ಮಂಡ್ಯ: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತಂಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಅಣ್ಣ ಗಂಭೀರವಾಗಿ ಗಾಯಗೊಂಡಿರುವ ಮನಕಲಕುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಿಹಳ್ಳಿ ಬಳಿ ನಡೆದಿದೆ.
ಹುಣಸೂರು ಮೂಲದ 19 ವರ್ಷದ ದಿವ್ಯಶ್ರೀ ಮೃತ ದುರ್ದೈವಿ. ಆಕೆಯ ಅಣ್ಣ 21 ವರ್ಷದ ಯೋಗೇಶ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದೆ.
Advertisement
Advertisement
ದಿವ್ಯಶ್ರೀ ಮತ್ತು ಯೋಗೇಶ್ ಬೈಕಿನಲ್ಲಿ ಮಂಡ್ಯದಿಂದ ಮೈಸೂರು ಕಡೆಗೆ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅತೀ ವೇಗವಾಗಿ ಬಂದು ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸಹೋದರಿ ದಿವ್ಯ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯೋಗೇಶ್ ನನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement
ಘಟನೆ ನಡೆದ ಸ್ಥಳಕ್ಕೆ ಶ್ರೀರಂಗ ಪಟ್ಟಣ ಪೊಲೀಸರು ಬಂದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಅತಿ ವೇಗವೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
Advertisement