ಸಲ್ಮಾನ್ ಖಾನ್ ನಡೆಸಿಕೊಡುವ ಹಿಂದಿ (Hindi) ಬಿಗ್ ಬಾಸ್ ಓಟಿಟಿ ಸೀಸನ್ 2 (Bigg Boss OTT 2) ಶುರುವಾಗಿ ಕೇವಲ 12 ಗಂಟೆ ಒಳಗೆ ಒಬ್ಬರು ಸ್ಪರ್ಧಿಯನ್ನು ಮನೆಯಿಂದ ಹೊರ ಹಾಕಿದ್ದಾರೆ ಬಿಗ್ ಬಾಸ್. ಈ ಸೀಸನ್ ನ ಕೊನೆಯ ಸ್ಪರ್ಧಿಯಾಗಿ ಮನೆಯೊಳಗೆ ಕಾಲಿಟ್ಟಿದ್ದ ಪುನೀತ್ ಕುಮಾರ್, ಬಿಗ್ ಬಾಸ್ ಮನೆಯಿಂದ ಹೊರ ಬಂದ ಮೊದಲ ಸ್ಪರ್ಧಿಯಾಗಿದ್ದಾರೆ. ಪುನೀತ್ ನಡವಳಿಕೆ ಇಷ್ಟವಾಗದೇ ಇರುವ ಕಾರಣದಿಂದಾಗಿ ಅವರನ್ನು ಎಲಿಮಿನೇಟ್ (Eliminate) ಮಾಡಲಾಗಿದೆ.
ಪುನೀತ್ ಸೂಪರ್ ಸ್ಟಾರ್ ಎಂದು ತನ್ನನ್ನೇ ತಾನು ಕರೆದುಕೊಳ್ಳುತ್ತಿದ್ದ ಪುನೀತ್ (Puneet Kumar), ನಿರಾಸೆಯಿಂದಲೇ ಮನೆಯಿಂದ ಆಚೆ ಬಂದಿದ್ದಾರೆ. ಬೈಕ್ ರೇಸರ್ ಆಗಿ ಗುರುತಿಸಿಕೊಂಡಿರುವ ಇವರು, ಮೊದಲ ದಿನವೇ ಇತರ ಸ್ಪರ್ಧಿಗಳ ಜೊತೆ ಹೊಂದಾಣಿಕೆಯಾಗಲು ಕಷ್ಟ ಪಡುತ್ತಿದ್ದರು. ಒಂದು ರೀತಿಯಲ್ಲಿ ಇತರರಿಗೆ ಕಿರಿಕಿರಿ ಆಗುವಂತೆ ನಡೆದುಕೊಳ್ಳುತ್ತಿದ್ದರು. ಇದನ್ನೂ ಓದಿ:ನಟ ಸಂಚಾರಿ ವಿಜಯ್ ಅವರ 2ನೇ ವರ್ಷದ ಪುಣ್ಯಸ್ಮರಣೆ
ಈ ಸೀಸನ್ ನಲ್ಲಿ ನೀಲಿ ಸಿನಿಮಾಗಳ ಮಾಜಿ ತಾರೆ ಮಿಯಾ ಖಲೀಫಾ (Mia Khalifa) ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಈವರೆಗೂ ಮಿಯಾ ಮನೆ ಒಳಗೆ ಪ್ರವೇಶ ಮಾಡಿಲ್ಲ. ಅಚ್ಚರಿ ಎನ್ನುವಂತೆ ಎಂಟ್ರಿ ಕೊಡಲಿದ್ದಾರಾ ಕಾದು ನೋಡಬೇಕು. ಮಿಯಾ ಪ್ರವೇಶಿಸಿದರೆ ಮನೆಯ ವಾತಾವರಣ ಹೇಗೆಲ್ಲ ಇರಲಿದೆ ಎನ್ನುವ ಕುರಿತು ಕುತೂಹಲ ಮೂಡಿದೆ. ಈ ಹಿಂದೆ ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ಕೂಡ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಂಡಿದ್ದರು.
ಮೊದಲ ಸೀಸನ್ ಬಿಗ್ ಬಾಸ್ ಒಟಿಟಿಯನ್ನ ಕರಣ್ ಜೋಹರ್ ನಿರೂಪಣೆ ಮಾಡಿದ್ದರು. ಆದರೆ 2ನೇ ಸೀಸನ್ನ ಸಲ್ಮಾನ್ ಖಾನ್ (Salman Khan) ನಿರೂಪಣೆ ಮಾಡುತ್ತಿದ್ದಾರೆ. ಜೊತೆಗೆ ಸಲ್ಮಾನ್ ಈ ಸೀಸನ್ ಹೇಗಿರಲಿದೆ ಎನ್ನುವ ಕುರಿತು ಮಾತನಾಡಿದ್ದಾರೆ. ವಿಚಿತ್ರ ಮನಸ್ಥಿತಿಯ ಸ್ಪರ್ಧಿಗಳು ಈಗಾಗಲೇ ಮನೆಗೆ ಪ್ರವೇಶ ಮಾಡಿದ್ದಾರೆ.