ಉಡುಪಿ: ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ನಿಗೂಢ ಸಾವು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ದೊರೆತಿದೆ.
ಶಿರೂರು ಶ್ರೀಗೆ ಭೂ ಮಾಫಿಯಾ ಜೊತೆ ಸಂಪರ್ಕ ಇದೆ ಎನ್ನಲಾಗುತ್ತಿದ್ದು, ಈ ಕುರಿತು ಹಲವು ಆಯಾಮಗಳಲ್ಲಿ ವಿಚಾರಣೆ ನಡೆಯುತ್ತಿದೆ. ಮಠ ಸಂಘರ್ಷ, ಭೂ ವ್ಯವಹಾರ, ಅನೈತಿಕ ಸಂಬಂಧದ ವಿಚಾರದಲ್ಲಿಯೂ ತನಿಖೆ ನಡೆಸಲಾಗುತ್ತಿದೆ. ತನಿಖೆಗೆ ಉಡುಪಿ ಎಸ್ ಪಿ 5 ವಿಶೇಷ ತಂಡಗಳನ್ನು ರಚಿಸಿದ್ದಾರೆ. ಇದನ್ನೂ ಓದಿ: ಊಟ ನೀಡ್ತಿದ್ದ ಮಹಿಳೆ ಮೈ ಮೇಲೆ ಶಿರೂರು ಶ್ರೀಗಳ ಆಭರಣಗಳು
Advertisement
ಉಡುಪಿಯಲ್ಲಿರುವ ಪ್ರಮುಖ ಉದ್ಯಮಿ ಹಾಗೂ ಬಿಲ್ಡರ್ ಗಳ ತನಿಖೆ ನಡೆಸಲಾಗುತ್ತಿದೆ. ಇದರ ಜೊತೆಗೆ ಸ್ವಾಮೀಜಿಗೆ 26 ಕೋಟಿ ರೂ. ವಂಚನೆ ನಡೆದಿದೆ ಅನ್ನೋ ವಿಡಿಯೋ ಮತ್ತು ಆಡಿಯೋ ವೈರಲ್ ಆಗಿದ್ದು, ಈ ಬಗ್ಗೆಯೂ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಒಟ್ಟಿನಲ್ಲಿ ಸ್ವಾಮೀಜಿಗಳ ರಿಯಲ್ ಎಸ್ಟೇಟ್ ಉದ್ಯಮ ಪಾಲುದಾರರ ತೀವ್ರ ವಿಚಾರಣೆ ಆರಂಭವಾಗಿದೆ. ಇದನ್ನೂ ಓದಿ: ಶಿರೂರು ಶ್ರೀಗೆ ಇಬ್ಬರು ಉದ್ಯಮಿಗಳಿಂದ ಮೋಸ- ಬರೋಬ್ಬರಿ 26 ಕೋಟಿ ರೂ. ದೋಖಾ
Advertisement
ಸ್ವಾಮೀಜಿಗಳ ಬಳಿ ನೂರಾರು ಎಕರೆ ಜಮೀನು ಇದೆ. ಸುಮಾರು 30 ಕೋಟಿ ರೂ. ವೆಚ್ಚದ ಕಮರ್ಷಿಯಲ್ ಕಾಂಪ್ಲೆಕ್ಸ್ ನಿರ್ಮಾಣ ಕಾರ್ಯದಲ್ಲಿವೆ. ಈ ವಿಚಾರದಲ್ಲಿಯೂ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಮುಂಬೈ ಮೂಲದ ಉದ್ಯಮಿಯೊಬ್ಬರ ಜೊತೆ ಈ ಕಾಂಪ್ಲೆಕ್ಸ್ ನಿರ್ಮಾಣ ಮತ್ತು ಸೇಲ್ ಬಗ್ಗೆ ಸಾಕಷ್ಟು ಚರ್ಚೆಗಳು, ಜಟಾಪಟಿ ನಡೆದಿತ್ತು ಅನ್ನೋ ಮಾತುಗಳು ಕೂಡ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿಯೂ ಕೂಡ ಪೊಲೀಸರು ಈಗಾಗಲೇ ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ನಿಧನಕ್ಕೆ ಟ್ವಿಸ್ಟ್!
Advertisement
ಬಹು ಅಂಗಾಂಗ ವೈಫಲ್ಯದಿಂದ ತೀವ್ರ ಅಸ್ವಸ್ಥರಾಗಿದ್ದ ಶ್ರೀಗಳು ಗುರುವಾರ ಬೆಳಗ್ಗೆ ಹರಿಪಾದ ಸೇರಿದ್ದರು. ಶ್ರೀಗಳ ಸಾವಿನ ಬಳಿಕ ಅವರಿಗೆ ವಿಷಪ್ರಾಶನ ಮಾಡಿಸಲಾಗಿದೆಯೇ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಇದಕ್ಕೆ ಪೂರಕವಾಗಿರುವಂತೆ ಕೆಎಂಸಿ ಆಸ್ಪತ್ರೆಯ ವೈದ್ಯರೂ ದೇಹದಲ್ಲಿ ವಿಷಕಾರಕ ಅಂಶ ಪತ್ತೆಯಾಗಿದೆ ಅಂದಿದ್ದರು. ಈ ಹಿನ್ನೆಲೆಯಲ್ಲಿ ಶ್ರೀಗಳ ಪೂರ್ವಾಶ್ರಮದ ಸಹೋದರ ಲಾತವ್ಯ ಆಚಾರ್ಯ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದರು.
Advertisement
ದೂರು ದಾಖಲಿಸಿಕೊಂಡಿರೋ ಪೊಲೀಸರು ಶ್ರೀಗಳಿಗೆ ದಿನಾಲೂ ಫಲಾಹಾರ ತರುತ್ತಿದ್ದ ಮಹಿಳೆಯನ್ನು ಉಡುಪಿ ಪೋಲಿಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಇನ್ನು ಶ್ರೀಗಳ ಸಾವಿನ ಸಂಬಂಧ ಹಿರಿಯಡ್ಕ ಠಾಣೆಯಲ್ಲಿ ದೂರು ದಾಖಲಾಗಿಸಿದ್ದ ಅವರ ಪೂರ್ವಾಶ್ರಮದ ಸಹೋದರ ಲಾತವ್ಯ ಆಚಾರ್ಯರನ್ನು ಕೂಡಾ ವಿಚಾರಣೆ ನಡೆಸಲಾಗಿದೆ.