ಪಾಟ್ನಾ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಅಗ್ನಿಫಥ್ ಯೋಜನೆ ವಿರೋಧಿಸಿ ನಡೆಯುತ್ತಿರುವ ಹಿಂಸಾ ರೂಪ ಪ್ರತಿಭಟನೆಯಿಂದಾಗಿ ನಾಲ್ಕೇ ದಿನಗಳಲ್ಲಿ 200 ಕೋಟಿ ರೂ. ಮೌಲ್ಯದ ಆಸ್ತಿ ನಷ್ಟವಾಗಿದೆ.
Advertisement
50 ರೈಲು ಬೋಗಿಗಳಿಗೆ ಬೆಂಕಿ ಹಚ್ಚಲಾಗಿದೆ. 5 ರೈಲ್ವೆ ಇಂಜಿನ್‌ಗಳು ಸಂಪೂರ್ಣ ಕರಕಲಾಗಿವೆ. ಇನ್ನೂ ಅನೇಕ ತಾಂತ್ರಿಕ ಉಪಕರಣಗಳು ಬೆಂಕಿಗೆ ಆಹುತಿಯಾಗಿವೆ. 200 ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಅದರಲ್ಲಿ 4 ಎಕ್ಸ್‌ಪ್ರೆಸ್ ರೈಲುಗಳು ಸೇರಿದಂತೆ ಪೂರ್ವ ಉತ್ತರ ರೈಲ್ವೆಯ 30 ರೈಲು ಸಂಚಾರ ರದ್ದಾಗಿದೆ ಎಂದು ದಾನಾಪುರ ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಪ್ರಭಾತ್‌ಕುಮಾರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನಾಳೆ ಬೆಂಗ್ಳೂರಿನ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಗಿಲ್ಲ ಅವಕಾಶ – ಯಾವೆಲ್ಲ ರಸ್ತೆಗಳು?
Advertisement
Advertisement
12 ಜಿಲ್ಲೆಗಳಲ್ಲಿ ಇಂಟರ್‌ನೆಟ್ ಸ್ಥಗಿತ: ಪ್ರತಿಭಟನಾ ಕಿಚ್ಚು ಹೆಚ್ಚಿದಂತೆ ಪ್ರತಿಭಟನಾಕಾರರ ನಡುವೆ ಸಂವಹನ ತಡೆಯಲು ಪೊಲೀಸ್ ಇಲಾಖೆ ಹಾಗೂ ಸರ್ಕಾರ ನಿರ್ಧರಿಸಿದ್ದು, 12 ಜಿಲ್ಲೆಗಳಲ್ಲಿ ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿದೆ. 170 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, 46 ಮಂದಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ʼಅಗ್ನಿಪಥʼ ಹಿಂಸಾಚಾರ – ಪ್ರತಿಭಟನಾಕಾರರಿಗೆ ಆಸ್ಪತ್ರೆಯಿಂದಲೇ ಸೋನಿಯಾ ಗಾಂಧಿ ಮನವಿ
Advertisement
ಏನಿದು ಅಗ್ನಿಪಥ್ ಯೋಜನೆ?: ಭಾರತೀಯ ಯುವಕರಿಗೆ ಶಸ್ತ್ರಾಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಅಗ್ನಿಪಥ್ ಎಂಬ ಹೊಸ ಅಲ್ಪಾವಧಿಯ ನೇಮಕಾತಿ ಯೋಜನೆಯನ್ನು ಕೇಂದ್ರ ಪ್ರಾರಂಭಿಸಿದೆ. ಅಗ್ನಿಪಥ್ ಎಂದು ಕರೆಯಲ್ಪಡುವ ಯೋಜನೆ 17.5 ರಿಂದ 21 ವರ್ಷ ವಯಸ್ಸಿನ ಯುವಕರು 4 ವರ್ಷಗಳ ಅವಧಿಗೆ 3 ಸೇವೆಗಳಲ್ಲಿ ಯಾವುದಾದರೂ ಒಂದರಲ್ಲಿ ಸೇರಿಕೊಳ್ಳಬಹುದು.
ಇದೀಗ ಪ್ರತಿಭಟನೆಯನ್ನು ತಗ್ಗಿಸಲು ಶೇ.10 ರಷ್ಟು ಮೀಸಲಾತಿ ನೀಡಲು ನಿರ್ಧರಿಸಿದೆ. ಅಗ್ನಿವೀರ್ ಮೊದಲ ಬ್ಯಾಚ್ ನೇಮಕಾತಿಗೆ 5 ವರ್ಷ ವಯೋಮಿಯಿ ಸಡಿಲಿಕೆ ನೀಡಲಾಗಿದೆ.