ಪಾಟ್ನಾ: 12 ಕೋಟಿ ರೂ. ವೆಚ್ಚದಲ್ಲಿ ಬಿಹಾರದ (Bihar) ಅರಾರಿಯಾದಲ್ಲಿ ಬಕ್ರಾ ನದಿಗೆ ನಿರ್ಮಿಸಲಾಗಿದ್ದ ಸೇತುವೆಯು ಉದ್ಘಾಟನೆಗೂ ಮುನ್ನವೇ ಕುಸಿದು (Bihar Bridge Collapses) ಬಿದ್ದಿದೆ. ಸೇತುವೆ ಕುಸಿದು ಬಿದ್ದಿರುವ ವೀಡಿಯೋವನ್ನು ಸಾರ್ವಜನಿಕರು ಸೆರೆಹಿಡಿದಿದ್ದು, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ ಸೇತುವೆ ಒಂದು ಬದಿಗೆ ವಾಲಿರುವುದನ್ನು ತೋರಿಸುತ್ತದೆ. ಈ ವೇಳೆ ಸೇತುವೆಯ ಬಳಿ ನದಿಯ ದಡದಲ್ಲಿ ನಿಂತಿದ್ದ ಜನ ಈ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಕುಸಿದ ಸೇತುವೆಯ ಭಾಗವು ಕೆಲವೇ ಕ್ಷಣಗಳಲ್ಲಿ ಕೊಚ್ಚಿಕೊಂಡು ಹೋಯಿತು. ಈ ಘಟನೆಯಲ್ಲಿ ಯಾವುದೇ ಜೀವ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಇದನ್ನೂ ಓದಿ: ಕೇಕ್ ಕೊಡಿಸುವುದಾಗಿ ಆಸೆ ತೋರಿಸಿ ಬಾಲಕನ ಕಿಡ್ನಾಪ್ – ಆರೋಪಿ ಅರೆಸ್ಟ್
ಸಿಕ್ತಿ ಶಾಸಕ ವಿಜಯ್ ಕುಮಾರ್ ಈ ಬಗ್ಗೆ ಪ್ರತಿಕ್ರಿಯಿಸಿ, ನಿರ್ಮಾಣ ಕಂಪನಿಯ ಮಾಲೀಕರ ನಿರ್ಲಕ್ಷ್ಯದಿಂದ ಸೇತುವೆ ಕುಸಿದಿದೆ. ಸರ್ಕಾರ ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಅವರ ಅಗ್ರಹಿಸಿದ್ದಾರೆ. ಅಲ್ಲದೇ ಸರ್ಕಾರ ಹಾಗೂ ಪ್ರತಿಪಕ್ಷಗಳ ನಡುವೆ ಈ ಘಟನೆ ತೀವ್ರ ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದೆ.
ಈ ವರ್ಷ ಮಾರ್ಚ್‍ನಲ್ಲಿ ಬಿಹಾರದ ಸುಪೌಲ್‍ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದ. ಹಲವರು ಈ ವೇಳೆ ಸಿಲುಕಿಕೊಂಡಿದ್ದರು. ಇದನ್ನೂ ಓದಿ: ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಅಧಿಕಾರಿಗಳ ಮೇಲೆ ಸಿದ್ದರಾಮಯ್ಯ ಗರಂ