ಪಾಟ್ನಾ: ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿರುವ ಘಟನೆ ಬಿಹಾರದ ಗೋಪಾಲ್‍ಗಂಜ್ ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ಸಾಸ ಮೂಸಾ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ರಾತ್ರಿ ಸುಮಾರು 11.30ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, 9 ಜನರಿಗೆ ಗಾಯವಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ.
Advertisement
Advertisement
ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಬಾಯ್ಲರ್ ಸಮೀಪ ಕೆಲಸ ಮಾಡುತ್ತಿದ್ದ ಮೂವರ ದೇಹಗಳು ಛಿದ್ರಛಿದ್ರವಾಗಿವೆ. ಘಟನೆ ನಡೆದ ವೇಳೆ ಫ್ಯಾಕ್ಟರಿಯಲ್ಲಿ ಸುಮಾರು 100 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಅವಶೇಷಗಳಡಿ ಮತ್ತಷ್ಟು ಕಾರ್ಮಿಕರು ಸಿಲುಕಿರಬಹುದೆಂದು ಶಂಕಿಸಲಾಗಿದೆ. ಘಟನೆಯ ನಂತರ ನಾಪತ್ತೆಯಾಗಿದ್ದ ಸಕ್ಕರೆ ಕಾರ್ಖಾನೆಯ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.
Advertisement
Advertisement
ಗಾಯಾಳುಗಳನ್ನ ಗೋಪಾಲ್‍ಗಂಜ್‍ನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭಿರವಾಗಿದೆ ಎಂದು ವರದಿಯಾಗಿದೆ. ಮೂವರು ವ್ಯಕ್ತಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರು ಪಿಎಮ್‍ಸಿಹೆಚ್ ಆಸ್ಪತ್ರೆಗೆ ಕಳಿಸಿದ್ದಾರೆ. ಘಟನೆಯ ನಂತರ ಪೊಲೀಸರು ಹಾಗೂ ಗೋಪಾಲ್‍ಜಂಜ್‍ನ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ.
ಅತೀಯಾದ ತಾಪದಿಂದಾಗಿ ಬಾಯ್ಲರ್ ಸ್ಫೋಟಗೊಂಡಿರಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದರೂ ನಿರ್ದಿಷ್ಟ ಕಾರಣ ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.