ಮೈಸೂರು: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಬನ್ನಹಳ್ಳಿಹುಂಡಿ ಗ್ರಾಮದ ಬಳಿ ಘಟನೆ ನಡೆದಿದ್ದು, ನಂಜನಗೂಡು ತಾಲೂಕಿನ ಹದಿನಾರು ಗ್ರಾಮದ ನಿವಾಸಿ ದಿನೇಶ್ (23) ಮೃತ ದುರ್ದೈವಿ. ಅಪಘಾತದ ತೀವ್ರತೆಗೆ ವ್ಯಕ್ತಿಯ ರುಂಡ ಛಿದ್ರವಾಗಿದೆ.
ಘಟನಾ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.