ಚಿಕ್ಕಬಳ್ಳಾಪುರ: ಬೈಕ್ (Bike) ಹಾಗೂ ಸೈಕಲ್ (Cycle) ಡಿಕ್ಕಿ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದ(Chikkaballapur) ರಾಷ್ಟ್ರೀಯ ಹೆದ್ದಾರಿ 4ರ ಬಳಿ ನಡೆದಿದೆ.
ಹುನೇಗಲ್ ಗ್ರಾಮದ ಬಳಿ ಹೈವೆಯಲ್ಲಿ ಸೈಕಲ್ಗೆ ಪಲ್ಸರ್ ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಬಾಗೇಪಲ್ಲಿ ಪಟ್ಟಣದ ವಾಲ್ಮೀಕಿ ನಗರದ ನಿವಾಸಿ ಶಮೀರ್ ಬಾಷಾ(34) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನೂ ಸೈಕಲ್ ಸವಾರ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಪಘಾತದಲ್ಲಿ ಸೈಕಲ್ ನಜ್ಜುಗುಜ್ಜಾಗಿದ್ದು ಬೈಕ್ನ ಮುಂಭಾಗವೂ ಜಖಂಗೊಂಡಿದೆ.
ಸೈಕಲ್ಗೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಸೈಕಲ್ ಫುಟ್ಪಾತ್ ಮೇಲೆ ಬಿದ್ದಿದ್ದು, ಬೈಕ್ ಸವಾರ ಬ್ಯಾಲೆನ್ಸ್ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ಘಟನೆಯಲ್ಲಿ ಶಮೀರ್ ಬಾಷಾ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತ ಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ವಿದ್ಯಾರ್ಥಿಗಳಲ್ಲಿ ಗಣಿತ ಕಲಿಕೆ ಉತ್ತೇಜಿಸಲು ಬಹುಮಾನ ಘೋಷಿಸಿದ ಜೋಶಿ
ಚಿಕ್ಕಬಳ್ಳಾಪುರ ಗ್ರಾಮಾಂತರ ಪಿಎಸ್ಐ ಪ್ರದೀಪ್ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಸೈಕಲ್ ಸವಾರ ಸ್ಥಳೀಯ ಗ್ರಾಮದ ಪಂಚರ್ ಶಾಪ್ ಮೆಕ್ಯಾನಿಕ್ ಎಂದು ತಿಳಿದುಬಂದಿದ್ದು, ಆತನನ್ನು ಚಿಕ್ಕಬಳ್ಳಾಪುರ ನಗರದ ಆಸ್ಪತ್ರೆಗೆ ದಾಖಲಾಗಿದ್ದಾನೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಲೀಕ್ ಪ್ರಕರಣ – ನಾಳೆಯಿಂದ 2 ದಿನ ವಿಶ್ವವಿದ್ಯಾಲಯ ಬಂದ್