ಮಂಡ್ಯ: ರಸ್ತೆ ದಾಟುವಾಗ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ಉಪತಹಶೀಲ್ದಾರ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ (Malavalli) ಪಟ್ಟಣದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಬೀರೂರು ಮೂಲದ ಎನ್.ಟಿ.ಸುನೀಲ್ (55) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಜೆಇಇ ಪರೀಕ್ಷೆ ಪಾಸಾಗದ್ದಕ್ಕೆ 7ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ – ಡೆತ್‌ನೋಟ್‌ನಲ್ಲಿ ಏನಿತ್ತು?
ಮಳವಳ್ಳಿ ತಾಲೂಕಿನ ಹಲಗೂರಿನಲ್ಲಿ ಉಪ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅ.19ರಂದು ರಾತ್ರಿ 9:30ಕ್ಕೆ ಕೊಳ್ಳೇಗಾಲ ರಸ್ತೆಯ ಸಾರ್ವಜನಿಕ ಆಸ್ಪತ್ರೆಯ ಬಳಿ ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದಿತ್ತು.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ (Mysuru Private Hospital) ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು (ಅ.26) ಮೃತಪಟ್ಟಿದ್ದಾರೆ. ಸದ್ಯ ಮಳವಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ, ಹಣ ಇರುವ ಬ್ಯಾಗ್ ಹಿಂತಿರುಗಿಸಿ ಮಾನವೀಯತೆ ಮೆರೆದ ನಿರ್ವಾಹಕಿ