ಚಿಕ್ಕಬಳ್ಳಾಪುರ: ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ ಮಹಿಳೆಗೆ ಬೈಕ್ (Bike) ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ (Chikkaballapur) ನಗರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಗೌರಿಬಿದನೂರು ಮಾರ್ಗದ ನಿಮ್ಮಾಕಲಕುಂಟೆ ಬಳಿ ಮನೆಗೆ ಹೋಗಲು ರಸ್ತೆ ದಾಟುತ್ತಿದ್ದ ಮಹಿಳೆ ನಾರಾಯಣಮ್ಮಗೆ (50) ಬೈಕ್ ಡಿಕ್ಕಿ ಹೊಡೆದಿದೆ. ತಲೆಗೆ ಪೆಟ್ಟಾಗಿ ಕುಸಿದು ಬಿದ್ದಿದ್ದ ಮಹಿಳೆಯನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಮನೆಯಲ್ಲಿದ್ದ ಗೃಹಿಣಿ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಶಂಕೆ
ಘಟನೆ ನಂತರ ಬೈಕ್ ಸವಾರ ಬೈಕ್ ಸಮೇತ ಎಸ್ಕೇಪ್ ಆಗಿದ್ದಾನೆ. ಚಿಕ್ಕಬಳ್ಳಾಪುರ ನಗರ ಪೊಲೀಸರು ಬೈಕ್ ನಂಬರ್ ಆಧರಿಸಿ ಸವಾರನಿಗಾಗಿ ಹುಡುಕಾಟ ಶುರು ಮಾಡಿದ್ದಾರೆ. ಈ ಬಗ್ಗೆ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರು ಇತಿಹಾಸದಲ್ಲೇ ಮೊದಲ ಬಾರಿ ಕೆರೆ ಸೀಜ್