ನವದೆಹಲಿ: ಬಿಹಾರ ರಾಜ್ಯಪಾಲ ರಾಮನಾಥ್ ಕೋವಿಂದ್ ಅವರನ್ನು ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಲು ಬಿಜೆಪಿ ನಿರ್ಧಾರ ಕೈಗೊಂಡಿದೆ.
ರಾಷ್ಟ್ರಪತಿ ಅಭ್ಯರ್ಥಿಯ ಆಯ್ಕೆ ಸಂಬಂಧ ಬಿಜೆಪಿ ಸಂಸದೀಯ ಸಮಿತಿಯ ಸಭೆ ಸೋಮವಾರ ನಡೆಯಿತು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಕೇಂದ್ರ ಸಚಿವರಾದ ಸುಷ್ಮಾ ಸ್ವರಾಜ್, ಅನಂತ್ ಕುಮಾರ್, ವೆಂಕಯ್ಯ ನಾಯ್ಡು ಸೇರಿದಂತೆ ಹಲವು ನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದರು.
Advertisement
ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅಮಿತ್ ಷಾ, ರಾಮನಾಥ್ ಕೋವಿಂದ್ ಅವರನ್ನು ಎನ್‍ಡಿಎ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದೇವೆ. ನಮ್ಮ ನಿರ್ಧಾರವನ್ನು ಮಿತ್ರ ಪಕ್ಷಗಳು ಬೆಂಬಲಿಸುತ್ತದೆ ಎಂದು ನಾನು ಭಾವಿಸಿದ್ದೇನೆ ಎಂದು ತಿಳಿಸಿದರು.
Advertisement
ಯಾರು ರಾಮನಾಥ್ ಕೋವಿಂದ್?
ಉತ್ತರಪ್ರದೇಶದ ಕಾನ್ಪುರದ ದಿಹಾಟ್ ಎಂಬಲ್ಲಿ 1945 ಅಕ್ಟೋಬರ್ 1ರಂದು ರಾಮನಾಥ್ ಕೋವಿಂದ್ ಜನಿಸಿದ್ದು, ಕಾನ್ಪುರ ವಿಶ್ವವಿದ್ಯಾನಿಲಯದಿಂದ ಬಿ.ಕಾಂ, ಎಲ್ಎಲ್ ಬಿ ಪದವಿ ಪಡೆದಿದ್ದಾರೆ. 1977 ರಿಂದ 1979ರವರೆಗೆ ದೆಹಲಿ ಹೈಕೋರ್ಟ್ ನಲ್ಲಿ ಕೇಂದ್ರ ಸರ್ಕಾರದ ವಕೀಲರಾಗಿ ಕಾರ್ಯನಿರ್ವಹಿಸಿದ್ದಾರೆ. 1980ರಿಂದ 1993ರವರೆಗೆ ಸುಪ್ರೀಂ ಕೋರ್ಟ್ ವಕೀಲರಾಗಿ ಕಾರ್ಯನಿರ್ವಹಿಸಿದ್ದರು. 1994ರಲ್ಲಿ ಉತ್ತರಪ್ರದೇಶದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಇವರು 12 ವರ್ಷಗಳ ಕಾಲ ಸಂಸದರಾಗಿದ್ದರು.
Advertisement
ಇದನ್ನೂ ಓದಿ:ರಾಷ್ಟ್ರಪತಿ ಚುನಾವಣೆ ಹೇಗೆ ನಡೆಯುತ್ತೆ? ಮತ ಲೆಕ್ಕಾಚಾರ ಹೇಗೆ? ಎನ್‍ಡಿಎ,ಯುಪಿಎ ಬಲಾಬಲ ಹೇಗಿದೆ?
Advertisement
Bihar Governor Shri Ramnath Kovind will be the NDA candidate for the president election : Shri @AmitShah pic.twitter.com/WMk6vJz2Po
— BJP (@BJP4India) June 19, 2017
LIVE: Shri @AmitShah addressing press conference at BJP HQ. https://t.co/ykmBGT2eZ2
— BJP (@BJP4India) June 19, 2017