ಬಿಹಾರ ಚುನಾವಣೆ| ಕಾಂಗ್ರೆಸ್‌ನಿಂದ ಸ್ಯಾನಿಟರಿ ಪ್ಯಾಡ್ – ವಿವಾದಕ್ಕೀಡಾದ ರಾಹುಲ್ ಗಾಂಧಿ ಚಿತ್ರ

Public TV
2 Min Read
Rahul Gandhi

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿರುವಾಗ, ಕಾಂಗ್ರೆಸ್ ಪಕ್ಷವು ಮಹಿಳಾ ಮತದಾರರನ್ನು ಸೆಳೆಯಲು ರಾಹುಲ್ ಗಾಂಧಿ (Rahul Gandhi) ಅವರ ಚಿತ್ರವಿರುವ ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸುವ ಯೋಜನೆಯನ್ನು ಘೋಷಿಸಿದೆ. ಆದರೆ, ಈ ಕಾರ್ಯಕ್ರಮವು ಭಾರೀ ವಿವಾದಕ್ಕೆ ಕಾರಣವಾಗಿದೆ.

`ಪ್ರಿಯದರ್ಶಿನಿ ಉಡಾನ್ ಯೋಜನಾ’ ಎಂಬ ಈ ಯೋಜನೆಯಡಿ, ಬಿಹಾರದಲ್ಲಿ (Bihar) 5 ಲಕ್ಷಕ್ಕೂ ಅಧಿಕ ಮಹಿಳೆಯರಿಗೆ ಈ ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸುವ ಗುರಿಯನ್ನು ಕಾಂಗ್ರೆಸ್ ಹೊಂದಿದೆ. ಈ ಯೋಜನೆಯು ಋತುಸ್ರಾವದ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ ಎಂದು ಪಕ್ಷವು ಹೇಳಿಕೊಂಡಿದೆ. ಇದನ್ನೂ ಓದಿ: ರನ್ಯಾ ರಾವ್‌ಗೆ ಸೇರಿದ 34.12 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಬಿಹಾರ ಕಾಂಗ್ರೆಸ್‌ನ ಅಧ್ಯಕ್ಷ ರಾಜೇಶ್ ಕುಮಾರ್ ಅವರು ಶುಕ್ರವಾರ ಪಾಟ್ನಾದ ಸದಾಕತ್ ಆಶ್ರಮದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಯೋಜನೆಯನ್ನು ಘೋಷಿಸಿದರು. ಈ ಕಾರ್ಯಕ್ರಮವನ್ನು ಮಹಿಳಾ ಕಾಂಗ್ರೆಸ್‌ನ ಮೂಲಕ ಜಾರಿಗೆ ತರಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: 5 ಹುಲಿಗಳ ಸಾವು ಪ್ರಕರಣ: ಡಿಸಿಎಫ್ ಚಕ್ರಪಾಣಿ ಸೇರಿ 3 ಅಧಿಕಾರಿಗಳ ಅಮಾನತಿಗೆ ಖಂಡ್ರೆ ಶಿಫಾರಸು

ಸ್ಯಾನಿಟರಿ ಪ್ಯಾಡ್‌ಗಳ ಪ್ಯಾಕೆಟ್‌ಗಳ ಮೇಲೆ ರಾಹುಲ್ ಗಾಂಧಿ ಅವರ ಚಿತ್ರದ ಜೊತೆಗೆ, ಕಾಂಗ್ರೆಸ್‌ನ ಚುನಾವಣಾ ಭರವಸೆಯಾದ `ಮಾಯಿ ಬೆಹನ್ ಮಾನ್ ಯೋಜನಾ’ ಅಡಿಯಲ್ಲಿ ಅಗತ್ಯವಿರುವ ಮಹಿಳೆಯರಿಗೆ ತಿಂಗಳಿಗೆ 2,500 ರೂಪಾಯಿ ಆರ್ಥಿಕ ನೆರವು ನೀಡುವ ಘೋಷಣೆಯೂ ಇದೆ. ಈ ಯೋಜನೆಯನ್ನು ಅಕ್ಷಯ್ ಕುಮಾರ್ ಅಭಿನಯದ `ಪ್ಯಾಡ್‌ಮ್ಯಾನ್’ ಚಿತ್ರದಿಂದ ಸ್ಫೂರ್ತಿಗೊಂಡಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ಇದನ್ನೂ ಓದಿ: ಟ್ರಂಪ್ ಬಿಗ್ ಬ್ಯೂಟಿಫುಲ್ ಬಿಲ್‌ಗೆ ಒಪ್ಪಿಗೆ – ಭಾರತೀಯರಿಗೂ ಕಾದಿದೆ ಆಘಾತ

ರಾಹುಲ್ ಗಾಂಧಿ ಅವರ ಚಿತ್ರವನ್ನು ಸ್ಯಾನಿಟರಿ ಪ್ಯಾಡ್‌ಗಳ ಪ್ಯಾಕೆಟ್‌ಗಳ ಮೇಲೆ ಮುದ್ರಿಸಿರುವುದನ್ನು ಬಿಜೆಪಿ ಮತ್ತು ಜೆಡಿಯು ತೀವ್ರವಾಗಿ ಖಂಡಿಸಿದೆ. ಬಿಜೆಪಿಯ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿ, `ರಾಹುಲ್ ಗಾಂಧಿ ಅವರ ಚಿತ್ರವನ್ನು ಸ್ಯಾನಿಟರಿ ಪ್ಯಾಡ್‌ನ ಮೇಲೆ ಮುದ್ರಿಸುವುದು ಬಿಹಾರದ ಮಹಿಳೆಯರಿಗೆ ಅವಮಾನವಾಗಿದೆ. ಕಾಂಗ್ರೆಸ್ ಮಹಿಳಾ ವಿರೋಧಿ ಪಕ್ಷವಾಗಿದೆ. ಬಿಹಾರದ ಮಹಿಳೆಯರು ಕಾಂಗ್ರೆಸ್ ಮತ್ತು ಆರ್‌ಜೆಡಿಗೆ ಪಾಠ ಕಲಿಸಲಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸಚಿವ ಮತ್ತು ಎಲ್‌ಜೆಪಿ ನಾಯಕ ಚಿರಾಗ್ ಪಾಸ್ವಾನ್ ಕೂಡ ಈ ನಿರ್ಧಾರವನ್ನು ಖಂಡಿಸಿದ್ದಾರೆ. ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸುವುದು ಒಳ್ಳೆಯ ಕಾರ್ಯವಾಗಿದೆ. ಆದರೆ ಅದರ ಮೇಲೆ ರಾಹುಲ್ ಗಾಂಧಿ ಅವರ ಚಿತ್ರವನ್ನು ಮುದ್ರಿಸಿರುವುದು ಸಂಪೂರ್ಣವಾಗಿ ಅನುಚಿತವಾಗಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಹೃದಯಾಘಾತಕ್ಕೆ ಹದಿ ಹರೆಯದವರು ಸಾವು -ಮಕ್ಕಳಿಗೆ ಶಾಲೆಯಲ್ಲೇ ಟೆಸ್ಟ್ ಮಾಡಿ: ತಜ್ಞರ ಸಮಿತಿ

ಜೆಡಿಯು ವಕ್ತಾರ ನೀರಜ್ ಕುಮಾರ್ ಮಾತನಾಡಿ, ಈ ಕಾರ್ಯಕ್ರಮವು ಚುನಾವಣಾ ತಂತ್ರಗಾರಿಕೆಯಾಗಿದೆ. ಕಾಂಗ್ರೆಸ್‌ನ ಈ ನಡೆಯನ್ನು ಮಾನಸಿಕ ದಿವಾಳಿತನ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ವಿಟಿಯು ಇಂಜಿನಿಯರಿಂಗ್‌ ಪರೀಕ್ಷೆ – ಸುಚಿತಾ ಮಡಿವಾಳಗೆ ಮೊದಲ ರ‍್ಯಾಂಕ್‌ ಜೊತೆಗೆ ಚಿನ್ನದ ಪದಕ

ಆಧುನಿಕ ಯುಗದಲ್ಲಿ ಸವಾಲು ರಾಹುಲ್ ಗಾಂಧಿ ಚಿತ್ರವನ್ನು ಸ್ಯಾನಿಟರಿ ಪ್ಯಾಡ್‌ನ ಮೇಲೆ ಏಕೆ ಮುದ್ರಿಸಲಾಯಿತು ಎಂಬುದಲ್ಲ. ಬಿಹಾರದಲ್ಲಿ ಇಂದಿಗೂ ಮಹಿಳೆಯರು ಋತುಸ್ರಾವದ ಸಮಯದಲ್ಲಿ ಬಟ್ಟೆಯನ್ನು ಬಳಸಿಕೊಂಡು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಒಳಗಾಗುತ್ತಿರುವುದೇ ಮೂಲ ಸಮಸ್ಯೆಯಾಗಿದೆ. ಬಿಜೆಪಿಯ ಚಿಂತನೆ ಯಾವಾಗಲೂ ಮಹಿಳಾ ವಿರೋಧಿಯಾಗಿದೆ ಎಂದು ಕಾಂಗ್ರೆಸ್‌ನ ಮಹಿಳಾ ವಿಭಾಗದ ರಾಷ್ಟ್ರೀಯ ಅಧ್ಯಕ್ಷೆ ಅಲ್ಕಾ ಲಾಂಬಾ ಎಕ್ಸ್ನಲ್ಲಿ ಬರೆದುಕೊಳ್ಳುವ ಮೂಲಕ ತಿರುಗೇಟು ನೀಡಿದ್ದಾರೆ

Share This Article