ಪಾಟ್ನಾ: ಬಿಹಾರದಲ್ಲಿ (Bihar) ಮಹಿಳೆಯೊಬ್ಬರ ಮೇಲೆ ಅತ್ಯಾಚಾರ (Rape) ಎಸಗಿ ವೀಡಿಯೋ ಬಿಡುಗಡೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಐಎಎಸ್ ಅಧಿಕಾರಿ (IAS Officer) ಹಾಗೂ ಮಾಜಿ ಶಾಸಕನ (Ex MLA) ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಹಿರಿಯ ಐಎಎಸ್ ಅಧಿಕಾರಿ ಸಂಜೀವ್ ಹನ್ಸ್ ಮತ್ತು ಆರ್‌ಜೆಡಿ ಮಾಜಿ ಶಾಸಕ ಗುಲಾಬ್ ಯಾದವ್ ವಿರುದ್ಧ ದಾನಾಪುರದ ನ್ಯಾಯಾಲಯ ಆದೇಶದ ಮೇರೆಗೆ ಪಾಟ್ನಾದ ರೂಪಸ್‌ಪುರ ಪೊಲೀಸ್ ಠಾಣೆಯಲ್ಲಿ ಕೇಸ್ ಹಾಕಿದ್ದಾರೆ. ಇದನ್ನೂ ಓದಿ: ಹಿಮದಿಂದ ಕೂಡಿದ್ದ ಟ್ರ್ಯಾಕ್‌ನಿಂದ ಜಾರಿ ಕಮರಿಗೆ ಬಿದ್ದ ವಾಹನ – 3 ಯೋಧರು ಹುತಾತ್ಮ
2021 ರಲ್ಲಿ ದೆಹಲಿಯ ಹೋಟೆಲ್‌ನಲ್ಲಿ ತನ್ನ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದು ಮಹಿಳೆ ದೂರಿದ್ದರು. ಐಎಎಸ್ ಅಧಿಕಾರಿ, ಮಾಜಿ ಶಾಸಕನ ವಿರುದ್ಧ ಆರೋಪ ಹೊರಿಸಲಾಗಿದೆ. ಬಂದೂಕು ತೋರಿಸಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಗಂಭೀರ ಆರೋಪ ಹೊರಿಸಲಾಗಿದೆ.
ಸಂತ್ರಸ್ತೆ ಮೊದಲು ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿತ್ತು. ನಂತರ ಸಂತ್ರಸ್ತೆ ಪಾಟ್ನಾ ಹೈಕೋರ್ಟ್‌ನ ಬಾಗಿಲು ತಟ್ಟಿದ್ದು, ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸದ ಪಾಟ್ನಾ ಪೊಲೀಸರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ಸಿವಿಲ್ ನ್ಯಾಯಾಲಯವು ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸುವಂತೆ ಸೂಚಿಸಿತು. ಈ ವಿಚಾರದಲ್ಲಿ ನಿರಾಸಕ್ತಿ ವಹಿಸಿದ್ದ ಪಾಟ್ನಾ ಪೊಲೀಸರಿಗೆ ಎಚ್ಚರಿಕೆಯನ್ನೂ ನೀಡಿದೆ. ಇದನ್ನೂ ಓದಿ: ಮದುವೆಯಾಗಲು ಹೆಣ್ಣು ಹುಡುಕಿಕೊಡುವಂತೆ ಯುವಕ ಕರೆ- ಡಿಟೇಲ್ಸ್ ಕಳುಹಿಸು ಅಂದ್ರು ಶಾಸಕ
ಆಗ ಶಾಸಕನಾಗಿದ್ದ ಗುಲಾಬ್ ಯಾದವ್, ಮಹಿಳಾ ಆಯೋಗದ ಸದಸ್ಯೆ ಮಾಡುವುದಾಗಿ ಭರವಸೆ ನೀಡಿ ಪಾಟ್ನಾದ ತನ್ನ ನಿವಾಸದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ. ಅದನ್ನು ವೀಡಿಯೋ ಮಾಡಿಕೊಂಡು ಆಕೆಗೆ ಬ್ಲ್ಯಾಕ್‌ಮೇಲ್ ಮಾಡಿದ್ದ. ಮತ್ತೆ ಆಕೆಯನ್ನು ದೆಹಲಿಗೆ ಕರೆಸಿಕೊಂಡು ತಾನು ಹಾಗೂ ಐಎಎಸ್ ಅಧಿಕಾರಿ ಇಬ್ಬರೂ ಅತ್ಯಾಚಾರ ಎಸಗಿದ್ದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k