ಉದ್ದೇಶಪೂರ್ವಕವಾಗಿಯೇ ಕೆಡವಲಾಗಿದೆ: 1700 ಕೋಟಿಯ ಸೇತುವೆ ಕುಸಿತಕ್ಕೆ ಬಿಹಾರ ಡಿಸಿಎಂ ಸಮರ್ಥನೆ

Public TV
1 Min Read
Tejashwi Yadav

ಪಾಟ್ನಾ: ಗಂಗಾ ನದಿಗೆ (Ganga River) ನಿರ್ಮಿಸಲಾಗುತ್ತಿದ್ದ ಸೇತುವೆಯನ್ನು ಉದ್ದೇಶಪೂರ್ವಕವಾಗಿಯೇ ಕೆಡವಲಾಗಿದೆ ಎಂದು ಬಿಹಾರ ಡಿಸಿಎಂ ತೇಜಸ್ವಿ ಯಾದವ್ (Bihar DCM Tejashwi Yadav) ಹೇಳಿರುವುದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

ತೇಜಸ್ವಿ ಯಾದವ್‌ ಪ್ರತಿಕ್ರಿಯಿಸಿ,  ಕಳೆದ ವರ್ಷದ ಏಪ್ರಿಲ್ 30ರಂದು ಈ ಸೇತುವೆಯ ಒಂದು ಭಾಗ ಕುಸಿದ ಬಳಿಕ ನಾವು ಐಐಟಿ-ರೂರ್ಕಿಯನ್ನು ಸಂಪರ್ಕಿಸಿದೆವು. ಇವರು ನಡೆಸಿದ ಅಂತಿಮ ವರದಿ ಇನ್ನೂ ಕೈಸೇರಬೇಕಿದೆ. ಆದರೆ ಸೇತುವೆಯ ರಚನೆಯನ್ನು ಅಧ್ಯಯನ ಮಾಡಿದ ತಜ್ಞರು ಗಂಭೀರ ದೋಷಗಳಿವೆ ಎಂದು ನಮಗೆ ತಿಳಿಸಿದ್ದರು ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ನಿಮಗೆ ಉಚಿತ ವಿದ್ಯುತ್‌ ಬೇಕೇ ?- ಷರತ್ತು ಓದಿ ನೋಂದಣಿ ಮಾಡಿ

1,700 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದ ಈ ಸೇತುವೆಯನ್ನು ಉದ್ದೇಶಪೂರ್ವಕವಾಗಿಯೇ ಉರುಳಿಸಿದ್ದೇವೆ ಎಂಬ ಡಿಸಿಎಂ ಹೇಳಿಕೆ ವಿಪಕ್ಷಗಳಿಗೆ ಆಹಾರವಾಗಿದ್ದು ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ನಿರ್ಮಾಣದ ಹೊಣೆ ಹೊತ್ತಿರುವ ಎಸ್‍ಪಿ ಸಿಂಗ್ಲಾ ಕಂಪನಿ ವಿರುದ್ಧ ಸೂಕ್ತ ಕ್ರಮ ಜರುಗಿಸಿ ಎಂದು ಅಧಿಕಾರಿಗಳಿಗೆ ಸಿಎಂ ನಿತೀಶ್ ಕುಮಾರ್ ಆದೇಶ ನೀಡಿದ್ದಾರೆ.

ಬಿಹಾರದ ಖಗರಿಯಾದಲ್ಲಿ ನಿರ್ಮಿಸಲಾಗುತ್ತಿದ್ದ ಅಗುವನಿ ಸುಲ್ತಾನ್‌ಗಂಜ್ ಗಂಗಾ (Bhagalpur’s Sultanganj) ಸೇತುವೆ ಭಾನುವಾರ ಕುಸಿದು ಬಿದ್ದಿತ್ತು. ಏಪ್ರಿಲ್‌ನಲ್ಲಿ ಸುರಿದಿದ್ದ ಬಿರುಗಾಳಿ ಸಹಿತ ಭಾರೀ ಮಳೆಯ ಪರಿಣಾಮ ಸೇತುವೆಗೆ ಹಾನಿಯಾಗಿತ್ತು. ಏಪ್ರಿಲ್‌ನಲ್ಲಿ ಸೇತುವೆಗೆ ಹಾನಿಯಾಗಿದ್ದಾಗ ಕಳಪೆ ಕಾಮಗಾರಿಯ ಆರೋಪಗಳು ಕೇಳಿಬಂದಿದ್ದವು. ಆದರೂ ಸೇತುವೆ ನಿರ್ಮಾಣಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಎಚ್ಚೆತ್ತುಕೊಂಡಿರಲಿಲ್ಲ. ಹೀಗಾಗಿ ನಿರ್ಮಾಣಹಂತದಲ್ಲಿದ್ದಾಗಲೇ ಸೇತುವೆ ಕುಸಿದಿದೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಕನಸಿನ ಯೋಜನೆ ಇದಾಗಿದ್ದು 2014ರ ಫೆಬ್ರವರಿ 23 ರಂದು ಖಗಾರಿಯಾ ಜಿಲ್ಲೆಯ ಪರ್ಬಟ್ಟಾದಲ್ಲಿ ಶಂಕುಸ್ಥಾಪನೆ ನಡೆದಿತ್ತು. ಈ ಕಾಮಗಾರಿ ಪೂರ್ಣಗೊಳಿಸಲು ಹಲವು ಬಾರಿ ಡೆಡ್‌ಲೈನ್‌ ನಿಗದಿ ಮಾಡಿದ್ದರೂ ಪೂರ್ಣಗೊಂಡಿಲ್ಲ. 3.16 ಕಿ.ಮೀ ಉದ್ದದ ಸೇತುವೆ ನಿರ್ಮಾಣದ ಕಾಮಗಾರಿಯ ಗುತ್ತಿಗೆಯನ್ನು ಹರ್ಯಾಣ ಮೂಲದ ಕಂಪನಿ ಗುತ್ತಿಗೆ ಪಡೆದುಕೊಂಡಿತ್ತು.

Share This Article