ಪಾಟ್ನಾ: ಸೋಶಿಯಲ್ ಮೀಡಿಯಾದಲ್ಲಿ ಕೋಮು ಗಲಭೆ ಸೃಷ್ಟಿಸುವ ಪೋಸ್ಟ್ ಹಾಕಿದಕ್ಕೆ ಹಿರಿಯ ಸರ್ಕಾರಿ ಅಧಿಕಾರಿಯನ್ನು ಬಿಹಾರದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು(ಎಡಿಜಿ) ಸಂಜಯ್ ಸಿಂಗ್ ಈ ಕುರಿತು ಮಾಹಿತಿ ನೀಡಿದ್ದು, ಕಾನೂನು ಮತ್ತು ಸುವ್ಯವಸ್ಥೆ ಪ್ರಕಾರ ಯಾವುದೇ ಧರ್ಮ ನಿಂದನೆ ಮಾಡುವುದು ಅಪರಾಧ. ಈ ಹಿನ್ನೆಲೆ ಬಿಹಾರದ ಆಡಳಿತ ಸೇವೆ ಅಧಿಕಾರಿ ಅಲೋಕ್ ಕುಮಾರ್ ಅವರ ವಿರುದ್ಧ ಎಫ್‍ಐಆರ್ ದಾಖಲಿಸಿ ಬಂಧಿಸಲಾಗಿದೆ ಎಂದು ಮಾಹಿತಿ ಕೊಟ್ಟರು. ಇದನ್ನೂ ಓದಿ: ಕಲಬುರಗಿಯಲ್ಲಿ ಬುಲ್ಡೋಜರ್ ಸದ್ದು: 14 ಮನೆಗಳು ಸೇರಿದಂತೆ 17 ಟಿನ್ ಶೆಡ್ ತೆರವು
Advertisement
Advertisement
ಘಟನೆಯ ವಿವರ
ಇಒಯು ಮುಸ್ಲಿಮರನ್ನು ಅವಹೇಳನ ಮಾಡುವ ವಾಟ್ಸಾಪ್ ಸಂದೇಶ ಕಳಿಸಿದವರ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಇದರ ಮೂಲದ ಬಗ್ಗೆ ತನಿಖೆ ಮಾಡುತ್ತಿದ್ದಾರೆ. ಈ ವೇಳೆ ಚುನಾವಣಾ ಇಲಾಖೆಯಲ್ಲಿ ಉಪ ಕಾರ್ಯದರ್ಶಿಯಾಗಿ ಪಾಟ್ನಾದಲ್ಲಿ ನಿಯೋಜನೆಗೊಂಡಿರುವ ಜಾರ್ಖಂಡ್ ನಿವಾಸಿ ಅಲೋಕ್ ಕುಮಾರ್ ಅವರ ಫೋನ್‍ನಲ್ಲಿ ಇದರ ಫಾರ್ವರ್ಡ್ ಸಂದೇಶ ಪತ್ತೆಯಾಗಿದೆ.
Advertisement
Advertisement
ಈ ಹಿನ್ನೆಲೆ ಅಲೋಕ್ ಕುಮಾರ್ ಅವರನ್ನು ಅವರ ಮನೆಯಲ್ಲೇ ಬಂಧಿಸಲಾಗಿದೆ. ಜೈಲಿಗೆ ಕಳುಹಿಸುವ ಮೊದಲು ಅವರನ್ನು ವಿಚಾರಣೆಗಾಗಿ ಸಚಿವಾಲಯ ಪೊಲೀಸ್ ಠಾಣೆಗೆ ಕರೆತರಲಾಗಿದೆ ಎಂದು ಸಂಜಯ್ ಸಿಂಗ್ ತಿಳಿಸಿದರು. ಇದನ್ನೂ ಓದಿ: ಪಾಕಿಸ್ತಾನಿ ಎಲ್‍ಇಟಿ ಉಗ್ರ ಎನ್‍ಕೌಂಟರ್ – ಮೂವರು ಅರೆಸ್ಟ್