-ಪೂರ್ವ ನಿಗದಿತ ವಿದೇಶಿ ಪ್ರವಾಸಗಳಿರುವುದರಿಂದ ಖಮೇನಿ ಅಂತ್ಯಕ್ರಿಯೆಗೆ ಮೋದಿ ಗೈರು
ಟ್ರೆಹಾನ್: ಇರಾನ್‌ನ ಸುಪ್ರೀಂ ಲೀಡರ್ ಖಮೇನಿಯ ಅಂತ್ಯಕ್ರಿಯೆಯಲ್ಲಿ ಭಾರತದ ಪರವಾಗಿ ಬಿಹಾರ ರಾಜ್ಯಪಾಲ (Bihar Governer), ನಿವೃತ್ತ ಲೆಫ್ಟಿನೆಂಟ್ ಜನರಲ್ ಸೈಯದ್ ಅತಾ ಹಸ್ನೈನ್ (Lt Gen Syed Ata Hasnain), ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಪಬಿತ್ರಾ ಮಾರ್ಗರಿಟಾ (Pabitra Margherita) ಭಾಗಿಯಾಗಲಿದ್ದಾರೆ ಎಂದು ಇರಾನ್ ಮೂಲಗಳು ತಿಳಿಸಿವೆ.
ವರದಿಗಳ ಪ್ರಕಾರ, ಈ ಇಬ್ಬರು ಗಣ್ಯರು ಮುಂದಿನ ತಿಂಗಳು ನಡೆಯಲಿರುವ ಇರಾನ್‌ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿಯ (Ayatollah Seyyed Ali Khamenei) ಸರ್ಕಾರಿ ಅಂತ್ಯಕ್ರಿಯೆಯಲ್ಲಿ ಭಾರತದ (India) ಅಧಿಕೃತ ಪ್ರತಿನಿಧಿಗಳಾಗಿ ಭಾಗವಹಿಸಲಿದ್ದಾರೆ. ಇನ್ನೂ ಪೂರ್ವ ನಿಗದಿಯಾಗಿರುವ ವಿದೇಶಿ ಪ್ರವಾಸಗಳ ಹಿನ್ನೆಲೆ ಪ್ರಧಾನಿ ಮೋದಿ ಅವರು ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಸಾಧ್ಯವಿಲ್ಲ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆ – ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ಇರಾನ್ ಅಧ್ಯಕ್ಷ
ಇತ್ತೀಚಿಗೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರು ಖಮೇನಿಯ ಸರ್ಕಾರಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗುವಂತೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಿದ್ದರು.
ಫೆಬ್ರವರಿ 28ರಂದು ಟೆಹ್ರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಖಮೇನಿ ಸಾವನ್ನಪ್ಪಿದ್ದರು. ಅದಾದ ಬಳಿಕ ಸಂಘರ್ಷದಿಂದಾಗಿ ಮಾರ್ಚ್ ತಿಂಗಳಲ್ಲಿ ನಡೆಯಬೇಕಿದ್ದ ಅಂತ್ಯಕ್ರಿಯೆಯನ್ನು ಮುಂದೂಡಲಾಗಿತ್ತು. ಇದೀಗ ಜುಲೈ 4ರಿಂದ ಅಂತ್ಯಕ್ರಿಯೆಯ ವಿಧಿವಿಧಾನಗಳು ಆರಂಭವಾಗಲಿದ್ದು, ಇರಾನ್ ಸೇರಿದಂತೆ ವಿವಿಧ ನಗರಗಳಲ್ಲಿ ಬೃಹತ್ ಮೆರವಣಿಗೆ ನಡೆಯಲಿದೆ. ಈ ವೇಳೆ 1 ಕೋಟಿಗೂ ಅಧಿಕ ಜನರು ಭಾಗಿಯಾಗುವ ನಿರೀಕ್ಷೆಯಿದೆ.ಇದನ್ನೂ ಓದಿ: ಪರಸ್ಪರ ದಾಳಿ ನಿಲ್ಲಿಸಲು ಒಪ್ಪಿಕೊಂಡ ಅಮೆರಿಕ – ಇರಾನ್; ಕತಾರ್‌ನಲ್ಲಿ ಹಾರ್ಮುಜ್ ಕುರಿತು ಹೈವೋಲ್ಟೇಜ್ ಟಾಕ್
ವರದಿಗಳ ಪ್ರಕಾರ, ಅಯತೊಲ್ಲಾ ಖಮೇನಿಯ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ತೆಹ್ರಾನ್‌ನ `ಗ್ರಾಂಡ್ ಮೊಸಲ್ಲಾ’ ಸಂಕೀರ್ಣದಲ್ಲಿ ಇರಿಸಲಾಗುವುದು. ಅಲ್ಲದೇ ತೆಹ್ರಾನ್ ಮತ್ತು ಕೋಮ್ ನಗರಗಳಲ್ಲಿ ಬೃಹತ್ ಮೆರವಣಿಗೆ ನಡೆಯಲಿದ್ದು, ಇದರೊಂದಿಗೆ ಇರಾಕ್‌ನ ಪವಿತ್ರ ನಗರಗಳಾದ ನಜಾಫ್ ಮತ್ತು ಕರ್ಬಲಾದಲ್ಲೂ ವಿಶೇಷ ಪ್ರಾರ್ಥನೆ ನಡೆಯಲಿದೆ.
ಜುಲೈ 9ರಂದು ಖಮೇನಿಯ ತವರು ಮಶ್ಹದ್‌ನಲ್ಲಿರುವ ಪ್ರಸಿದ್ಧ `ಇಮಾಮ್ ರೆಜಾ’ ಮಸೀದಿಯಲ್ಲಿ ಅಂತಿಮ ಪ್ರಕ್ರಿಯೆ ನೆರವೇರಲಿದೆ. ಸುಮಾರು ನಾಲ್ಕು ದಶಕಗಳ ಕಾಲ ಇರಾನ್‌ನ ರಾಜಕೀಯ ವ್ಯವಸ್ಥೆಯನ್ನು ಮುನ್ನಡೆಸಿದ್ದ ನಾಯಕನಿಗೆ ಅಂತಿಮ ವಿದಾಯ ಹೇಳಲು ಕೋಟ್ಯಂತರ ಜನರು ಆಗಮಿಸುವ ನಿರೀಕ್ಷೆಯಿದೆ. ಇದು 1989ರಲ್ಲಿ ಇರಾನ್‌ನ ಸಂಸ್ಥಾಪಕ ಅಯತೋಲ್ಲಾ ರುಹೊಲ್ಲಾ ಖೊಮೆನಿ ಅವರ ಅಂತ್ಯಕ್ರಿಯೆಯಲ್ಲಿ ಭಾಗಿಯಾದ 1 ಕೋಟಿ ಜನರ ದಾಖಲೆಯನ್ನು ಮುರಿಯುವ ಸಾಧ್ಯತೆಯಿದೆ. ಮುಂಜಾಗ್ರತಾ ಕ್ರಮವಾಗಿ ಇರಾನ್ ಸರ್ಕಾರ ವ್ಯಾಪಕ ಭದ್ರತಾ ವ್ಯವಸ್ಥೆ ಕೈಗೊಂಡಿದೆ.ಇದನ್ನೂ ಓದಿ: ಮೋದಿಗೆ ಸೀಶೆಲ್ಸ್ ಅತ್ಯುನ್ನತ ನಾಗರಿಕ ಪ್ರಶಸ್ತಿ- 1,460 ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ
