ಭಾರೀ ಸ್ಫೋಟಕ್ಕೆ 3 ಅಂತಸ್ತಿನ ಮನೆ ಕುಸಿತ- 5 ಜನ ಸಾವು

Public TV
1 Min Read
bihar

ಪಾಟ್ನಾ: ಭಾರೀ ಸ್ಫೋಟದಿಂದ 3 ಅಂತಸ್ತಿನ ಕಟ್ಟಡವೊಂದು ಕುಸಿದು, ಅದರಲ್ಲಿದ್ದ 5 ಜನ ಸಾವನ್ನಪ್ಪಿದ್ದು, 8 ಜನರು ಗಂಭೀರ ಗಾಯಗೊಂಡಿರುವ ಘಟನೆ ಬಿಹಾರದ ಭಾಗಲ್ಪುರ್ ಜಿಲ್ಲೆಯಲ್ಲಿ ನಡೆದಿದೆ.

ಸ್ಥಳೀಯ ಪೊಲೀಸ್ ಠಾಣೆಯಿಂದ 100 ಮೀಟರ್ ದೂರದಲ್ಲಿರುವ ಜಿಲ್ಲೆಯ ಕಜ್ವಾಲಿಚಕ್ ಪ್ರದೇಶದ ಅನಾಥಾಶ್ರಮದ ಪಕ್ಕದಲ್ಲಿ ಈ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಎರಡರಿಂದ ಮೂರು ಮನೆಗಳಿಗೂ ಹಾನಿಯಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ತುರ್ತು ಸೇವೆಗಳು ತಕ್ಷಣವೇ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಗಾಯಾಳುಗಳನ್ನು ಮಾಯಗಂಜ್‍ನ ಜೆಎಲ್‍ಎನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಆಸ್ಪತ್ರೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಉಳಿದವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಸಿದ ಕಟ್ಟಡದ ನಿವಾಸಿಗಳು ಪಟಾಕಿ ತಯಾರಿಕೆಯಲ್ಲಿ ತೊಡಗಿದ್ದರು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದನ್ನೂ ಓದಿ: ನಾನೇನು ಕಚ್ಚುವುದಿಲ್ಲ, ಮತ್ತೇಕೆ ನಿಮಗೆ ಭಯ? – ಪುಟೀನ್‍ಗೆ ವ್ಯಂಗ್ಯ ಮಾಡಿದ ಉಕ್ರೇನ್ ಅಧ್ಯಕ್ಷ

bihar 1

ಗನ್‍ಪೌಡರ್, ಅಕ್ರಮ ಪಟಾಕಿಗಳು ಮತ್ತು ಕಟ್ಟಡದಲ್ಲಿ ಸಂಗ್ರಹಿಸಲಾದ ದೇಶಿ ನಿರ್ಮಿತ ಬಾಂಬ್‍ಗಳಿಂದ ಈ ಸ್ಫೋಟ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿವೆ. ಘಟನೆ ಕುರಿತು ತನಿಖೆ ನಡೆಯುತ್ತಿದೆ ಎಂದು ಭಾಗಲ್ಪುರ ರೇಂಜ್ ಡಿಐಜಿ ಸುಜಿತ್ ಕುಮಾರ್ ತಿಳಿಸಿದರು. ಇದನ್ನೂ ಓದಿ: ಗಡಿಗಳಲ್ಲಿ ಹೆಣ್ಮಕ್ಕಳ ಮೇಲೆ ಸೈನಿಕರಿಂದ ಹಲ್ಲೆ – ಕರಾಳತೆ ಬಿಚ್ಚಿಟ್ಟ ವಿದ್ಯಾರ್ಥಿನಿಯರು

Share This Article