ಪಾಟ್ನಾ: ಪ್ರಾಣಿ ಪರೀಕ್ಷಿಸಲು ಕರೆಸಿದ್ದ ಪಶುವೈದ್ಯನನ್ನು ಅಪಹರಿಸಿ ಬಲವಂತವಾಗಿ ಮದುವೆ ಮಾಡಿಸಿದ ಘಟನೆ ಬಿಹಾರದ ಬೇಗುಸರಾಯ್‍ನಲ್ಲಿ ನಡೆದಿದೆ.
ಸಂತ್ರಸ್ತನ ತಂದೆ ಈ ಕುರಿತು ಮಾತನಾಡಿದ್ದು, ನನ್ನ ಮಗನನ್ನು 12 ಗಂಟೆ ರಾತ್ರಿಗೆ ಪ್ರಾಣಿಯೊಂದಕ್ಕೆ ಆರೋಗ್ಯ ಸರಿಯಿಲ್ಲ ಎಂದು ಕರೆಸಿಕೊಂಡಿದ್ದರು. ಈ ವೇಳೆ ಮೂವರು ಬಂದು ನನ್ನ ಮಗನನ್ನು ಅಪಹರಿಸಿಕೊಂಡು ಹೋಗಿದ್ದಾರೆ. ವಿಷಯ ತಿಳಿದು ನಮಗೆ ಗಾಬರಿಯಾಯಿತು. ಅದಕ್ಕೆ ನಾನು ಪೊಲೀಸರಿಗೆ ದೂರು ಕೊಟ್ಟಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕವಿಶೈಲದಿಂದ ತೀರ್ಥಹಳ್ಳಿವರೆಗೆ ಕಾಂಗ್ರೆಸ್ ಪಾದಯಾತ್ರೆ
Advertisement
Advertisement
ಬೇಗುಸರಾಯ್ ಎಸ್‍ಪಿ ಯೋಗೇಂದ್ರ ಕುಮಾರ್ ಈ ಕುರಿತು ಮಾತನಾಡಿದ್ದು, ಸಂತ್ರಸ್ತನ ತಂದೆ ಅವರೇ ದೂರನ್ನು ಬರೆದು ಪೊಲೀಸ್ ಠಾಣೆಗೆ ಕೊಟ್ಟಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ನಾವು ಎಸ್‍ಎಚ್‍ಒ ಮತ್ತು ಇತರ ಅಧಿಕಾರಿಗಳನ್ನು ಕೇಳಿದ್ದೇವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
Advertisement
Advertisement
ಇದೊಂದು ಪದ್ಧತಿ
ವರನ ಅಪಹರಣ ಅಥವಾ ‘ಪಕದ್ವಾ ವಿವಾಹ’ ಎಂಬುದು ಬಿಹಾರದಲ್ಲಿ ನಡೆಯುವ ಪದ್ಧತಿಯಾಗಿದೆ. ಜಾರ್ಖಂಡ್ ಮತ್ತು ಉತ್ತರ ಪ್ರದೇಶದ ಭಾಗಗಳಲ್ಲಿ ಇದು ಸಾಮಾನ್ಯವಾಗಿದೆ. ಈ ಪದ್ಧತಿಯಲ್ಲಿ ಬ್ರಹ್ಮಚಾರಿಗಳನ್ನು ಅಪಹರಿಸಿ ಬಲವಂತವಾಗಿ ಮದುವೆ ಮಾಡಿಸುತ್ತಾರೆ. ಆರ್ಥಿಕ ಮತ್ತು ಸಾಮಾಜಿಕ ಭದ್ರತೆಯನ್ನು ಹೊಂದಿರುವವರನ್ನು ವಧುವಿನ ಕುಟುಂಬ ಅಪಹರಿಸಿ ಮದುವೆ ಮಾಡಿಸುತ್ತಾರೆ. ಇದನ್ನೂ ಓದಿ: ಸಿಧು ಮೂಸೆ ವಾಲಾ ಹತ್ಯೆ ಪ್ರಕರಣ: ಆರೋಪಿ ಭದ್ರತೆಗೆ ಬುಲೆಟ್ ಪ್ರೂಫ್ ವಾಹನ, 100 ಪೊಲೀಸರು