– ಓರ್ವನ ಸ್ಥಿತಿ ಚಿಂತಾಜನಕ
ಕಲಬುರಗಿ: ಗಣೇಶನ ಮೂರ್ತಿ (Ganesha Idol) ತರಲು ಹೋಗುತ್ತಿರುವಾಗ ಬೈಕ್ ಅಪಘಾತವಾಗಿ ಸವಾರ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಕಲಬುರಗಿ (Kalaburagi) ನಗರದ ಹೀರಾಪುರ ರಸ್ತೆಯ ಫ್ಲೈ ಓವರ್ ಮೇಲೆ ನಡೆದಿದೆ.
ಕೊಟನೂರು ಬಡಾವಣೆಯ ಪ್ರಶಾಂತ್ ಬಿರಾದರ್ (23) ಮೃತ ಯುವಕ. ಕಳೆದ ರಾತ್ರಿ ಸ್ನೇಹಿತರೊಡನೆ ಗಣೇಶ ಮೂರ್ತಿ ತರಲು ಹೋಗುತ್ತಿದ್ದರು. ಈ ವೇಳೆ ಪಕ್ಕದ ಬೈಕ್ ಟಚ್ ಆಗಿ ಕೆಳಗೆ ಬಿದ್ದು ಇಬ್ಬರು ಸವಾರರ ತಲೆಗೆ ಗಂಭೀರ ಗಾಯವಾಗಿದೆ. ಇದನ್ನೂ ಓದಿ: ಹೆಬ್ಬಾಳ್ಕರ್ ಪುತ್ರನಿಗೆ ಮಹತ್ವದ ಹೊಣೆ – ಗೋವಾ ಚುನಾವಣಾ ಮಾಧ್ಯಮ ಸಂಯೋಜಕರಾಗಿ ನೇಮಕ
ಇಬ್ಬರ ಪೈಕಿ ಪ್ರಶಾಂತ್ ಬಿರಾದರ್ ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಕಲಬುರಗಿ ಸಂಚಾರಿ ಪೊಲೀಸ್ ಠಾಣೆ-1ರಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸ್ಕೂಟರ್ಗೆ ಹಾಲಿನ ಟ್ಯಾಂಕರ್ ಡಿಕ್ಕಿ – ಹಬ್ಬ ಮುಗಿಸಿ ಬೆಂಗ್ಳೂರಿಗೆ ಹೊರಟಿದ್ದ ಮೂವರು ದುರ್ಮರಣ

