿಯಲ್ ಮೀಡಿಯಾದಲ್ಲಿ ಗುರುತಿಸಿಕೊಂಡಿದ್ದ ಸೋನು ಗೌಡ (Sonu Gowda) ಬಳಿಕ ಬಿಗ್ ಬಾಸ್ ಒಟಿಟಿ ಅಂಗಳಕ್ಕೆ ಕಾಲಿಟ್ಟು ಜನಪ್ರಿಯತೆ ಗಳಿಸಿದ್ದರು.
ರಾಕೇಶ್ ಅಡಿಗ, ರೂಪೇಶ್ ಶೆಟ್ಟಿ(Roopesh Shetty), ಸಾನ್ಯ ಅಯ್ಯರ್ (Saanya Iyer) ಜೊತೆ ಸೋನು ಮಿಂಚಿದ್ದರು. ದೊಡ್ಮನೆ ಆಟ ಮುಗಿದ ಮೇಲೆ ತಮ್ಮ ಯುಟ್ಯೂಬ್‍ನಲ್ಲಿ ಒಂದಲ್ಲಾ ಒಂದು ವಿಚಾರದೊಂದಿಗೆ ಚರ್ಚೆ ಮಾಡುತ್ತಾರೆ.
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]