ಕೋಲಾರ: ಓವರ್‌ಟೇಕ್ (Over Take) ಮಾಡಲು ಹೋಗಿ ಬೈಕ್, ಕಾರಿಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದು, ಹಿಂಬದಿ ಸವಾರನಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ (KGF) ತಾಲೂಕಿನ ಕೊತ್ತೂರು ಗ್ರಾಮದ ಬಳಿ ಈ ಘಟನೆ ನಡೆದಿದೆ. ಮೃತ ಬೈಕ್ ಸವಾರನನ್ನು ಕೋಲಾರದ ಗಾಂಧಿನಗರ ನಿವಾಸಿ ಚಂದ್ರಶೇಖರ್ (50) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಜನರನ್ನ ಲೂಟಿ ಮಾಡುವ ಸರ್ಕಾರದ ವಿರುದ್ಧ ನಮ್ಮ ಹೋರಾಟ ನಿರಂತರ: ಶೋಭಾ ಕರಂದ್ಲಾಜೆ
ಘಟನೆಯಲ್ಲಿ ಮತ್ತೊಬ್ಬ ಬೈಕ್ ಸವಾರ ಸುರೇಶ್‌ಗೆ ಕಾಲು ಮುರಿದಿದ್ದು, ಸಣ್ಣ ಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅತಿ ವೇಗವಾಗಿ ಓವರ್‌ಟೇಕ್ ಮಾಡಲು ಹೋಗಿ ಬೈಕ್ ಕಾರಿಗೆ ಡಿಕ್ಕಿಯಾಗಿದೆ. ಘಟನೆ ಬಳಿಕ ಕಾರನ್ನು ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಏನಿದು ಘಿಬ್ಲಿ? ದಿಢೀರ್ ಫೇಮಸ್ ಆಗಿದ್ದು ಹೇಗೆ? ಮೂಲ ಮಾಲೀಕನ ಸಂಪತ್ತು ಎಷ್ಟಿದೆ?