ಪಾಟ್ನಾ: ಬಿಹಾರದ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಇಸ್ರೇಲ್ ಮನ್ಸೂರ್ ಅವರು ಇಂದು ಗಯಾದ ವಿಷ್ಣುಪಾದ್ ದೇವಾಲಯಕ್ಕೆ ಭೇಟಿ ನೀಡಿದ್ದರು. ಆದರೆ ಈ ವೇಳೆ ಅವರು ಪ್ರಾರ್ಥನೆ ಸಲ್ಲಿಸಲಿಲ್ಲ ಹಾಗೂ ಪ್ರಸಾದವನ್ನು ಸ್ವೀಕರಿಸಲಿಲ್ಲ ಎಂದು ದೇವಾಲಯದ ಅರ್ಚಕ ತಿಳಿಸಿದ್ದಾರೆ.
ವಿಷ್ಣುಪಾದ್ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶಂಭುಲಾಲ್ ವಿಠ್ಠಲ್ ಈ ಬಗ್ಗೆ ತಿಳಿಸಿ, ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಚಿವರು ಪ್ರಸಾದವನ್ನು ಸ್ವೀಕರಿಸದೇ ಹೋಗಿದ್ದು, ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: 400 ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನ್ನಿಸಿದ ಚಿರತೆ ಸೆರೆಗೆ ಹೈ ಡೆಫೆನೆಶನ್ ಡ್ರೋನ್ ಬಳಕೆ
Advertisement
Advertisement
ಸಚಿವರು ದೇವಾಲಯಕ್ಕೆ ಭೇಟಿ ನೀಡಿದ್ದರೂ ಅವರ ಉದ್ದೇಶ ಬೇರೆಯೇ ಆಗಿತ್ತು ಎಂಬುದು ಸ್ಪಷ್ಟವಾಗಿ ತೋರುತ್ತದೆ. ಈ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಶಂಭುಲಾಲ್ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಶಿಕ್ಷಕರ ಪರೀಕ್ಷೆಯಲ್ಲಿ ಅಕ್ರಮ ಆಗಿಲ್ಲ: ಬಿ.ಸಿ ನಾಗೇಶ್