ಪಾಟ್ನಾ: ವಿದ್ಯಾರ್ಥಿನಿಯ ಕೆನ್ನೆ ಕಚ್ಚಿದ್ದ ಶಿಕ್ಷಕನನ್ನು ಸ್ಥಳೀಯರು ಪೊಲೀಸರ ಮುಂದೆಯೇ ಥಳಿಸಿದ ಘಟನೆ ಬಿಹಾರದ ಕತಿಹಾರ್ ನಲ್ಲಿ ನಡೆದಿದೆ.
ಬಿಹಾರದ ಸೆಮಾಪುರ ಪ್ರದೇಶದ ಪಿಪ್ರಿ ಬಹಿಯಾರ್ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ 4ನೇ ತರಗತಿ ಓದುತ್ತಿದ್ದ, 12 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ. ಅದು ಅಲ್ಲದೇ ಬಾಲಕಿಯ ಕೆನ್ನೆಯನ್ನು ಕಚ್ಚಿ ವಿಕೃತಿಯನ್ನು ಮೆರೆದಿದ್ದಾರೆ. ಈ ವೇಳೆ ಬಾಲಕಿ ಜೋರಾಗಿ ಕಿರುಚಿಕೊಂಡಿದ್ದು, ಅದನ್ನು ಕೇಳಿಸಿಕೊಂಡ ಸ್ಥಳೀಯರು ತರಗತಿಗೆ ಓಡಿ ಬಂದಿದ್ದಾರೆ. ವಿಷಯ ತಿಳಿದ ಸ್ಥಳೀಯರು ಮುಖ್ಯೋಪಾಧ್ಯಾಯನನ್ನು ಹಿಡಿದು ತರಗತಿಯಲ್ಲಿ ಕೂಡಿ ಹಾಕಿದ್ದಾರೆ. ಇದನ್ನೂ ಓದಿ: ಬಿಜೆಪಿಗರನ್ನು ಕಾಂಗ್ರೆಸ್ ಸಂಪರ್ಕಿಸುತ್ತಿರುವುದು ನಿಜ: ಯಡಿಯೂರಪ್ಪ
Advertisement
Advertisement
ಬಾಲಕಿಯ ಪೋಷಕರಿಗೆ ಘಟನೆ ಬಗ್ಗೆ ತಿಳಿಸಿದ ತಕ್ಷಣ ಅವರು ಮತ್ತು ಸ್ಥಳೀಯರು ಶಾಲೆಯ ಮುಂದೆ ಬಂದು ಜಮಾಯಿಸಿದ್ದು, ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
Advertisement
ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದು, ಮುಖ್ಯೋಪಾಧ್ಯಾಯರನ್ನು ತರಗತಿಯಿಂದ ಹೊರಗಡೆ ಕರೆದುಕೊಂಡು ಹೋಗುತ್ತಿರುವಾಗ ಕೋಪಗೊಂಡ ಸ್ಥಳೀಯರು ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಪೊಲೀಸರು ಆರೋಪಿಯನ್ನು ರಕ್ಷಿಸಲು ಯತ್ನಿಸಿದಾಗ ಅವರ ಲಾಠಿಯನ್ನೇ ಕಿತ್ತುಕೊಂಡು ಮುಖ್ಯೋಪಾಧ್ಯಾಯರಿಗೆ ಪ್ರಹಾರ ಮಾಡಲಾಗಿದೆ. ಆದರೂ ಸಹ ಆರೋಪಿಯನ್ನು ರಕ್ಷಿಸಲು ಪೊಲೀಸರು ಯಶಸ್ವಿಯಾಗಿದ್ದು, ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಆರೋಪಿಗೆ ಹಲ್ಲೆ ಮಾಡಿದ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಇದನ್ನೂ ಓದಿ: ಜಯಮೃತ್ಯುಂಜಯ ಸ್ವಾಮೀಜಿ ಶಾಪದಿಂದಲೇ ಯಡಿಯೂರಪ್ಪ ಅಧಿಕಾರ ಹೋಗಿದೆ: ವಿಜಯಾನಂದ ಕಾಶಪ್ಪನವರ್
Advertisement
ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯೋಪಾಧ್ಯಾಯ, ಆ ಕ್ಷಣ ನಾನು ನನ್ನ ಮಾನಸಿಕ ಸ್ಥಿಮಿತೆಯನ್ನು ಕಳೆದುಕೊಂಡಿದ್ದೆ ಎಂದಿದ್ದಾರೆ.
ಕತಿಹಾರ್ ಎಎಸ್ಪಿ ರಶ್ಮಿ ಈ ಕುರಿತು ಮಾತನಾಡಿದ್ದು, ಸಂತ್ರಸ್ತೆಯ ಹೇಳಿಕೆಯನ್ನು ತೆಗೆದುಕೊಳ್ಳಲಾಗಿದೆ. ಈ ಪ್ರಕರಣ ಬರಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಆರೋಪಿಯನ್ನು ಪ್ರಸ್ತುತ ಬಂಧಿಸಲಾಗಿದ್ದು, ಬಾಲಕಿಯನ್ನು ಚಿಕಿತ್ಸೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಲಬುರಗಿಯಲ್ಲಿ 36ನೇ ಪತ್ರಕರ್ತರ ರಾಜ್ಯ ಸಮ್ಮೇಳನ
ಸ್ಥಳೀಯರು ಮುಖ್ಯೋಪಾಧ್ಯಾಯರ ಮೇಲೆ ಹಲ್ಲೆ ಮಾಡಿದ ವೀಡಿಯೋವನ್ನು ನಾನು ಇನ್ನೂ ನೋಡಿಲ್ಲ. ಒಂದು ವೇಳೆ ಅದು ನಿಜವಾಗಿದ್ದರೆ ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.