ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nithish Kumar) ಅವರಿಗೆ ಅನಾರೋಗ್ಯ ಕಾಡಿದ್ದು, ಈ ಹಿನ್ನೆಲೆಯಲ್ಲಿ ಇಂದಿನ ಎಲ್ಲಾ ಅವರ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.
74 ವರ್ಷದ ನಿತೀಶ್ ಕುಮಾರ್ ಅವರಿಗೆ ವೈರಲ್ ಜ್ವರ (Viral Fever) , ಶೀತ ಹಾಗೂ ಕೆಮ್ಮು ಇರುವುದರಿಂದ ಇಂದಿನ ಯಾವುದೇ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳಲ್ಲ ಎಂದು ಮುಖ್ಯಮಂತ್ರಿಗಳ ನಿವಾಸದಿಂದ ಮೂಲಗಳು ತಿಳಿಸಿವೆ.
Advertisement
Advertisement
ನಳಂದದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ರಾಜ್ಗಿರಿ ಮಹೋತ್ಸವವನ್ನು ನಿತೀಶ್ ಅವರು ಉದ್ಘಾಟನೆ ಮಾಡಬೇಕಿತ್ತು. ಆದರೆ ಅನಾರೋಗ್ಯದಿಂದಾಗಿ ಅವರಿಗೆ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗುತ್ತಿಲ್ಲ ಎಂದು ಸಿಎಂ ಅವರ ಆಡಳಿತ ಕಚೇರಿಯಿಂದ ಸಂದೇಶ ರವಾನಿಸಲಾಗಿದೆ.
Advertisement
ಸದ್ಯ ಸಿಎಂ ಅವರು ತಮ್ಮ ನಿವಾಸದಲ್ಲಿಯೇ ರೆಸ್ಟ್ ಮಾಡುತ್ತಿದ್ದಾರೆ. ಮನೆಯಲ್ಲಿಯೇ ವೈದ್ಯರ ತಂಡವಿದ್ದು, ನಿತೀಶ್ ಕುಮಾರ್ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ. ಇದನ್ನೂ ಓದಿ: 108 ಅಂಬುಲೆನ್ಸ್‌ನವ್ರು ಖಾಸಗಿ ಆಸ್ಪತ್ರೆಗಳ ಜೊತೆ ಒಪ್ಪಂದ ಮಾಡಿಕೊಳ್ತಾರೆ: ಡಿಕೆಶಿ ಅಸಮಾಧಾನ
Advertisement
ಸೋಮವಾರವಷ್ಟೇ ಮುಖ್ಯಮಂತ್ರಿಗಳು ದರ್ಭಾಂಗ್ ತೆರಳಿದ್ದು, ಅಲ್ಲಿ ದರ್ಭಾಂಗ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿದ್ದರು. ಅದೇ ದಿನ ಸಂಜೆ ಪಟ್ನಾದಲ್ಲಿ ಅನುಗ್ರಹ ನಾರಾಯಣ ಕಾಲೇಜಿನ ಹೊಸ ಕಟ್ಟಡವನ್ನು ಕೂಡ ಉದ್ಘಾಟನೆ ಮಾಡಿದ್ದರು. ಆ ಬಳಿಕದಿಂದ ಅವರು ಸಾರ್ವಜನಿಕ ಸಭೆಗಳಿಗೆ ಹಾಜರಾಗುತ್ತಿರಲಿಲ್ಲ. ಸದ್ಯ ಇಂದಿನ ರಾಜ್ಗಿರಿ ಮಹೋತ್ಸವವನ್ನು ಉಪಮುಖ್ಯಮಂತ್ರಿ ಹಾಗೂ ಪ್ರವಾಸೋದ್ಯಮ ಸಚಿವ ತೇಜಸ್ವಿ ಯಾದವ್ ಉದ್ಘಾಟನೆ ಮಾಡಲಿದ್ದಾರೆ.