ಪಾಟ್ನಾ: ಬಿಹಾರದಲ್ಲಿ (Bihar) ಕಳೆದ 15 ದಿನಗಳಲ್ಲಿ 10 ಸೇತುವೆಗಳು ಕುಸಿದು ಬಿದ್ದ (Bridges Fall) ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಇಲಾಖೆಯ 16 ಎಂಜಿನಿಯರ್‌ಗಳನ್ನು ಅಮಾನತುಗೊಳಿಸಲಾಗಿದೆ. ಈ ಕುರಿತು ಜಲಸಂಪನ್ಮೂಲ ಇಲಾಖೆ (Resources Department) ಪ್ರಕಟಣೆಯಲ್ಲಿ ತಿಳಿಸಿದೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಬಿಹಾರ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಚೈತನ್ಯ ಪ್ರಸಾದ್, ರಾಜ್ಯ ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಅದಕ್ಕಾಗಿ 16 ಎಂಜಿನಿಯರುಗಳನ್ನ (Engineers) ಅಮಾನತುಗೊಳಿಸಲಾಗಿದೆ. ಸೇತುವೆ ನಿರ್ಮಾಣದ ಹೊಣೆ ಹೊತ್ತಿರುವ ಗುತ್ತಿಗೆದಾರರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ. ಇದನ್ನೂ ಓದಿ: ಅಮರನಾಥ ಯಾತ್ರೆಯ ಬಳಿಕ ಜಮ್ಮು ಕಾಶ್ಮೀರದಲ್ಲಿ ಚುನಾವಣೆ – ತಯಾರಿ ಆರಂಭಿಸಿದ ಬಿಜೆಪಿ
ಗುರುವಾರ (ಜು.4) ಸರನ್ ಜಿಲ್ಲೆಯಲ್ಲಿ ನಿರ್ಮಿಸಲಾಗಿದ್ದ ಸೇತುವೆಯೊಂದು ಕುಸಿದು ಬಿದ್ದಿದೆ. ಇದು 24 ಗಂಟೆಯಲ್ಲಿ ಜಿಲ್ಲೆಯೊಂದರಲ್ಲಿ ಕುಸಿದು ಬಿದ್ದ 3ನೇ ಸೇತುವೆ ಆಗಿದೆ. ಅಲ್ಲದೇ ಬಿಹಾರ ರಾಜ್ಯದಲ್ಲಿ ಕುಸಿದ 10ನೇ ಸೇತುವೆಯೂ ಆಗಿದೆ. ಈವರೆಗೆ ಸಿವಾನ್, ಸರನ್, ಮಧುಬನಿ, ಅರಾರಿಯಾ, ಪೂರ್ವ ಚಂಪಾರಣ್ ಮತ್ತು ಕಿಶನ್‌ಗಂಜ್ ಜಿಲ್ಲೆಗಳಲ್ಲಿ ಒಟ್ಟು 10 ಸೇತುವೆಗಳು ಕುಸಿದಿವೆ. ಇದನ್ನೂ ಓದಿ: ಜಾಮೀನು ಕೋರಿ ಕೇಜ್ರಿವಾಲ್ ಅರ್ಜಿ- ಸಿಬಿಐಗೆ ನೋಟಿಸ್ ನೀಡಿದ ದೆಹಲಿ ಹೈಕೋರ್ಟ್
ಹಳೇ ಸೇತುವೆಗಳ ಸಮೀಕ್ಷೆಗೆ ಸೂಚನೆ:
ಬುಧವಾರ (ಜು.3) ನಡೆದಿದ್ದ ಪರಿಶೀಲನಾ ಸಭೆಯ ನಂತರ ಮುಖ್ಯಮಂತ್ರಿ ನಿತೀಶ್ ಕುಮಾರ್, ಎಲ್ಲಾ ಹಳೆಯ ಸೇತುವೆಗಳ ಸಮೀಕ್ಷೆ ನಡೆಸುವಂತೆ ಮತ್ತು ತಕ್ಷಣದ ದುರಸ್ತಿ ಅಗತ್ಯವಿರುವ ಸೇತುವೆಗಳನ್ನು ಗುರುತಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಬಗ್ಗೆ ಸಮಗ್ರವಾಗಿ ತನಿಖೆ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ತಿಳಿಸಿದ್ದಾರೆ. ಇದನ್ನೂ ಓದಿ: ಇಷ್ಟಪಟ್ಟವನನ್ನು ಮದುವೆಯಾಗಿದ್ದಕ್ಕೆ ಕುಟುಂಬಸ್ಥರಿಂದ್ಲೇ ಯುವತಿಯ ಬರ್ಬರ ಹತ್ಯೆ