ಪಟ್ನಾ: ಬಾಲಕಿಯರ ಶಾಲೆಗೆ ನುಗ್ಗಿದ್ದ ದುಷ್ಕರ್ಮಿಗಳ ತಂಡವೊಂದು ಸುಮಾರು 40 ಬಾಲಕಿಯರ ಮೇಲೆ ಹಲ್ಲೆ ನಡೆಸಿರುವ ಘಟನೆ ಬಿಹಾರದ ಸೂಪೌಲ್ ಜಿಲ್ಲೆಯಲ್ಲಿ ತ್ರಿವೇಣಿಗಂಜ್ ಗ್ರಾಮದಲ್ಲಿ ವರದಿಯಾಗಿದೆ.
ಹಲ್ಲೆಗೊಳಗಾದ ಬಾಲಕಿಯರು ಕಸ್ತೂರ್ಬಾ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ 40 ಬಾಲಕಿಯರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವೈದ್ಯರು ಎಲ್ಲಾ ಬಾಲಕಿಯರು ಆರೋಗ್ಯವಾಗಿದ್ದು ಹೆಚ್ಚಿನ ಚಿಕಿತ್ಸೆ ಅಗತ್ಯವಿರುವುದರಿಂದ ಆಸ್ಪತ್ರೆಯಲ್ಲೇ ದಾಖಲು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
Advertisement
Because CM personally interferes to ensure that rapists & perpetrators gets a free run. In majority cases his party men, law makers and office bearers are the main culprits. If an honest officer tries to catch hold of them, He/she is transferred immediately. #NitishKaAatankRaj https://t.co/vdVH3ro5BF
— Tejashwi Yadav (@yadavtejashwi) October 7, 2018
Advertisement
ಶಾಲೆಯ ಬಳಿ ಬರುತ್ತಿದ್ದ ಸ್ಥಳೀಯ ಪುಂಡ ಯುವಕರ ಗುಂಪು ಪ್ರತಿದಿನ ವಿದ್ಯಾರ್ಥಿನಿಗಳೊಂದಿಗೆ ಅಸಭ್ಯವಾಗಿ ವರ್ತಸುತಿತ್ತು. ಇದನ್ನು ಆಕ್ಷೇಪಿಸಿದ ಕಾರಣ ಪುಂಡರ ಗುಂಪು ನೇರ ಶಾಲೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ಈ ವೇಳೆ ಹಲ್ಲೆ ತಡೆಯಲು ಬಂದ ಇತರೇ ಬಾಲಕಿಯರ ಮೇಲೆಯೂ ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎಂದು ಶಾಲೆ ಮೇಲ್ವಿಚಾರಕರು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ. ಅಲ್ಲದೇ ಹಿಂದೆಯೂ ಯುವಕರ ಅಸಭ್ಯ ವರ್ತನೆ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಆದರೆ ಯಾವುದೇ ಪ್ರಯೋಜನ ಆಗಿರಲಿಲ್ಲ ಎಂದು ತಿಳಿಸಿದ್ದಾರೆ.
Advertisement
ಘಟನೆಯಲ್ಲಿ ಬಾಲಕಿಯರ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಪೊಲೀಸರಿಗೆ ಸೂಚನೆ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv