ಮುಂಬೈ: ತಲಾ 3 ಪಂದ್ಯಗಳನ್ನು ಗೆದ್ದು ವಿಶ್ವಾಸದಲ್ಲಿರುವ ಕನ್ನಡಿಗ ಮಯಾಂಕ್ ಅಗರ್ವಾಲ್ ನಾಯಕತ್ವದ ಕಿಂಗ್ಸ್ ಪಂಜಾಬ್ ಮತ್ತು ಕೇನ್ ವಿಲಿಯಮ್ಸನ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಇಂದು ಸೆಣಸಲಿವೆ.
ಸಂಜೆ 7.30ಕ್ಕೆ ನಡೆಯುವ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಹಾಲಿ ಚಾಂಪಿಯನ್ ಚೆನ್ನೈ ಸೂಪರ್‌ಕಿಂಗ್ಸ್ ತಂಡಗಳು ಹಣಾಹಣಿ ನಡೆಸಲಿವೆ. ಇದನ್ನೂ ಓದಿ: ಡಿಕೆ ಸ್ಫೋಟಕ ಫಿಫ್ಟಿ – ಕೊಹ್ಲಿ ಸ್ಟನ್ನಿಂಗ್ ಕ್ಯಾಚ್ – ಡೆಲ್ಲಿ ವಿರುದ್ಧ ಆರ್ಸಿಬಿಗೆ 16 ರನ್‍ಗಳ ಜಯ
ಡಿ.ವೈ.ಪಾಟೀಲ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂಜಾಬ್ ಮತ್ತು ಎಸ್‌ಆರ್‌ಎಚ್ ನಡುವಿನ ಪಂದ್ಯವು ರೋಚಕ ಹಣಾಹಣಿಗೆ ಸಾಕ್ಷಿಯಾಗಲಿವೆ. ಎರಡೂ ತಂಡಗಳೂ ಈ ಟೂರ್ನಿಯಲ್ಲಿ ಸಿಹಿ, ಕಹಿಯನ್ನು ಸಮನಾಗಿ ಅನುಭವಿಸಿದ್ದು, 5ಕ್ಕೆ ತಲಾ 3 ಪಂದ್ಯಗಳಲ್ಲಿ ಜಯ ಸಾಧಿಸಿವೆ. ಈವರೆಗೆ 17 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, 5 ಪಂದ್ಯಗಳಲ್ಲಿ ಪಂಜಾಬ್ ಹಾಗೂ 12 ಪಂದ್ಯಗಳಲ್ಲಿ ಹೈದರಾಬಾದ್ ಗೆಲುವು ಸಾಧಿಸಿದೆ.
ಮೊದಲೆರಡು ಪಂದ್ಯಗಳಲ್ಲಿ ಸೋತ ನಂತರ ಹೈದ್ರಾಬಾದ್ ತಂಡವು ಸತತ 3 ಪಂದ್ಯಗಳಲ್ಲಿ ಜಯ ಸಾಧಿಸಿತು. ಬ್ಯಾಟಿಂಗ್ ಲಯಕ್ಕೆ ಮರಳಿರುವ ಜೇಸನ್ ರಾಯ್ ಮತ್ತು ಕೇನ್ ವಿಲಿಯಮ್ಸನ್ ತಂಡವನ್ನು ಮುನ್ನಡೆಸುತ್ತಿದ್ದರೆ, ಜೇಸನ್ ಹೋಲ್ಡರ್, ಭುವನೇಶ್ವರ್ ಕುಮಾರ್, ರಶೀದ್ ಖಾನ್ ಬೌಲಿಂಗ್‌ನಲ್ಲಿ ತಮ್ಮ ಪ್ರಾಬಲ್ಯ ಮೆರೆಯುತ್ತಾ ಗೆಲುವಿನ ಹಾದಿಗೆ ತರುತ್ತಿದ್ದಾರೆ.
ಪಂಜಾಬ್ ತಂಡವು ಆರ್‌ಸಿಬಿ, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳನ್ನು ಸೋಲಿಸಿದೆ. ಅಲ್ಲದೆ ತಾನು ಸೋತ ಎರಡು ಪಂದ್ಯಗಳಲ್ಲಿಯೂ ಉತ್ತಮ ಪ್ರದರ್ಶನವನ್ನೇ ನೀಡಿತ್ತು. ಮಯಾಂಕ್ ಅಗರ್ವಾಲ್, ಶಿಖರ್ ಧವನ್, ಹೊಸಪ್ರತಿಭೆ ಜಿತೇಶ್ ಶರ್ಮಾ ಉತ್ತಮ ಲಯದಲ್ಲಿದ್ದಾರೆ. ಇದನ್ನೂ ಓದಿ: 7 ವಿಕೆಟ್‌ಗಳಿಂದ ಗೆದ್ದ ಟೀಂ ಇಂಡಿಯಾಗೆ ಶೇ.20ರಷ್ಟು ದಂಡ
ಆಲ್‌ರೌಂಡರ್‌ಗಳ ಸವಾಲ್
ಮೊದಲ ಬಾರಿಗೆ ಐಪಿಎಲ್ ನಾಯಕತ್ವದ ಹೊಣೆ ಹೊತ್ತಿರುವ ಭಾರತ ಕ್ರಿಕೆಟ್ ತಂಡದ ಇಬ್ಬರು ಆಲ್‌ರೌಂಡರ್‌ಗಳಾದ ರವೀಂದ್ರ ಜಡೇಜಾ ಮತ್ತು ಹಾರ್ದಿಕ್ ಪಾಂಡ್ಯ ನಾಯಕತ್ವದ ತಂಡಗಳು ಇಂದು ಮುಖಾಮುಖಿಯಾಗವೆ. ಗುಜರಾತ್ ಹೊಸ ತಂಡದ ಸೇರ್ಪಡೆಯಿಂದ ಇದೇ ಮೊದಲಬಾರಿಗೆ ತಂಡಗಳು ಮುಖಾಮುಖಿಯಾಗುತ್ತಿದ್ದು, ಪಂದ್ಯವು ಸಂಜೆ 7.30ಕ್ಕೆ ಪುಣೆಯಲ್ಲಿರುವ ಮಹಾರಾಷ್ಟç ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದನ್ನೂ ಓದಿ: ಅಯ್ಯರ್‌ಗೆ 12 ಲಕ್ಷ ದಂಡ – ಐಪಿಎಲ್‌ನಲ್ಲಿ ದಂಡ ಹಾಕೋದು ಯಾಕೆ?
ಬಲಿಷ್ಠ ತಂಡಗಳ ಪೈಕಿ ಈಗಾಗಲೇ ವೋಟಿಂಗ್‌ಪೋಲ್ ನಡೆಸಲಾಗುತ್ತಿದ್ದು, ಪಂಜಾಬ್ ಗೆಲುವಿಗೆ 19,764 ಮಂದಿ, ಎಸ್‌ಆರ್‌ಎಚ್‌ಗೆ 20,554 ಮಂದಿ ಬೆಂಬಲಿಸಿದ್ದಾರೆ. ಅಂತೆಯೇ ಗುಜರಾತ್ ಟೈಟನ್ಸ್‌ಗೆ 9,682 ಮಂದಿ ಪ್ರೋತ್ಸಾಹಿಸಿದ್ದು, ಚೆನ್ನೈ 10,618 ಜನರ ಬೆಂಬಲ ಗಳಿಸಿದೆ. ಚೆನ್ನೈ ಈಗಾಗಲೇ ಐಪಿಎಲ್ ಕ್ರಮಾಂಕದಲ್ಲಿ ಕೆಳಕ್ಕೆ ಕುಸಿದಿದ್ದು, ಪ್ಲೆ-ಆಫ್ ತಲುಪಲು ಮುಂದಿನ ಎಲ್ಲ ಪಂದ್ಯಗಳಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ.