ಪಾಟ್ನಾ: ಬಿಹಾರ ವಿಧಾನಸಭೆಯಲ್ಲಿ ʼಮಹಾಘಟಬಂಧನʼ ಮೈತ್ರಿ ಸರ್ಕಾರ ವಿಶ್ವಾಸಮತ ಯಾಚಿಸುವುದಕ್ಕೂ ಮುನ್ನ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಮಹಾಘಟಬಂಧನ ಮೈತ್ರಿಕೂಟ ತಮ್ಮ ವಿರುದ್ಧ ಮಂಡಿಸಿದ ಅವಿಶ್ವಾಸ ನಿರ್ಣಯದ ಬಗ್ಗೆ ದುಃಖ ವ್ಯಕ್ತಪಡಿಸಿದರು.
ಸಿನ್ಹಾ ಅವರು ಅಸೆಂಬ್ಲಿಯಿಂದ ತರಾತುರಿಯಿಂದ ನಿರ್ಗಮಿಸಿದರು. ಬಿಜೆಪಿಯ ಬಹುತೇಕ ಶಾಸಕರು ಕೇಸರಿ ಸ್ಕಾರ್ಫ್ ಧರಿಸಿ ‘ಭಾರತ್ ಮಾತಾ ಕಿ ಜೈ’ ಮತ್ತು ‘ಜೈ ಶ್ರೀರಾಮ್’ ಎಂದು ಘೋಷಣೆಗಳನ್ನು ಕೂಗಿದರು. ಇದನ್ನೂ ಓದಿ: ಬಹುಮತ ಸಾಬೀತಿಗೆ ಮುಂದಾದ ನಿತೀಶ್ ಕುಮಾರ್ – RJD ಪಕ್ಷದ ಇಬ್ಬರು ಹಿರಿಯ ನಾಯಕರ ಮನೆ ಮೇಲೆ CBI ದಾಳಿ
ಇದಕ್ಕೂ ಮುನ್ನ ಆಡಳಿತಾರೂಢ ಮೈತ್ರಿಕೂಟವು ಸಿನ್ಹಾ ವಿರುದ್ಧ ಅವಿಶ್ವಾಸ ನಿಲುವಳಿ ಮಂಡಿಸಲು ಮನವಿ ಸಲ್ಲಿಸಿತ್ತು. ಇದಕ್ಕೆ ಉತ್ತರಿಸಿದ ಸಿನ್ಹಾ, ಅವಿಶ್ವಾಸ ನಿಲುವಳಿ ಸ್ಪಷ್ಟವಾಗಿಲ್ಲ. ಅವಿಶ್ವಾಸ ನಿಲುವಳಿ ಮಂಡನೆಗಾಗಿ 9 ಮಂದಿ ಬರೆದ ಪತ್ರಗಳ ಪೈಕಿ 8 ಪತ್ರಗಳು ನಿಯಮಕ್ಕೆ ಅನುಗುಣವಾಗಿಲ್ಲ ಎಂದು ಹೇಳಿದರು. ನಂತರ ಭಾಷಣ ಮಾಡಿದ ಅವರು ರಾಜೀನಾಮೆ ನಿರ್ಧಾರ ಪ್ರಕಟಿಸಿದರು.
ಈಚೆಗೆ ಬಿಜೆಪಿ ಜತೆಗಿನ ಮೈತ್ರಿಯಿಂದ ಜೆಡಿ(ಯು) ಹೊರಬಂದಿತು. ನಂತರ ಆರ್‌ಜೆಡಿ (ರಾಷ್ಟ್ರೀಯ ಜನತಾ ದಳ), ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಜತೆ ಸೇರಿ ಮಹಾ ಮೈತ್ರಿಕೂಟ ಸರ್ಕಾರ ರಚಿಸಿತ್ತು. ಇದನ್ನೂ ಓದಿ: ನಾಪತ್ತೆ ಆಗಿದ್ದ ಬಿಜೆಪಿ ಮುಖಂಡ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ