ದೂರು ನೀಡಿದ್ದಕ್ಕೆ ಅಪ್ರಾಪ್ತೆಯ ಮೇಲೆ ಗ್ಯಾಂಗ್‍ರೇಪ್- ಮೂವರು ಅರೆಸ್ಟ್

Public TV
1 Min Read
1280px Gambian classroom

ಪಾಟ್ನಾ: ಅಪ್ರಾಪ್ತ ಬಾಲಕಿಯ ಮೇಲೆ ಐವರು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಚಾರಗೈದಿರುವ ಘಟನೆ ಬಿಹಾರದ ಜಮುಯಿ ಜಿಲ್ಲೆಯ ಕೋಚಿಂಗ್ ಸೆಂಟರ್‌ನಲ್ಲಿ ನಡೆದಿದೆ.

ಬಾಲಕಿಯು ಕೋಚಿಂಗ್ ಕ್ಲಾಸ್‍ನಿಂದ ಹಿಂತಿರುಗುತ್ತಿದ್ದಾಗ ಆರೋಪಿಗಳು ಬಾಲಕಿಯನ್ನು ಬಲವಂತವಾಗಿ ಸಮೀಪದ ಕಾಡಿಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಪ್ರಕರಣದಲ್ಲಿ ಇದುವರೆಗೆ ಮೂವರನ್ನು ಬಂಧಿಸಲಾಗಿದೆ. ಆ ಐವರು ಆರೋಪಿಗಳಲ್ಲಿ ವಿದ್ಯಾರ್ಥಿಯೋರ್ವ ಅದೇ ಕೋಚಿಂಗ್ ಸೆಂಟರ್‌ನಲ್ಲಿ ಓದುತ್ತಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮರ್ಯಾದಾ ಹತ್ಯೆ – ತಹಶೀಲ್ದಾರ್ ಕಚೇರಿಯಲ್ಲೇ ಚಾಕುವಿನಿಂದ ಇರಿದು ವ್ಯಕ್ತಿ ಬರ್ಬರ ಕೊಲೆ

arrested new

ಅವನು ಈ ಹಿಂದೆ ಆ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಈ ಬಗ್ಗೆ ಕೋಚಿಂಗ್ ಸೆಂಟರ್‌ನ ಮುಖ್ಯಸ್ಥರಿಗೆ ಬಾಲಕಿಯ ಕುಟುಂಬದವರು ದೂರು ನೀಡಿದ್ದರು. ಈ ಹಿನ್ನೆಲೆ ಇನ್ನು ಮುಂದೆ ಬಾಲಕಿಗೆ ತೊಂದರೆಯಾಗುವುದಿಲ್ಲ ಅಂತಾ ಮುಖ್ಯಸ್ಥ ಭರವಸೆ ನೀಡಿದ್ದರು. ನಂತರ ಕುಟುಂಬವು ಅದೇ ಕೋಚಿಂಗ್ ಸೆಂಟರ್‌ಗೆ ಬಾಲಕಿಯನ್ನು ಕಳುಹಿಸಲು ನಿರ್ಧರಿಸಿದರು. ದೂರಿನ ಮೇರೆಗೆ ಕೋಪಗೊಂಡ ಆರೋಪಿ ಮತ್ತು ಅವನ ಸ್ನೇಹಿತರು ಬಾಲಕಿಯನ್ನು ಸಾಮೂಹಿಕ ಅತ್ಯಾಚಾರಕ್ಕೆ ಯೋಜನೆ ರೂಪಿಸಿದ್ದರು. ಇದನ್ನೂ ಓದಿ: ಕ್ಷುಲ್ಲಕ ವಿಚಾರಕ್ಕೆ ಪತ್ನಿಯ ಕತ್ತು ಹಿಸುಕಿ ಕೊಲೆ?

Police Jeep

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯಕೀಯ ವರದಿಯ ನಂತರ ಸಾಮೂಹಿಕ ಅತ್ಯಾಚಾರ ನಡೆದಿರುವುದು ದೃಢಪಡಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *