LatestLeading NewsMain PostNational

ಬಿಹಾರದಲ್ಲಿ ಆರ್‌ಜೆಡಿ-ಕಾಂಗ್ರೆಸ್‌ನೊಂದಿಗೆ ನಿತೀಶ್ ಹೊಸ ಸರ್ಕಾರ ಸ್ಥಾಪನೆ

- ಕೈಕೊಟ್ಟ ಸಿಎಂ ವಿರುದ್ಧ ಹರಿಹಾಯ್ದ ಬಿಜೆಪಿ

ಪಾಟ್ನಾ: ದೇಶದ ರಾಜಕೀಯದಲ್ಲಿ ಮಹತ್ವದ ಸ್ಥಾನ ಪಡೆದಿರುವ ಬಿಹಾರದಲ್ಲಿ ರಾಜಕೀಯ ಕ್ಷಿಪ್ರ ಬೆಳವಣಿಗೆಗಳು ನಡೆದಿವೆ. ಮೂರು ವರ್ಷಗಳಿಂದ ಬಿಜೆಪಿ ಜೊತೆಗೆ ಮೈತ್ರಿ ಸರ್ಕಾರ ನಡೆಸುತ್ತಿದ್ದ ಸಿಎಂ ನಿತೀಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿ ಜೊತೆಗಿನ ಮೈತ್ರಿಯನ್ನು ಕಡಿದುಕೊಂಡಿದ್ದಾರೆ. ಆರ್‌ಜೆಡಿ-ಜೆಡಿಯು-ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲಿದ್ದು, ಬಿಹಾರದಲ್ಲಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.

ಸಿಎಂ ನಿತೀಶ್ ಜೊತೆಗೆ ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಳೆದ ಕೆಲ ದಿನಗಳಿಂದ ಬಿಜೆಪಿ ಜೊತೆ ಅಂತರ ಕಾಯ್ದುಕೊಂಡು, ಆರ್‌ಜೆಡಿ-ಕಾಂಗ್ರೆಸ್ ಸಂಪರ್ಕದಲ್ಲಿದ್ದ ನಿತೀಶ್ ಕುಮಾರ್ ಇಂದು ಬೆಳಗ್ಗೆ ಶಾಸಕರ ಸಭೆ ನಡೆಸಿ ಬಿಜೆಪಿ ಮೈತ್ರಿಗೆ ಟಾಟಾ ಹೇಳುತ್ತಿರುವ ಬಗ್ಗೆ, ಆರ್‌ಜೆಡಿ-ಕಾಂಗ್ರೆಸ್ ಜೊತೆಗೂಡಿ ಸರ್ಕಾರ ರಚನೆ ಮಾಡುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಂಡರು.

ನಿತೀಶ್ ಕುಮಾರ್ ನಿರ್ಧಾರಕ್ಕೆ ಇಡೀ ಸಭೆ ಸರ್ವಾನುಮತದಿಂದ ಬೆಂಬಲ ಸೂಚಿಸಿತು. ಸಂಜೆ ರಾಜ್ಯಪಾಲ ಫಾಗು ಚೌಹಾಣ್ ಭೇಟಿಯಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ಸ್ವಲ್ಪ ಹೊತ್ತಿನ ನಂತ್ರ ಆರ್‌ಜೆಡಿ-ಕಾಂಗ್ರೆಸ್ ಸೇರಿ ಇತರೆ ಪಕ್ಷಗಳೊಂದಿಗೆ ಜೊತೆಗೂಡಿ ಮಹಾಘಟಬಂಧನ್ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ರು. 164 ಶಾಸಕರ ಬೆಂಬಲ ಪತ್ರ ಕೊಟ್ಟ ನಿತೀಶ್ ಕುಮಾರ್, ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದಿದ್ದನ್ನು ಸಮರ್ಥಿಸಿಕೊಂಡಿದ್ದಾರೆ. ಪಕ್ಷ ಒಡೆಯಲು ಬಿಜೆಪಿ ಮುಂದಾಗಿದ್ದರಿಂದ ಮೈತ್ರಿಕೂಟದಿಂದ ಹೊರಬರಬೇಕಾಯಿತು ಅಂತಾ ನಿತೀಶ್ ಹೇಳಿದ್ದಾರೆ.

ಈ ಬೆಳವಣಿಗೆ ಬಿಜೆಪಿಗೆ ದೊಡ್ಡ ಹಿನ್ನಡೆ ಎಂದೇ ಪರಿಗಣಿಸಲಾಗುತ್ತಿದೆ. ಕೈಕೊಟ್ಟ ನಿತೀಶ್ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿದೆ. ನಿತೀಶ್ ಆರೋಪಗಳನ್ನು ತಳ್ಳಿ ಹಾಕಿದೆ. ನಿತೀಶ್ ಅವರನ್ನ ನಾವು ಕೇಂದ್ರ ಸಚಿವರನ್ನಾಗಿ ಮಾಡಿದ್ವಿ, ಮುಖ್ಯಮಂತ್ರಿ ಮಾಡಿದ್ವಿ. ಆದ್ರೂ ನಿತೀಶ್ ನಮಗೆ ನಂಬಿಕೆ ದ್ರೋಹ ಎಸಗಿದ್ದಾರೆ. ಜನಾದೇಶಕ್ಕೆ ನಿತೀಶ್ ಗೌರವ ನೀಡಿಲ್ಲ ಎಂದು ಬಿಜೆಪಿ ಹರಿಹಾಯ್ದಿದೆ.

Live Tv

Leave a Reply

Your email address will not be published.

Back to top button