ಪಾಟ್ನಾ: ಬಿಹಾರದಲ್ಲಿ (Bihar) ಕಳೆದೊಂದು ವಾರದಿಂದ ಮದ್ಯ (Liquor) ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 70ಕ್ಕೇರಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿಶೇಷ ತನಿಖಾ ತಂಡ (SIT) ಸರನ್ ಜಿಲ್ಲೆಯಲ್ಲಿ (Saran) ಕಳ್ಳಾಭಟ್ಟಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದೆ. ಆತನಿಂದ 2.17 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯನ್ನು ಅಖಿಲೇಶ್ ಕುಮಾರ್ ಯಾದವ್ ಅಲಿಯಾಸ್ ಅಖಿಲೇಶ್ ರೈ ಎಂದು ಗುರುತಿಸಲಾಗಿದೆ. ಕಳ್ಳಾಭಟ್ಟಿ ಸೇವಿಸಿ ಜನರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಶ್ರಖ್ ಹಾಗೂ ಇಶುಪುರ್ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 2 ಎಫ್‌ಐಆರ್‌ಗಳಲ್ಲಿ ಆರೋಪಿಗಳ ಹೆಸರು ಇಲ್ಲವಾದರೂ ಎಸ್‌ಐಟಿ ತನಿಖೆಯ ವೇಳೆ ಅಖಿಲೇಶ್ ಭಾಗಿಯಾಗಿರುವುದು ಖಚಿತವಾಗಿದೆ. ಇದನ್ನೂ ಓದಿ: 16ರ ಬಾಲಕಿ ಮೇಲೆ 8 ಕಾಮುಕರಿಂದ ಸತತ 12 ಗಂಟೆ ಗ್ಯಾಂಗ್ ರೇಪ್
ಆರೋಪಿಯ ವಿರುದ್ಧ ಈ ಹಿಂದೆಯೂ ಅಬಕಾರಿ ಕಾಯ್ದೆಯಡಿ 4 ಪ್ರಕರಣಗಳು ದಾಖಲಾಗಿವೆ. ಬಿಹಾರದ ಸರನ್‌ನಲ್ಲಿ ಕಳೆದ ಬುಧವಾರದಿಂದ ಇಲ್ಲಿಯವರೆಗೆ ಮದ್ಯ ಸೇವಿಸಿ 70 ಜನರು ಸಾವನ್ನಪ್ಪಿದ್ದಾರೆ.
ಸರನ್‌ನಲ್ಲಿ ನಡೆದ ಕಳ್ಳಾಭಟ್ಟಿ ದುರಂತ (Bihar Hooch Tragedy) ರಾಷ್ಟ್ರೀಯ ಮಟ್ಟದಲ್ಲಿ ಬೆಳಕಿಗೆ ಬಂದಿದ್ದು, ಸರನ್ ಪೊಲೀಸರು ಅಕ್ರಮ ಮದ್ಯ ವ್ಯಾಪಾರ, ಸಾಗಣೆ, ಕಳ್ಳಸಾಗಣೆ ಹಾಗೂ ಅಕ್ರಮ ಮದ್ಯ ತಯಾರಿಕೆಯಲ್ಲಿ ತೊಡಗಿರುವ ಶಂಕಿತರನ್ನು ಪತ್ತೆ ಹಚ್ಚಲು ಹಾಗೂ ಬಂಧಿಸಲು ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಇದನ್ನೂ ಓದಿ: ದಟ್ಟ ಮಂಜಿನಿಂದ ಕಾಣದಂತಾದ ರಸ್ತೆ – ಸರಣಿ ಅಪಘಾತದಿಂದಾಗಿ 22 ವಾಹನಗಳು ಜಖಂ