Haveri
ಬೈಕಿಗೆ ಬೊಲೆರೋ ಡಿಕ್ಕಿ – 8 ವರ್ಷದ ಬಾಲಕ ಸಾವು, ತಂದೆ ಗಂಭೀರ

ಹಾವೇರಿ: ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿದ್ದ ಬಾಲಕ ಸಾವನ್ನಪ್ಪಿದ್ದು, ತಂದೆಗೆ ಗಂಭೀರ ಗಾಯವಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕದರಮಂಡಲಗಿ ಗ್ರಾಮದ ಬಳಿ ಘಟನೆ ನಡೆದಿದ್ದು. ಮೃತ ಬಾಲಕನನ್ನು ದಿಲೀಪ್ ಪೂಜಾರ(8) ಎಂದು ಗುರುತಿಸಲಾಗಿದೆ. ದಿಲೀಪ್ ತಂದೆ ಈರಪ್ಪ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುವನ್ನು ರಾಣೇಬೆನ್ನೂರು ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಅಪಘಾತ ಸಂಭವಿಸುತ್ತಿದ್ದಂತೆ ಬೊಲೆರೋ ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಬ್ಯಾಡಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
