ಲಕ್ನೋ: ಮ್ಯಾಟ್ರಿಮೋನಿಯಲ್ ವೆಬ್‍ಸೈಟ್‍ನಲ್ಲಿ (Matrimonial Site) ನಕಲಿ ಪ್ರೊಪೈಲ್‍ಗಳನ್ನು ಸೃಷ್ಟಿಸಿ ವರದಕ್ಷಿಣೆಗಾಗಿ (Dowry) ಮಹಿಳೆಯರನ್ನು ಬಲೆಗೆ ಬೀಳಿಸಿ ನಂತರ ಅವರನ್ನು ವಂಚಿಸುತ್ತಿದ್ದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಸಂಜಯ್ ಸಿಂಗ್ ಅಲಿಯಾಸ್ ಹರಿಓಂ ದುಬೆ (38) ಬಂಧಿತ ವ್ಯಕ್ತಿ. ಈತ ಮೂಲತಃ ಬಿಹಾರನವನಾಗಿದ್ದು, ಶಾದಿ ಡಾಟ್ ಕಾಮ್‍ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ ತಾನು ಎಂಜಿನಿಯರ್ ಎಂದು ಹೇಳಿಕೊಂಡಿದ್ದ. ಹೀಗೆ ಅನೇಕರನ್ನು ಮದುವೆ ಆಗಿದ್ದ. ಅದಾದ ಬಳಿಕ ವರದಕ್ಷಿಣೆಯಾಗಿ ಕಾರು, ನಗದು (Money), ಆಭರಣಗಳನ್ನು ಪಡೆದುಕೊಂಡು ಅಲ್ಲಿಂದ ಪರಾರಿಯಾಗುತ್ತಿದ್ದ. ಹೀಗೆ ಅನೇಕರಿಗೆ ಮಾಡಿದ್ದ. ಅದಾದ ಬಳಿಕ ತಲೆ ಮರೆಸಿಕೊಂಡಿದ್ದ.
Advertisement
Advertisement
ಘಟನೆಗೆ ಸಂಬಂಧಿಸಿ ಪ್ರತಾಪಘಢ ನಿವಾಸಿ ಮಹಿಳೆಯೊಬ್ಬರು ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಅವರು ಮ್ಯಾಟ್ರಿಮೋನಿಯಲ್ ಸೈಟ್ ಮೂಲಕ ಸಂಜಯ್‌ನನ್ನು ಭೇಟಿಯಾಗಿದ್ದೆ. ನಂತರ ಅವನನ್ನೆ ಮದುವೆಯಾದೆ. ಆದರೆ ಮದುವೆಯಾದ ಕೂಡಲೇ ವರದಕ್ಷಿಣೆಗಾಗಿ ಕಿರುಕುಳ ನೀಡಲಾರಂಭಿಸಿದ್ದ. ಈ ಹಿನ್ನೆಲೆಯಲ್ಲಿ ವರದಕ್ಷಿಣೆಯನ್ನು ನೀಡಲಾಗಿತ್ತು.
Advertisement
Advertisement
ಅದಾದ ಬಳಿಕ ಸಂಜಯ್ ತನ್ನನ್ನು ಬಿಹಾರಕ್ಕೆ ಕರೆದುಕೊಂಡು ಹೋಗುವುದಾಗಿ ತಿಳಿಸಿದ್ದ. ಈ ಹಿನ್ನೆಲೆಯಲ್ಲಿ ತಯಾರಿ ಮಾಡಿಕೊಳ್ಳುತ್ತಿದ್ದಾಗ ಆತ ವರದಕ್ಷಿಣೆಯಾಗಿ ನೀಡಿದ್ದ 1 ಲಕ್ಷ ರೂ. ನಗದು, ಚಿನ್ನಾಭರಣ ಹಾಗೂ ಕಾರಿನೊಂದಿಗೆ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ. ಇದನ್ನೂ ಓದಿ: ಅಸ್ಸಾಂ, ಮೇಘಾಲಯ ಗಡಿಯಲ್ಲಿ ಮರ ಕಳ್ಳಸಾಗಣೆ – ಘರ್ಷಣೆಯಲ್ಲಿ ಅರಣ್ಯ ಸಿಬ್ಬಂದಿ ಸೇರಿ 6 ಸಾವು
ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುವಾಗ ಈಗಾಗಲೇ ಸಂಜಯ್‍ಗೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ಲಕ್ನೋ ಪೊಲೀಸರು ಆಶಿಯಾನಾ ಅಂಡರ್‌ಪಾಸ್‍ನಲ್ಲಿ ಆರೋಪಿ ಸಂಜಯ್‍ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಶಾರೀಕ್ ಬಳಿಯಿದ್ದ ಕುಕ್ಕರ್ ಬಾಂಬ್‌ಗೆ ಬಸ್ಸನ್ನೇ ಸ್ಫೋಟಿಸುವ ಸಾಮರ್ಥ್ಯ ಇತ್ತು